HOME » NEWS » State » REPUBLIC DAY 2021 KARNATAKA CM BS YEDIYURAPPA INAUGURATING REPUBLIC DAY IN BENGALURU TODAY SCT

Republic Day 2021: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವದ ಸಂಭ್ರಮ; ಭದ್ರತೆಗೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

Republic Day 2021 | ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಭದ್ರತೆಗೆ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.

news18-kannada
Updated:January 26, 2021, 9:06 AM IST
Republic Day 2021: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವದ ಸಂಭ್ರಮ; ಭದ್ರತೆಗೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜ. 26): ಬೆಂಗಳೂರಿನಲ್ಲಿ ಇಂದು 72ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಇಂದು ರೈತರಿಂದ ಪ್ರತಿಭಟನೆ ಕೂಡ ಇರುವುದರಿಂದ ಬಿಗಿ ಬಂದೋಬಸ್ತ್ ವಹಿಸಲಾಗಿದೆ. ಪೊಲೀಸ್ ಸರ್ಪಗಾವಲಿನಲ್ಲಿ ಇಂದು ಗಣರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಈಗಾಗಲೇ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಸಾಂಪ್ರದಾಯಿಕ ಗುಜರಾತಿ ಪೇಟ ತೊಟ್ಟುಬಂದ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. 

ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಗಣರಾಜ್ಯೋತ್ಸವ ಆಚರಣೆ‌ ಮಾಡಲು ಸರ್ಕಾರ ನಿರ್ಧರಿಸಿದೆ. 500 ಜನರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಪ್ರವೇಶ ನೀಡಲಾಗುವುದು. ಮಾಣಿಕ್ ಷಾ ಮೈದಾನದ ಸುತ್ತ 70ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ಕೊರೊನಾ ಮಾರ್ಗಸೂಚಿ ಅಡಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು‌ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. 21 ವಿವಿಧ ತುಕಡಿಗಳಿಂದ ಪಥ ಸಂಚಲನ ಏರ್ಪಡಿಸಲಾಗಿದೆ.

ಇದನ್ನೂ ಓದಿ: Farmers Protest | ಬೆಂಗಳೂರಿನಲ್ಲಿ ಆರು ಕಡೆಯಿಂದ ಇಂದು ರೈತರ ಮೆರವಣಿಗೆ; ಟ್ರಾಕ್ಟರ್ ತಡೆಯಲು ಪೊಲೀಸ್ ಮಾಸ್ಟರ್ ಪ್ಲಾನ್

ಇಂದು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಭದ್ರತೆಗೆ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 7 ಡಿಸಿಪಿ, 16 ಎಸಿಪಿ ಸೇರಿದಂತೆ 1 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 12 ಕೆಎಸ್​ಆರ್​ಪಿ, 9 ಸಿಎಆರ್ ತುಕಡಿಗಳಿರಲಿವೆ.

ಪಥಸಂಚಲನದಲ್ಲಿ 16 ಪೊಲೀಸ್ ತುಕಡಿಗಳು ಭಾಗಿಯಾಗಲಿವೆ. ಹೊಂಗಾರ್ಡ್ಸ್, ಟ್ರಾಫಿಕ್ ವಾರ್ಡನ್ಸ್, ಅರೆಸೇನಾ ಪಡೆ ಸೇರಿದಂತೆ ಭದ್ರತೆಯಲ್ಲಿ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ ಕ್ಷಿಪ್ರ ಕಾರ್ಯಾಚರಣಾ ಪಡೆ, ಡಿ-ಸ್ವಾಟ್, ಆರ್ ಐ ವಿ ನಿಯೋಜನೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ಹಾಗೂ ಆ್ಯಂಬುಲೆನ್ಸ್ ಸಹ ಜಮಾವಣೆಯಾಗಿದೆ. ಮೈದಾನದ ಬಳಿ ಗರುಡ ಪಡೆ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ವೇಳೆ ಮಫ್ತಿಯಲ್ಲೂ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ.
Published by: Sushma Chakre
First published: January 26, 2021, 9:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories