HOME » NEWS » State » REPUBLIC DAY 2021 KARNATAKA GOVERNOR VAJUBHAI VALA PRAISES CM BS YEDIYURAPPA OVER COVID 19 CONTROL ACTIONS SCT

Republic Day 2021: ಕೋವಿಡ್ ಹೋರಾಟದಲ್ಲಿ ಕರ್ನಾಟಕ ಇಡೀ ದೇಶಕ್ಕೇ ಮಾದರಿಯಾಗಿದೆ; ರಾಜ್ಯಪಾಲ ವಜುಭಾಯಿ ವಾಲಾ

Republic Day 2021: ಕೋವಿಡ್ ವಿರುದ್ದದ ಹೋರಾಟದಲ್ಲಿ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಕೊವೀಡ್ ನಿರ್ವಹಣೆ ಕ್ರಮಗಳು ಉತ್ತಮವಾಗಿದ್ದು, ಹಿಂದೆಂದೂ ಕಾಣದ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ  ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.

news18-kannada
Updated:January 26, 2021, 9:53 AM IST
Republic Day 2021: ಕೋವಿಡ್ ಹೋರಾಟದಲ್ಲಿ ಕರ್ನಾಟಕ ಇಡೀ ದೇಶಕ್ಕೇ ಮಾದರಿಯಾಗಿದೆ; ರಾಜ್ಯಪಾಲ ವಜುಭಾಯಿ ವಾಲಾ
ರಾಜ್ಯಪಾಲ ವಜುಭಾಯಿ ವಾಲಾ
  • Share this:
ಬೆಂಗಳೂರು (ಜ. 26): 2020ರಲ್ಲಿ ಹಿಂದೆಂದೂ ಕಂಡರಿಯದ ಕೊವೀಡ್ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ ನಾವು ನವ ಚೈತನ್ಯ ಮತ್ತು ಆಶೋತ್ತರಗಳೊಂದಿಗೆ ಹೊಸ ವರ್ಷಕ್ಕೆ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದ ಜನತೆಯೊಂದಿಗೆ ಕರ್ನಾಟಕ ಸರ್ಕಾರ ಕೊವೀಡ್ ಅಲೆಯನ್ನು ತಗ್ಗಿಸುವಲ್ಲಿ ಯಶಸ್ವಿಯಾಗಿದೆ. ಕೋವಿಡ್ ವಿರುದ್ದದ ಹೋರಾಟದಲ್ಲಿ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಕೊವೀಡ್ ನಿರ್ವಹಣೆ ಕ್ರಮಗಳು ಉತ್ತಮವಾಗಿದ್ದು, ಹಿಂದೆಂದೂ ಕಾಣದ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ  ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.

ಸಾಂಪ್ರದಾಯಿಕ ಗುಜರಾತಿ ಪೇಟ ಧರಿಸಿ, ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವದ ಸಮಾರಂಭವನ್ನು ನಾನು ಅರ್ಪಿಸುತ್ತೇನೆ. ಕೊರೋನಾ ಎಂಬ ಶತ್ರುವಿನ ವಿರುದ್ಧ ಪಡೆದ ಜಯ ಇದಾಗಿದೆ. ಈ ಬಿಕ್ಕಟ್ಟಿನ ಅವಕಾಶವನ್ನು ನಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲ ಸೌಕರ್ಯ ಹಾಗೂ ಪಿಪಿಇ ಕಿಟ್ ವೆಂಟಿಲೇಟರ್, ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ‌ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆಯಾಗಿರುತ್ತದೆ ಎಂದು ಹೇಳಿದ್ದಾರೆ.

ಭಾರತ ಲಸಿಕೆ ಉತ್ಪಾದಿಸುತ್ತದೆ. ಈ ಲಸಿಕೆಗಳನ್ನು ವಿದೇಶಗಳಿಗೂ ಸಹ ರಪ್ತು ಮಾಡುತ್ತಿರುವುದು ಗಮನಾರ್ಹ. ಸಮರ್ಥ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಜನವರಿ 16ರಂದು ಲಸಿಕಾ ಅಭಿಯಾನ ಆರಂಭಿಸಿದರು. ನಾವು ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಪ್ರತಿಯೊಬ್ಬರಿಗೂ ಲಸಿಕೆ ತಲುಪಲು ಕ್ರಮ ವಹಿಸಲಾಗಿದೆ. ಕೊರೋನಾ ನಿರ್ವಹಣೆಗೆ ಶ್ರಮಿಸಿದವರು ಹೀರೋಗಳಾಗಿರುತ್ತಾರೆ. ಅವರಿಗೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಪ್ರವಾಹ ನಿರ್ವಹಣೆ ಶ್ರಮಿಸಿದವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಕೃಷಿ ವಲಯದಲ್ಲಿ ಬದಲಾವಣೆ ತರಲು, ಜಲಾನಯನದ ಕಡೆ ಗಮನ ಹರಿಸಿದ್ದೇವೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: Republic Day 2021: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವದ ಸಂಭ್ರಮ; ಭದ್ರತೆಗೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಅಭಿವೃದ್ಧಿಗಾಗಿ 170 ಕೋಟಿ ರೂ. ಬಜೆಟ್​ನಲ್ಲಿ ಮೀಸಲಿರಿಸಲಾಗಿದೆ. ಇದರಿಂದ ಭೂ ರಹಿತ ಕಾರ್ಮಿಕರಿಗೆ ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಉದ್ಯೋಗವಕಾಶ ದೊರೆಯಲಿದೆ. ಮೊಬೈಲ್ ಮತ್ತು ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ ಅಳವಡಿಕೆ ಮಾಡಲಾಗಿದೆ. ಇದರಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗೆ ಸಹಾಯಧನ ಸುಗಮವಾಗಿ ದೊರೆಯಲಿದೆ. ಕೋವಿಡ್ ವಿರುದ್ದದ ಹೋರಾಟದಲ್ಲಿ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಕೊವೀಡ್ ನಿರ್ವಹಣೆ ಕ್ರಮಗಳು ಉತ್ತಮವಾಗಿದ್ದು, ಹಿಂದೆಂದೂ ಕಾಣದ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ. ಇದು ಪ್ರಶಂಸನೀಯ ಕಾರ್ಯ ಎಂದು ರಾಜ್ಯಪಾಲ ವಜುಭಾಯಿ ವಾಲಾ ಶ್ಲಾಘಿಸಿದ್ದಾರೆ.

ಈ ಬಾರಿ ಮಹಿಳಾ‌ ಕೇಂದ್ರಿತ ಬಜೆಟ್​ಗೆ ಆದ್ಯತೆ ನೀಡಲಾಗುವುದು. ಅಂಗನವಾಡಿಗಳು, ಸಂತಾನೋತ್ಪತ್ತಿ ಮತ್ತು ಮಹಿಳಾ ಆರೋಗ್ಯ ಕಾರ್ಯಕರ್ತಯರ ಮೂಲಕ ಗರ್ಭಿಣಿ ಮಹಿಳೆಯರಿಗೆ ಸೇವೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರಗಳ ಸಂರಕ್ಷಣೆ ಮಾಡಿದ್ದೇವೆ. ಸ್ಮಾರ್ಟ್​ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಬಿಡದಿಯಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಎಂಬ ಯೋಜನೆ ಮಾಡಿದ್ದೇವೆ. ಪೋಲಿಸ್ ಪಡೆಯಲ್ಲಿ ಮಹಿಳಾ ಮೀಸಲಾತಿ ಶೇಕಡಾ 25ಕ್ಕೆ ಹೆಚ್ಚಳ ಮಾಡಿದ್ದೇವೆ. ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗಿದೆ. ಪೊಲೀಸ್ ಗೃಹ 2025 ಯೋಜನೆಗೆ ಚಾಲನೆ ನೀಡಲಾಗಿದೆ. ಅಗ್ನಿಶಾಮಕ ತುರ್ತು ಸೇವೆ ಇಲಾಖೆಯಲ್ಲಿ 1568 ಹುದ್ದೆ ನೇಮಕಕ್ಕೆ ಪ್ರಾರಂಭ ಮಾಡಲಾಗಿದೆ. ರಾಜ್ಯದಲ್ಲಿ ನಾವೀನ್ಯ ಉತ್ತೇಜನೆಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪ್ರಾರಂಭ ಮಾಡಲಾಗಿದೆ. ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ 2020-25 ಅನುಷ್ಠಾನ ಮಾಡಲಾಗಿದೆ. ಕೊರೊ‌ನಾ ಸಮಯಲ್ಲಿ ಪಿಯುಸಿ, ಎಸ್ಎಸ್ಎಲ್ಸಿ ಎಕ್ಸಾಂ ಯಶಸ್ವಿಯಾಗಿ ನಡೆಸಿದೆ ಎಂದಿದ್ದಾರೆ.ಅರಣ್ಯ ಮತ್ತು ಜೀವ ಪರಿಸರ ಇಲಾಖೆಯಿಂದ ದೇಶದಲ್ಲಿ ಮೊದಲ ಬಾರಿಗೆ ಹಸಿರು ಸೂಚ್ಯಾಂಕ ಸಾಧನ ಕಿಟ್ ಅಭಿಪ್ರಾಯ ಪಡಿಸುತ್ತಿದೆ. ಗ್ರಾಮ ಪಂಚಾಯ್ತಿಗಳಲ್ಲಿ 6544 ಜೀವ ವೈವಿಧ್ಯ ನಿರ್ವಹಣ ಸಮಿತಿ ರಚನೆ ಮಾಡಲಾಗಿದೆ. ಬೆಂಗಳೂರು ನೀರಿನ ಪೂರೈಸಲು ಎತ್ತಿನಹೊಳೆ ಯೋಜನೆಯಿಂದ 2.5 ಟಿಎಂಸಿ ನೀರು ಹಂಚಿಕೆ ಮಾಡಿದೆ. ಟಿಜಿ ಹಳ್ಳಿ ಕುಡಿಯುವ ನೀರಿನ ಸರಬರಾಜು ಯೋಜನೆ ಹಂತ 1 ಕ್ಕೆ ಚಾಲನೆ ನೀಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ಜನರ ಅಭಿವೃದ್ಧಿಗೆ 30 ಸಾವಿರ ಕೋಟಿ ನೀಡಲಾಗಿದೆ ಎಂದಿದ್ದಾರೆ.

ತೋಟಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಸರ್ಕಾರ ಅದನ್ನು ಮತ್ತಷ್ಟು ಸುಧಾರಿಸುತ್ತಿದೆ. ಅದಕ್ಕಾಗಿ ‌701 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೆ, 15,905 ಹೆಕ್ಟೇರ್ ಪ್ರದೇಶವನ್ನು ಆಧುನಿಕ ನೀರಾವರಿ ವ್ಯವಸ್ಥೆಯಡಿ ತರಲಾಗಿದೆ. ಕೋವಿಡ್ ಸಂದರ್ಭದಲ್ಲಿ ತೋಟಗಾರಿಕೆ ಬೆಳೆಗಾರರಿಗೆ ನೆರವಾಗುವ ಸಲುವಾಗಿ 92,070 ಫಲಾನುಭವಿಗಳಿಗೆ 107 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಹೂವು, ತರಕಾರಿ, ಮತ್ತು ಹಣ್ಣು ಬೆಳೆಗಾರರಿಗೆ ಹಣಕಾಸಿನ ನೆರವು ನೀಡಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.
Published by: Sushma Chakre
First published: January 26, 2021, 9:48 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories