ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಯವರು (Schedule caste) ಹೋರಾಟ ಮಾಡ್ತಿದ್ದಾರೆ. ಇನ್ನೊಂದ್ಕಡೆ ಪಂಚಮಸಾಲಿಯಿಂದಲೂ ಮೀಸಲಾತಿಗಾಗಿ (Panchamasali Reservation) ಹೋರಾಟ ನಡೀತಿದೆ. ಈಗ ಹೋರಾಟಗಾರರನ್ನ ಸೆಳೆಯೋಕೆ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಹೊಸ ಅಸ್ತ್ರ ಬಿಟ್ಟಿದ್ದಾರೆ. ನಮ್ಮ ಸರ್ಕಾರ ಬಂದರೆ ನ್ಯಾ, ಸದಾಶಿವ ಆಯೋಗದ ವರದಿ (Sadashiva Commission recommends) ಜಾರಿ ಮಾಡ್ತೀವಿ ಅಂತ ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಒಳಮೀಸಲಾತಿಗಾಗಿ ಹೋರಾಟ ನಡೆಸ್ತಿದ್ದವರನ್ನ ಬಿಜೆಪಿ ಸರ್ಕಾರ (BJP Government) ಬಂಧಿಸಿದೆ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕು. ಅವರ ಮಾತುಗಳನ್ನ ಆಲಿಸಬೇಕು ಅಂತ ಸರ್ಕಾರಕ್ಕೂ ಚಾಟಿ ಬೀಸಿ ಪರಿಶಿಷ್ಠ ಜಾತಿಯ ಮತಗಳನ್ನ ಸೆಳೆಯೋ ಅಸ್ತ್ರ ಬಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ.
ಬಿಜೆಪಿ ಸರ್ಕಾರದ್ದು ಪ್ರಜಾಪ್ರಭುತ್ವ ವಿರೋಧಿ ನಡೆ
ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು.
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಕಿಡಿಕಾರಿದ್ದಾರೆ.
ಭರವಸೆ ನೀಡಿದ ಸಿದ್ದರಾಮಯ್ಯ
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.
ಸರ್ಕಾರಕ್ಕೆ ಡಿ.22 ಡೆಡ್ಲೈನ್!
ಡಿಸೆಂಬರ್ 22ಕ್ಕೆ ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಅಂತ ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಜಯ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿರುವ ಜಯಮೃತ್ಯುಜಯ ಸ್ವಾಮೀಜಿ, ಈಗಾಗಲೇ ಈ ವಿಚಾರವಾಗಿ ಸಿಎಂ ಅವರೇ ಹೇಳಿದ್ದಾರೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಡಿಸೆಂಬರ್ 22 ಮೀಸಲಾತಿ ಘೋಷಣೆ ಆದ್ರೆ ಸರ್ಕಾರಕ್ಕೆ ಅಭಿನಂದನೆ. ಘೋಷಣೆ ಆಗದಿದ್ದರೇ ಅದೇ ದಿನ ಬೆಳಗಾವಿ ಸುವರ್ಣ ಸೌಧದ ಎದುರು ಹೋರಾಟ ಮಾಡ್ತೀವಿ ಅಂತ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.
ಇದನ್ನೂ ಓದಿ: Love Jihad Law: ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ: ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ
ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಪುತ್ರನ ಸ್ಪರ್ಧೆ ಸಾಧ್ಯತೆ
Karnataka Elections: 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ವಿರುದ್ಧ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಬಿಜೆಪಿ (Karnataka BJP) ವಲಯದಿಂದ ಹೆಸರೊಂದು ಕೇಳಿ ಬಂದಿದೆ. ಈ ಹಿಂದೆ ಸಚಿವ ಶ್ರೀರಾಮುಲು (Minister Sriramulu) ಅವರ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಆದ್ರೆ ಸಿದ್ದರಾಮಯ್ಯನವರು ಕ್ಷೇತ್ರ ಬದಲಾವಣೆಗೆ ಮುಂದಾಗಿರೋದಕ್ಕೆ ಯಾರು ಎದುರಾಳಿ ಅನ್ನೋ ಪ್ರಶ್ನೆ ಬಿಜೆಪಿ ಅಂಗಳದಲ್ಲಿಯೇ ಕೇಳಿ ಬಂದಿತ್ತು.
ಒಂದು ವೇಳೆ ಬಾದಾಮಿಯಿಂದ (Badami) ಸ್ಪರ್ಧೆ ಮಾಡಿದ್ರೆ ಮತ್ತೆ ಶ್ರೀರಾಮುಲು ಅವರನ್ನ ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿತ್ತು. ಇದಕ್ಕೆ ಕಾರಣ 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರಿಂದ ಕೆಲ ಮತಗಳ ಅಂತರದಲ್ಲಿ ಸಿದ್ದರಾಮಯ್ಯ ಗೆದ್ದಿದ್ದರು.
ವರುಣಾದಲ್ಲಿ ವಿಜಯೇಂದ್ರ ಸುತ್ತಾಟ
ಈ ಎಲ್ಲಾ ಬೆಳವಣಿಗೆ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ವರುಣಾಗೆ ಭೇಟಿ ನೀಡಿರೋದು ಹಲವು ಚರ್ಚೆಗಳಿಗೆ ಮುನ್ನುಡಿ ಬರೆದಿದೆ.
ಇದನ್ನೂ ಓದಿ: Hassan: ಪ್ರಶಾಂತ್ ನಾಗರಾಜ್ ಹತ್ಯೆ: ಐಜಿಪಿ ಹೇಳಿದ್ದೇನು? ಇತ್ತ ಪ್ರೀತಂಗೌಡ, ಗೋಪಾಲಯ್ಯ ಸುದ್ದಿಗೋಷ್ಠಿ
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ.ವಿಜಯೇಂದ್ರ,, ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ, ಅದನ್ನ ನಿಭಾಯಿಸುತ್ತೇನೆ. ಎಲ್ಲಾ ಸವಾಲುಗಳನ್ನು ಎದುರಿಸುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ವರುಣ ಕ್ಷೇತ್ರದಲ್ಲಿ ಸ್ಪರ್ಧೆಸೋ ಆಸೆ ವ್ಯಕ್ತಪಡಿಸಿದ್ರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ