HOME » NEWS » State » RESERVATION LIST ANNOUNCED FOR LOCAL BODY ELECTION PRESIDENT AND VICE PRESIDENT POST LG

ಪುತ್ತೂರು ನಗರಸಭೆ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪಟ್ಟಿ ಪ್ರಕಟ

ಈ ಹಿಂದಿನ ಎರಡು ಬಾರಿಯೂ ಮಹಿಳಾ ಅಭ್ಯರ್ಥಿಗಳಿಗೆ ಪುತ್ತೂರು ನಗರ ಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಒಲಿದಿತ್ತು . ಇದೀಗ ಮೀಸಲಾತಿ ಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ ಪುತ್ತೂರು ನಗರ ಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

news18-kannada
Updated:October 9, 2020, 2:55 PM IST
ಪುತ್ತೂರು ನಗರಸಭೆ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪಟ್ಟಿ ಪ್ರಕಟ
ಪುತ್ತೂರು ನಗರಸಭೆ
  • Share this:
ದಕ್ಷಿಣ ಕನ್ನಡ(ಅ.09): ಹಲವು ಅಡ್ಡಿ ಆತಂಕಗಳ ಬಳಿಕ ರಾಜ್ಯ ಸರಕಾರ ಕೊನೆಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದೆ. ರಾಜ್ಯದ 102 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎರಡು ವರ್ಷ ಕಳೆದರೂ ಮೀಸಲಾತಿ ಸಮಸ್ಯೆಯಿಂದಾಗಿ ಚುನಾಯಿತ ಸದಸ್ಯರಿಗೆ ಅಧಿಕಾರ ನಡೆಸದಂತಹ ಸ್ಥಿತಿ ನಿರ್ಮಾಣಗೊಂಡಿತ್ತು. ರಾಜ್ಯದ ಕೆಲವು ಸ್ಥಳೀಯ ಸಂಸ್ಥೆಗಳ ಸದಸ್ಯರು ಸರಕಾರ ಈ ಹಿಂದೆ ಘೋಷಸಿದ್ದ ಮೀಸಲಾತಿ ಪಟ್ಟಿಯನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದಾಗಿ ನ್ಯಾಯಾಲಯದಲ್ಲಿರುವ ಪ್ರಕರಣ ಇತ್ಯರ್ಥಗೊಳ್ಳದೆ ಉಳಿದ ಸಂಸ್ಥೆಗಳಿಗೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ ತಡೆಯಾಗಿತ್ತು. ಇದೀಗ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರಕಾರ ಪ್ರಕಟಿಸಿರುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇದೇ ರೀತಿ  ಪುತ್ತೂರು ನಗರ ಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ. ಹೊಸ ಅದೇಶದ ಪ್ರಕಾರ  ಪುತ್ತೂರು ನಗರಸಭೆ ಅಧ್ಯಕ್ಷತೆ- ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷತೆ - ಸಾಮಾನ್ಯ ಅಭ್ಯರ್ಥಿಗೆ ಒಲಿದಿದೆ.

ಆಲಮಟ್ಟಿ ಜಲಾಶಯದ ಭದ್ರತೆಗೆ ಪೊಲೀಸರ ನಿಯೋಜನೆ; ಪ್ರವಾಸಿಗರ ಮೇಲೆ ಹದ್ದಿನ ಕಣ್ಣು

ಎರಡು ವರ್ಷಗಳ ಹಿಂದೆ ಅಗಷ್ಟ್ 31 , 2018 ಕ್ಕೆ ನಗರ ಸಭೆ ಗೆ ಚುನಾವಣೆ ನಡೆದು ಮೂರು ದಿನಗಳ ತರುವಾಯ ಮತ ಎಣಿಕೆ ನಡೆದಿತ್ತು .ಒಟ್ಟು 31 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ  ಬಿಜೆಪಿ ಅಭೂತಪೂರ್ವ ವಿಜಯ ಸಂಪಾದಿಸಿತ್ತು . ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಂಪಾದಿಸಿದರೆ, ಕಾಂಗ್ರೇಸ್ ಕೇವಲ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತ್ತು. ಒಂದು ವಾರ್ಡ್ ನಲ್ಲಿ ಜಯ ಸಾಧಿಸುವ ಮೂಲಕ ಎಸ್ ಡಿಪಿಐ ಮೊದಲ ಬಾರಿಗೆ ಗೆಲುವು ಸಾಧಿಸಿತ್ತು.

ಅದಾದ ಬಳಿಕ ಎರಡು ಬಾರಿ ಸರಕಾರ ಮೀಸಲಾತಿ ಘೋಷಿಸಿತ್ತಾದರೂ, ಮೀಸಲಾತಿಯನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲು ಏರಿದ ಕಾರಣ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಅಯ್ಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿತ್ತು. ಈ ಹಿಂದಿನ ಎರಡು ಬಾರಿಯೂ ಮಹಿಳಾ ಅಭ್ಯರ್ಥಿಗಳಿಗೆ ಪುತ್ತೂರು ನಗರ ಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಒಲಿದಿತ್ತು . ಇದೀಗ ಮೀಸಲಾತಿ ಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ ಪುತ್ತೂರು ನಗರ ಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
Youtube Video

ನಗರಸಭೆಯಲ್ಲಿ ಈ ಬಾರಿ ಹಲವು ಹೊಸ ಮುಖಗಳೇ ಆಯ್ಕೆಯಾಗಿದ್ದು, ಕೆಲವೇ ಕೆಲವು ಹಳೆ ಮುಖಗಳಲ್ಲಿ ಕೆಲವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
Published by: Latha CG
First published: October 9, 2020, 2:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories