ಕ್ರಿಶ್ಚಿಯನ್ ಸಮುದಾಯಕ್ಕಿಲ್ಲ ಒಂದೂ ಟಿಕೆಟ್; ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಸಾಂಗ್ಲಿಯಾನ

Sangliana Resigns Congress: ಕಾಂಗ್ರೆಸ್​ನಿಂದ ಸಂಸದರಾಗಿಯೂ ಆಯ್ಕೆಯಾಗಿದ್ದ ಸಾಂಗ್ಲಿಯಾನ ಐಪಿಎಸ್​ ಅಧಿಕಾರಿಯಾಗಿದ್ದಾಗಲೂ ತಮ್ಮ ಕಾರ್ಯಕ್ಷಮತೆಯಿಂದ ಹೆಸರಾಗಿದ್ದವರು. 

news18
Updated:April 8, 2019, 10:18 PM IST
ಕ್ರಿಶ್ಚಿಯನ್ ಸಮುದಾಯಕ್ಕಿಲ್ಲ ಒಂದೂ ಟಿಕೆಟ್; ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಸಾಂಗ್ಲಿಯಾನ
ಸಾಂಗ್ಲಿಯಾನ
news18
Updated: April 8, 2019, 10:18 PM IST
ಬೆಂಗಳೂರು (ಏ.8): ನಿವೃತ್ತ ಐಪಿಎಸ್​ ಅಧಿಕಾರಿ ಮತ್ತು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್​ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತಿರುವುದಾಗಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್​ನಿಂದ ಸಂಸದರಾಗಿಯೂ ಆಯ್ಕೆಯಾಗಿದ್ದ ಸಾಂಗ್ಲಿಯಾನ ಐಪಿಎಸ್​ ಅಧಿಕಾರಿಯಾಗಿದ್ದಾಗಲೂ ತಮ್ಮ ಕಾರ್ಯಕ್ಷಮತೆಯಿಂದ ಹೆಸರಾಗಿದ್ದವರು. ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

sangliana
ಸಾಂಗ್ಲಿಯಾನ ಅವರ ರಾಜೀನಾಮೆ ಪತ್ರ


ಕಾಂಗ್ರೆಸ್ ಪಕ್ಷದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿ ಚುನಾವಣೆ ಪ್ರಚಾರ ಸೇರಿದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವನ್ನು ಕ್ರೈಸ್ತ ಸಮುದಾಯಕ್ಕೆ ಬಿಟ್ಟುಕೊಡದೆ ಕಾಂಗ್ರೆಸ್ ನಾಯಕರು ಕಡೆಗಣಿಸಿದ್ದಾರೆ. ಕಾಂಗ್ರೆಸ್​ ನಾಯಕರು ಕ್ರೈಸ್ತ ಸಮುದಾಯದ ಹಿತ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಬಾರಿ ಬೆಂಗಳೂರು ಉತ್ತರ ಅಥವಾ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಚ್.ಟಿ. ಸಾಂಗ್ಲಿಯಾನ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದ ಅವರು ಪಕ್ಷ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರನಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದರು. ಆದರೆ ಅವರು ನಾಮಪತ್ರ ಸಲ್ಲಿಸದೆ ಹಿಂದೆ ಸರಿದಿದ್ದರು.

 
Loading...

First published:April 8, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...