ಪಾಕ್ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಕೊಂದರೆ 10 ಲಕ್ಷ; ಶ್ರೀರಾಮ ಸೇನೆ ಕಾರ್ಯಕರ್ತ ಘೋಷಣೆ!

ಅಮೂಲ್ಯ ಲಿಯೋನಾ ವಿರುದ್ಧ ಇಂದು ಬಳ್ಳಾರಿಯಲ್ಲಿ ಶ್ರೀರಾಮ ಸೇನೆ ಸಂಘಟನೆಯ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಸಂಘಟನೆಯ ಕಾರ್ಯಕರ್ತ ಸಂಜೀವ್ ಮರಡಿ ಇಂತಹ ಹೇಳಿಕೆ ನೀಡಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಯುವತಿ ಅಮೂಲ್ಯ.

ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಯುವತಿ ಅಮೂಲ್ಯ.

  • Share this:
ಬೆಂಗಳೂರು: ಇತ್ತೀಚೆಗೆ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾ ಅವರನ್ನು ಕೊಂದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಬಲಪಂಥೀಯ ಸಂಘಟನೆಯಾದ ಶ್ರೀರಾಮ ಸೇನೆ ಘೋಷಣೆ ಮಾಡಿದೆ.

ಶ್ರೀರಾಮ ಸೇನೆ ಕಾರ್ಯಕರ್ತ ಸಂಜೀವ್ ಮರಡಿ ಎಂಬ ವ್ಯಕ್ತಿ ಈ ಕುರಿತು ವಿಡಿಯೋ ಮಾಡಿದ್ದು, “ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅಮೂಲ್ಯ ಲಿಯೋನಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಬಾರದು, ಹಾಗೆ ಮಾಡಿದರೆ ನಾವೇ ಆಕೆಯನ್ನು ಎನ್​ಕೌಂಟರ್​ ಮಾಡಿ ಕೊಲ್ಲುತ್ತೇವೆ. ಅಲ್ಲದೆ, ಆಕೆಯನ್ನು ಯಾರೇ ಕೊಂದರೂ ಅವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ” ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾನೆ.

ಅಮೂಲ್ಯ ಲಿಯೋನಾ ವಿರುದ್ಧ ಇಂದು ಬಳ್ಳಾರಿಯಲ್ಲಿ ಶ್ರೀರಾಮ ಸೇನೆ ಸಂಘಟನೆಯ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಸಂಘಟನೆಯ ಕಾರ್ಯಕರ್ತ ಸಂಜೀವ್ ಮರಡಿ ಇಂತಹ ಹೇಳಿಕೆ ನೀಡಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆದರೆ, ಇಂತಹ ವಿಡಿಯೋ ಹರಿಬಿಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಇಂತಹ ಯಾವುದೇ ವಿಡಿಯೋವನ್ನು ನಾನು ನೋಡಿಲ್ಲ, ಹಾಗೂ ಈ ಕುರಿತ ಯಾವುದೇ ಪ್ರಕಟಣೆಯ ಬಗ್ಗೆಯೂ ಕೇಳಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಅಮೂಲ್ಯ ಲಿಯೋನ್ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಅವರ ವಿರುದ್ಧ ಇದೀಗ 124-ಎ ಕಾಯ್ದೆಯ ಅಡಿಯಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇದನ್ನೂ ಓದಿ : ಕೆಲಸ ಸಿಕ್ಕಿದ ಬಳಿಕ ಕಷ್ಟಪಟ್ಟು ಓದಿಸಿದ್ದ ಪೋಷಕರನ್ನೇ ಮರೆತ ಮಗ; ನ್ಯಾಯಮಂಡಳಿ ಮೆಟ್ಟಿಲೇರಿ ಗೆದ್ದ ತಂದೆ..!
First published: