ಚಿಕ್ಕಮಗಳೂರಿನ ಕಡೂರು ಬಳಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ​; ಸ್ಥಳದಲ್ಲೇ ಇಬ್ಬರ ಸಾವು

ಕೆಎಸ್ಆರ್​ಟಿಸಿ ಬಸ್​ನಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರೆಲ್ಲರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಖರಾಯಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

HR Ramesh | news18-kannada
Updated:September 23, 2019, 11:04 PM IST
ಚಿಕ್ಕಮಗಳೂರಿನ ಕಡೂರು ಬಳಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ​; ಸ್ಥಳದಲ್ಲೇ ಇಬ್ಬರ ಸಾವು
ಡಿಕ್ಕಿ ಹೊಡೆದ ಬಸ್​
  • Share this:
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಸಂಜೆ ನಡೆದಿದೆ.

ಶಿವಮೊಗ್ಗ ಮೂಲದ ಶರವಣ 45 ಹಾಗೂ ಕಡೂರು ಸರ್ವೇ ಇಲಾಖೆಯ ಸಿಬ್ಬಂದಿ, ಬೇಲೂರಿನ ಹಗರೆಯ ರುಚಿತ (22) ಮೃತ ದುರ್ದೈವಿಗಳು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿ ಡಿಸೇಲ್ ಖಾಲಿಯಾದ ಕಾರಣಕ್ಕೆ ರಸ್ತೆ ಬದಿಯಲ್ಲಿ ಲಾರಿ ನಿಂತಿತ್ತು. ಈ ವೇಳೆ ಚಿಕ್ಕಮಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​ ಲಾರಿಗೆ ಡಿಕ್ಕಿ ಹೊಡೆದಿದೆ.  ಬಸ್ಸಿನ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 10 ಮಂದಿ ಸಾವು

ಕೆಎಸ್ಆರ್​ಟಿಸಿ ಬಸ್​ನಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರೆಲ್ಲರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಖರಾಯಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading