Road Accident: ವಿಜಯಪುರದಲ್ಲಿ ಭೀಕರ ಅಪಘಾತ; ಪುಣೆಯ ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸಾವು

Bijapur Accident: ವಿಜಯಪುರದಲ್ಲಿ ಲಾರಿಯೊಂದು ಟವೇರಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪುಣೆಯ ಇಂದಾಪುರ ತಾಲೂಕಿನ ಸೋಹೆಲ್ (22) ಹಾಗೂ ಮಹಾದೇವ (20) ಎಂಬ ಕಬಡ್ಡಿ ಪಟುಗಳು ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • News18
 • Last Updated :
 • Share this:
  ವಿಜಯಪುರ (ಮಾ. 18): ವಿಜಯಪುರದ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಕ್ರಾಸ್ ಬಳಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪುಣೆಯ ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸಾವನ್ನಪ್ಪಿದ್ದಾರೆ. ಲಾರಿಯೊಂದು ಟವೇರಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  ರೋಣಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಪುಣೆಯ ಇಂದಾಪುರ ತಾಲೂಕಿನ ಸೋಹೆಲ್ (22) ಹಾಗೂ ಮಹಾದೇವ (20) ಎಂಬ ಕಬಡ್ಡಿ ಪಟುಗಳು ಸಾವನ್ನಪ್ಪಿದ್ದು, ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

  ಕಬಡ್ಡಿ ಪ್ರೋ ಲೀಗ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಸೋಹಲ್ ಮತ್ತು ಮಹಾದೇವ್ ನಿನ್ನೆ ಮುಂಜಾನೆ ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.  ಈ ಬಗ್ಗೆ ಮಹಾರಾಷ್ಟ್ರದ ಸಂಸದರಾದ ಸುಪ್ರಿಯಾ ಸುಳೆ ಟ್ವೀಟ್ ಮಾಡಿದ್ದು, ಮಹಾರಾಷ್ಟ್ರದ ಇಂದಾಪುರದ ಕಬಡ್ಡಿ ತಂಡದ ವಾಹನ ವಿಜಯಪುರದಲ್ಲಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರು ಯುವ ಮತ್ತು ಪ್ರತಿಭಾವಂತ ಕಬಡ್ಡಿ ಕ್ರೀಡಾಪಟುಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಕ್ರೀಡಾಪಟುಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸಾವನ್ನಪ್ಪಿದವರ ಕುಟುಂಬದವರ ಜೊತೆ ನಾವು ನಿಂತು ಅವರಿಗೆ ಸಾಂತ್ವನ ಹೇಳಬೇಕಾಗಿದೆ. ಹಾಗೇ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
  Published by:Sushma Chakre
  First published: