• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • D Roopa-Rohini Sindhuri: ತಾರಕಕ್ಕೇರಿದ ಮಹಿಳಾ ಅಧಿಕಾರಿಗಳ ಸಮರ; ಕಾನೂನು ಹೋರಾಟ ಎಂದ ರೋಹಿಣಿ, ಸತ್ಯ ಸತ್ಯವೇ ಅಂತ ರೂಪಾ ಟಾಂಗ್!

D Roopa-Rohini Sindhuri: ತಾರಕಕ್ಕೇರಿದ ಮಹಿಳಾ ಅಧಿಕಾರಿಗಳ ಸಮರ; ಕಾನೂನು ಹೋರಾಟ ಎಂದ ರೋಹಿಣಿ, ಸತ್ಯ ಸತ್ಯವೇ ಅಂತ ರೂಪಾ ಟಾಂಗ್!

ಡಿ. ರೂಪಾ v/s ರೋಹಿಣಿ ಸಿಂಧೂರಿ

ಡಿ. ರೂಪಾ v/s ರೋಹಿಣಿ ಸಿಂಧೂರಿ

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ತಾರಕಕ್ಕೆ ಏರುವ ಎಲ್ಲಾ ಸಾಧ್ಯತೆ ಇದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ ರೂಪಾ ಗಂಭೀರ ಆರೋಪ ಮಾಡಿದ್ದರು. ಅವರ ಫೋಟೋಗಳನ್ನು ಶೇರ್ ಮಾಡಿ ಗಂಭೀರ ಆರೋಪ ಮಾಡಿದ್ದರು. ಇದೀಗ ಡಿ ರೂಪಾ ಆರೋಪಕ್ಕೆ ರೋಹಿಣಿ ಸಿಂಧೂರಿ ತಿರುಗೇಟು ನೀಡಿದ್ದಾರೆ.

ಮುಂದೆ ಓದಿ ...
 • News18 Kannada
 • 5-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳ (Lady Officers) ನಡುವಿನ ವೈಯಕ್ತಿಕ ಜಗಳ ಮುಂದುವರೆದಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ (IPS Officer D. Roopa) ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ನಡುವಿನ ಕಿತ್ತಾಟ ತಾರಕಕ್ಕೆ ಏರುವ ಎಲ್ಲಾ ಸಾಧ್ಯತೆ ಇದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ ರೂಪಾ ಗಂಭೀರ ಆರೋಪ ಮಾಡಿದ್ದರು. ಅವರ ಫೋಟೋಗಳನ್ನು ಶೇರ್ ಮಾಡಿ ಗಂಭೀರ ಆರೋಪ ಮಾಡಿದ್ದರು. ಇದೀಗ ಡಿ ರೂಪಾ ಆರೋಪಕ್ಕೆ ರೋಹಿಣಿ ಸಿಂಧೂರಿ ತಿರುಗೇಟು ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ವೈಯಕ್ತಿಕ ಹಗೆಯನ್ನ ಸಾಧಿಸಲು ಹೊರಡುವುದು ಸಮಾಜಕ್ಕೆ ಬಹಳಷ್ಟು ಅಪಾಯಕಾರಿ. ರೂಪಾ ಐಪಿಎಸ್‌ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು, ನನ್ನ ಮೇಲೆ ವೈಯಕ್ತಿಕ ಹಗೆಯನ್ನ ಸಾಧಿಸಲು ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿರುವವರ ರೀತಿಯಲ್ಲಿ ಆಡುತ್ತಿದ್ದಾರೆ ಅಂತ ಹೇಳಿದ್ದಾರೆ.


“ರೂಪಾ ಅವರಿಗೆ ಇಂಥದ್ದೆಲ್ಲ ಅಭ್ಯಾಸವಾಗಿದೆ”


ಐಪಿಎಸ್‌ ರೂಪಾ ಅವರದ್ದು, ಇದೊಂದು ಅಭ್ಯಾಸವಾಗಿ ಬಿಟ್ಟಿದೆ ಅಂತ ರೋಹಿಣಿ ಸಿಂಧೂರಿ ಕಿಡಿಕಾರಿದ್ದಾರೆ. ಅವರು ಇತ್ತೀಚಿನ ವರ್ಷಗಳಲ್ಲಿದ್ದ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಮಾ‍ಧ್ಯಮಗಳ ಗಮನ ಸೆಳೆಯುವ ಹಾಗೂ ತಾವು ದ್ವೇ಼ಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕವಾಗಿ ಹಗೆತನ ಸಾಧಿಸಲು ಪ್ರಯತ್ನಿಸುತ್ತಾರೆ. ಅವರು ಯಾವಾಗಲೂ ಸುದ್ದಿಯಲ್ಲಿರಬೇಕು ಎನ್ನುವುದನ್ನ ಬಯಸುತ್ತಾರೆ ಹಾಗೂ ಅದಕ್ಕೆ ಬೇಕಾದಂತಹ ಪೋಸ್ಟ್‌ಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿ ಹಾಕುವ ಮೂಲಕ ಸುದ್ದಿಯ ಕೇಂದ್ರಬಿಂದುವಾಗುತ್ತಾರೆ ಅಂತ ಕಾಲೆಳೆದಿದ್ದಾರೆ.


ರೋಹಿಣಿ ಸಿಂಧೂರಿ ಸ್ಪಷ್ಪನೆ


“ನನ್ನ ವಿರುದ್ಧ ವೈಯಕ್ತಿಕ ನಿಂದನೆ”


ಜವಾಬ್ದಾರಿಯುತ ಸ್ಥಾನದಲ್ಲಿದ್ದು ಒಳ್ಳೆಯ ಕೆಲಸಗಳ ಕಡೆ ಗಮನ ಹರಿಸುವುದನ್ನ ಬಿಟ್ಟು ಒಬ್ಬ ವ್ಯಕ್ತಿ ಅಥವಾ ಇನ್ನೊಬ್ಬರನ್ನ ಗುರಿಯಾಗಿಸಿಕೊಂಡು ಅವರ ತೇಜೋವಧೆ ಮಾಡುವುದೇ ಅವರ ಪ್ರಾಥಮಿಕ ಕೆಲಸ ಎಂದು ತೋರಿಸುತ್ತದೆ. ಅದರಲ್ಲೂ ನನ್ನ ವಿರುದ್ದ ಯಾವುದೋ ವೈಯಕ್ತಿಕ ಹಗೆಯನ್ನಿಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆಯ ಅಭಿಯಾನವನ್ನು ನಡೆಸುತ್ತಿದ್ದಾರೆ ಅಂತ ಟೀಕಿಸಿದ್ದಾರೆ.


ಇದನ್ನೂ ಓದಿ: Rohini Sindhuri: 'ಸಿಂಧೂರಿ ಫೋಟೋ ಫೇಕ್​ ಅಲ್ಲ, ಇದು ಜಸ್ಟ್ ಸ್ಯಾಂಪಲ್​ ಅಷ್ಟೇ'! ರೋಹಿಣಿ ವಿರುದ್ಧ ಡಿ ರೂಪಾ ಮತ್ತಷ್ಟು ಆರೋಪ


“ಫೋಟೋಗಳ ಮೂಲಕ ನನ್ನ ತೇಜೋವಧೆ ಯತ್ನ”


ನನ್ನ ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್‌ ಆಪ್‌ ಸ್ಟೇಟಸ್‌ಗಳಿಂದ ಸ್ಕ್ರೀನ್‌ ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನ  ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್‌ ಅವರು ಬಳಸಿದ್ದಾರೆ. ಈ ಫೋಟೋಗಳನ್ನು ನಾನು  ಕಳುಹಿಸಿದ್ದೇನೆ ಎನ್ನುವ ಅಧಿಕಾರಿಗಳ ಹೆಸರನ್ನ ಬಹಿರಂಗಪಡಿಸಬೇಕು ಹಾಗೂ  ಅವುಗಳ ಬಗ್ಗೆ ತನಿಖೆ ನಡೆಯಬೇಕು ಎನ್ನುವುದನ್ನ ನಾನು ಆಗ್ರಹಿಸುತ್ತೇನೆ ಅಂತ ರೋಹಿಣಿ ಸಿಂಧೂರಿ ಹೇಳಿದ್ದಾರೆ.


“ರೂಪಾ ವಿರುದ್ಧ ಕಾನೂನು ಸಮರ”


ನನ್ನ ವಿರುದ್ದ ರೂಪಾ ಐಪಿಎಸ್‌ ಅವರು ನಡೆಸುತ್ತಿರುವ ವೈಯಕ್ತಿಕ ನಿಂದನೆ ಹಾಗೂ ತೇಜೋವಧೆಯ ವಿರುದ್ದ ನಾನು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರೂಪಾ ಐಪಿಎಸ್‌ ಅವರ ಮೇಲೆ ಕಾನೂನಿನ ಎಲ್ಲಾ ಕ್ರಮಗಳನ್ನ ಕೈಗೊಳ್ಳುತ್ತೇನೆ. ಸಕ್ಷಮ ಪ್ರಾಧಿಕಾರದ ಮುಂದೆಯೂ ದೂರನ್ನ ಸಲ್ಲಿಸಲಿದ್ದೇನೆ ಅಂತ ರೋಹಿಣಿ ಸಿಂಧೂರಿ ಎಚ್ಚರಿಸಿದ್ದಾರೆ.


ರೋಹಿಣಿ ಆರೋಪಕ್ಕೆ ರೂಪಾ ಪ್ರತ್ಯಾರೋಪ


ರೋಹಿಣಿ ವಿರುದ್ಧ ರೂಪಾ ಮತ್ತೆ ಆರೋಪ


ಇಷ್ಟಾಗುತ್ತಿದ್ದಂತೆ ರೋಹಿಣಿ ಸಿಂಧೂರಿ ಮಾತಿಗೆ ಡಿ ರೂಪಾ ಮತ್ತೆ ತಿರುಗೇಟು ನೀಡಿದ್ರು. ರೋಹಿಣಿ ಬರೆದ ಸಾಲಿನಲ್ಲಿ ಹೇಳ್ತಾರೆ ಡಿಕೆ ರವಿ ಸತ್ತದ್ದು mental illness ಇಂದ ಅಂತ. ರವಿಯನ್ನು ಇಷ್ಟು ನಿಕೃಷ್ಟವಾಗಿ ಹೀಯಾಳಿಸಿದರೆ? ಅಂತ ಪ್ರಶ್ನಿಸಿದ್ದಾರೆ. ನನ್ನ ಪ್ರಶ್ನೆ ಇಷ್ಟೇ, ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್‌ನಲ್ಲಿ ಎಲ್ಲರ ಕೈ ಸೇರಿದೆ ಅಂದಿದ್ದಾರೆ.
“ಸತ್ಯ ಸತ್ಯವೇ, ಸತ್ಯ ಮಣಿಸಲು ಸಾಧ್ಯವಿಲ್ಲ”


ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ IAS ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಅವರು ಯಾವ forum ಹೋದರೂ, ಸತ್ಯ ಸತ್ಯವೇ ಸತ್ಯ ಮಣಿಸಲು ಸಾಧ್ಯವಿಲ್ಲ ಈ ಬಾರಿ ಸಾಧ್ಯವಿಲ್ಲ ಅಂತ ಐಎಎಸ್ ಅಧಿಕಾರಿ ರೋಹಿಣಿಗೆ ಡಿ ರೂಪಾ ಮತ್ತೆ ಟಾಂಗ್ ಕೊಟ್ಟಿದ್ದಾರೆ.

Published by:Annappa Achari
First published: