Rohini Sindhuri: ಟ್ರಾನ್ಸ್​ಫರ್ ಕ್ಯಾನ್ಸಲ್ ಮಾಡುವಂತೆ ರೋಹಿಣಿ ಸಿಂಧೂರಿ ಮನವಿ; ಬಿಲ್​ಕುಲ್ ಆಗಲ್ಲ ಎಂದ ಸಿಎಂ

ಜಿಲ್ಲಾಧಿಕಾರಿ ಭೇಟಿ ಬಗ್ಗೆ ಮಾತನಾಡಿದ ಸಿಎಂ ಬಿಎಸ್​ವೈ,  ರೋಹಿಣಿ ಸಿಂಧೂರಿ ಬೆಳಗ್ಗೆ ಬಂದಿದ್ದರು. ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ರದ್ದು ಮಾಡಲು ಮನವಿ ಮಾಡಿದರು.  ಆದರೆ ವರ್ಗಾವಣೆ ರದ್ದು ಮಾಡಲ್ಲ. ಇದನ್ನು ನಾನು ಸ್ಪಷ್ಟಪಡಿಸಿರುವೆ ಎಂದರು.

 ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ

 • Share this:
  ಬೆಂಗಳೂರು(ಜೂ.06): ಮೈಸೂರಿನಲ್ಲಿ ಇಬ್ಬರು ಐಎಎಸ್​ ಅಧಿಕಾರಿಗಳ ಕಿತ್ತಾಟ ಕೊನೆಗೂ ವರ್ಗಾವಣೆ ಮೂಲಕ ತಾರ್ಕಿಕ ಅಂತ್ಯ ಕಂಡಿದೆ. ರಾಜ್ಯ ಸರ್ಕಾರ ತಡರಾತ್ರಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ಅವರನ್ನು ಎತ್ತಂಗಡಿ ಮಾಡಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದರೆ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

  ಸರ್ಕಾರದ ಈ ನಿರ್ಧಾರ ರೋಹಿಣಿ ಸಿಂಧೂರಿ ಅವರಿಗೆ ಬೇಸರ ಉಂಟುಮಾಡಿದೆ. ಹೀಗಾಗಿ ರೋಹಿಣಿ ಇಂದು ಬೆಳ್ಳಂ ಬೆಳಗ್ಗೆಯೇ ಸಿಎಂ ಬಿಎಸ್​ ಯಡಿಯೂರಪ್ಪನವರನ್ನು ಭೇಟಿ ಮಾಡಲು ಮುಂದಾಗಿದ್ದರು. ಸುಮಾರು ಎರಡೂವರೆ ಗಂಟೆಗಳ ಕಾಲ ಸಿಎಂ ಬಿಎಸ್​​ವೈಗಾಗಿ ಕಾದರು. ಬಳಿಕ ಭೇಟಿ ಮಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ವರ್ಗಾವಣೆ ತಡೆ ಹಿಡಿಯುವಂತೆ ಸಿಎಂ ಬಳಿ ಮನವಿ ಮಾಡಿದರು.

  ಆದರೆ ಸಿಎಂ ಯಡಿಯೂರಪ್ಪ ಸಿಂಧೂರಿ ಅವರ ಮನವಿಯನ್ನು ಒಪ್ಪಲಿಲ್ಲ. ಬಿಲ್​ಕುಲ್​ ತಡೆಯಲು ಆಗಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಹೀಗಾಗಿ ರೋಹಿಣಿ ಸಿಂಧೂರಿ ಹೋದ ದಾರಿಗೆ ಸುಂಕವಿಲ್ಲ ಎಂಬಂತೆ ಬರಿಗೈಲಿ ವಾಪಸ್ಸಾದರು.

  ಇದನ್ನೂ ಓದಿ:Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ..!

  ಮೈಸೂರಿನ ಡಿಸಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾನಾಗ್​ ನಡುವಿನ ಕಿತ್ತಾಟ ಸರ್ಕಾರಕ್ಕೆ ದೊಡ್ಡ ತಲೆನೋವಾಗಿತ್ತು. ಹೀಗಾಗಿ ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಸರ್ಕಾರ ವರ್ಗಾವಣೆ ಎಂಬ ಅಸ್ತ್ರವನ್ನು ಪ್ರಯೋಗ ಮಾಡಿದೆ. ಇಬ್ಬರು ಐಎಎಸ್​ ಅಧಿಕಾರಿಗಳನ್ನು ರಾತ್ರೋರಾತ್ರಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.  ಜಿಲ್ಲಾಧಿಕಾರಿ ಭೇಟಿ ಬಗ್ಗೆ ಮಾತನಾಡಿದ ಸಿಎಂ ಬಿಎಸ್​ವೈ,  ರೋಹಿಣಿ ಸಿಂಧೂರಿ ಬೆಳಗ್ಗೆ ಬಂದಿದ್ದರು. ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ರದ್ದು ಮಾಡಲು ಮನವಿ ಮಾಡಿದರು.  ಆದರೆ ವರ್ಗಾವಣೆ ರದ್ದು ಮಾಡಲ್ಲ. ಇದನ್ನು ನಾನು ಸ್ಪಷ್ಟಪಡಿಸಿರುವೆ ಎಂದರು.

  ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್​ ಅವರನ್ನು ನೇಮಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

  ಇದನ್ನೂ ಓದಿ:HBD Rakshith Shetty: ಸಪ್ತಸಾಗರದಾಚೆಗೆ ರಕ್ಷಿತ್ ಶೆಟ್ಟಿ ಬರ್ತಡೇ; ಚಾರ್ಲಿ ಜೊತೆ ಸೆಲಬ್ರೇಶನ್ ಜೋರು

  ಕೋವಿಡ್ ನಿಯಂತ್ರಣ ಮಾಡುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪಾಲಿಕೆ ಆಯುಕ್ತೆ ಶಿಲ್ಪಾನಾಗ್​​ ಮೇಲೆ ಆರೋಪ ಮಾಡಿದ್ದರು. ಡಿಸಿ ಆರೋಪಕ್ಕೆ ಬೇಸತ್ತಿದ್ದ ಶಿಲ್ಪಾನಾಗ್​ ರಾಜೀನಾಮೆ ಸಲ್ಲಿಸಿ, ರೋಹಿಣಿ ಸಿಂಧೂರಿ ಕಾರ್ಯವೈಖರಿಯನ್ನು ಖಂಡಿಸಿದ್ದರು. ಬಳಿಕ ಇಬ್ಬರ ನಡುವೆ ವಾಗ್ಯುದ್ಧ ನಡೆದಿತ್ತು. ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈದಿದ್ದರು. ಇದೆಲ್ಲವನ್ನು ಗಮನಿಸಿದ್ದ ಜಿಲ್ಲಾ ಉಸ್ತುವಾರಿ ಎಸ್​.ಟಿ.ಸೋಮಶೇಖರ್​, ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

  ಬಳಿಕ ಸಿಎಂ ಬಿಎಸ್​ವೈ, ಈ ಬಗ್ಗೆ ಪರಿಶೀಲನೆ ನಡೆಸಿ ಸಂಪೂರ್ಣ ಮಾಹಿತಿ ಪಡೆಯುವಂತೆ, ಮುಖ್ಯ ಕಾರ್ಯದರ್ಶಿ ಸಿ.ಎಸ್.ರವಿಕುಮಾರ್​ಗೆ ಸೂಚನೆ ನೀಡಿದ್ದರು. ಅದರಂತೆ ನಿನ್ನೆ ಸಿಎಸ್ ಮೈಸೂರಿಗೆ ತೆರಳಿ ಸಭೆ ನಡೆಸಿ ಡಿಸಿ ಹಾಗೂ ಆಯುಕ್ತೆ ಇಬ್ಬರಿಂದಲೂ ಮಾಹಿತಿ ಪಡೆದಿದ್ದರು. ಇದಾದ ಬಳಿಕವೂ ಇಬ್ಬರು ಐಎಎಸ್​ ಅಧಿಕಾರಿಗಳ ಶೀತಲ ಸಮರ ಮುಂದುವರೆದಿತ್ತು. ಸರ್ಕಾರಕ್ಕೆ ತಲೆನೋವಾಗಿದ್ದ ಇವರ ಕಿತ್ತಾಟ ಈಗ ವರ್ಗಾವಣೆ ಮೂಲಕ ಅಂತ್ಯ ಕಂಡಿದೆ.

  ಡಿಸಿ ಆರೋಪಕ್ಕೆ ತಿರುಗೇಟು ಮುಂದಾಗಿದ್ದ ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ನಿನ್ನೆ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದ್ದರು. ಕೋವಿಡ್​ ನಿಯಂತ್ರಣಕ್ಕಾಗಿ ಪಾಲಿಕೆ ವಾರ್ಡ್ ಮಟ್ಟದಲ್ಲಿ ಕೈಗೊಂಡ ಕ್ರಮಗಳು, ಟಾಸ್ಕ್ ಪೋರ್ಸ್ ರಚನೆ, ಸಹಾಯವಾಣಿ ರಚನೆ, ಸಂಘ ಸಂಸ್ಥೆಗಳಿಂದ ಪಡೆದ ಸಾಮಗ್ರಿಗಳು, ಜೊತೆಗೆ ವಿವಿಧ ಕ್ರಮಗಳ ಬಗ್ಗೆ ಸಂಪೂರ್ಣ ವರದಿಯನ್ನು ಸಲ್ಲಿಕೆ ಮಾಡಿದ್ದರು. ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡ ಕ್ರಮಗಳನ್ನ ಸರ್ಕಾರದ ಗಮನಕ್ಕೆ ತರುವ ಪ್ರಯತ್ನವನ್ನು ಶಿಲ್ಪಾನಾಗ್ ಮಾಡಿದ್ದರು. ಆ ಮೂಲಕ ಡಿಸಿ ಆರೋಪಕ್ಕೆ ದಾಖಲೆ ಸಮೇತ ಉತ್ತರ ನೀಡಿದ್ದರು.
  Published by:Latha CG
  First published: