Text Book Row: ಸಂಶೋಧಕನಿಗೆ ಸತ್ಯವೇ ಮುಖ್ಯ, ನನ್ನದು ಎರಡೂ ಕಡೆಗೂ ಒಪ್ಪಿಗೆಯಾದ ಪಂಥವಿರಬೇಕು; ರೋಹಿತ್ ಚಕ್ರತೀರ್ಥ
ತನಗೆ ಬೇಕಾದಂತೆ ಇತಿಹಾಸ ಬರೆಯುವುದು ಎಷ್ಟು ಅರ್ಥಹೀನವೂ ಅಷ್ಟೇ ಅರ್ಥಹೀನವಾದದ್ದು ಬೇರೆಯವರಿಗೆ ಬೇಕಾದಂತೆ ಇತಿಹಾಸ ಬರೆಯುತ್ತೇನೆ ಎಂಬುವುದು ಕೂಡ. ಇತಿಹಾಸಕ್ಕೆ ನಿಷ್ಠವಾಗಿ ಇತಿಹಾಸವನ್ನು ಬರೆಯಬೇಕೆಂಬ ನನ್ನದು ಎರಡೂ ಕಡೆಗೂ ಒಪ್ಪಿಗೆಯಾದ ಪಂಥವಿರಬೇಕು
ರಾಜ್ಯದಲ್ಲಿ ಪಠ್ಯ ಪರಿಷ್ಕರಣಾ ಸಮಿತಿ (Textbook review committee) ವಿಸರ್ಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಮಿತಿ ಶಿಫಾರಸ್ಸು ಮಾಡಿರುವ ಪರಿಷ್ಕರಣಾ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು. ಹಳೆ ಪಠ್ಯವನ್ನೇ ಮುಂದುವರಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. ಒತ್ತ ಪ್ರತಿದಿನ ಹೊಸ ಪಠ್ಯದಲ್ಲಿನ (New Syllabus) ದೋಷಗಳು ಬೆಳಕಿಗೆ ಬರುತ್ತಿವೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ (Rohit Chakratirtha) ತಮ್ಮ ಅಭಿಪ್ರಾಯವನ್ನು ಫೇಸ್ ಬುಕ್ (Facebook) ನಲ್ಲಿ ಹಂಚಿಕೊಂಡಿದ್ದಾರೆ. ಸಮಿತಿ ವಿಸರ್ಜನೆ ಮತ್ತು ಹೊಸ ಪಠ್ಯದ ಕುರಿತಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ (Political Development) ಬಗ್ಗೆ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಸಂಶೋಕನಿಗೆ ಸತ್ಯವೇ ಮುಖ್ಯವಾಗುತ್ತೆ
ಓರ್ವ ಸಂಶೋಧಕನ ದಾರಿ, ಒಂದು ರಾಜಕೀಯ ಪಕ್ಷ ಅಥವಾ ಸರ್ಕಾರದ ದಾರಿಯೂ ಆಗಬೇಕಿಲ್ಲ. ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನೇ ಎದುರು ಹಾಕಿಕೊಳ್ಳುವದಕ್ಕೂ ಸಿದ್ಧನಿರುತ್ತಾನೆ. ಆದರೆ ರಾಜಕೀಯ ಪಕ್ಷ ಅಥವಾ ಸರ್ಕಾರಗಳಿಗೆ ಅಂತಿಮವಾಗಿ ಮುಖ್ಯವಾಗುವುದು ಮತಗಳು. ಸತ್ಯ ಮತ್ತು ಮತ ಎಂಬ ಎರಡು ದಾರಿಗಳ ನಡುವೆ ಸಂಶೋಧಕ ಮೊದಲನೆಯದನ್ನು ಆಯ್ದುಕೊಂಡರೆ ರಾಜಕೀಯ ಶಕ್ತಿ ಎರಡನೇಯದನ್ನು ಆರಿಸಿಕೊಳ್ಳುತ್ತದೆ.
ಯಾವ ಕಾಂಪೌಂಡಿನೊಳಗೆ ನಿಂತಿಲ್ಲ.
ಆರಿಸಿದ್ದೇವೆ ಎಂದಾಗ ನಾನು ಉಬ್ಬಿಲ್ಲ. ತೆಗೆದು ಹಾಕಿದ್ದೇವೆ ಎಂದಾಗ ಕುಗ್ಗಿಯೂ ಇಲ್ಲ. ಚಕ್ರತೀರ್ಥನಿಗೆ ಗೇಟ್ ಪಾಸ್ ಎಂಬ ಮಾತನ್ನು ಮಾಧ್ಯಮದಲ್ಲಿ ಓದಿದಾಗ ನಗು ಬರುತ್ತದೆ. ಗೇಟ್ ಪಾಸ್ ಕೊಡಲು ನಾನು ಯಾವ ಕಾಂಪೌಂಡಿನೊಳಗೆ ನಿಂತಿಲ್ಲ.
ತನಗೆ ಬೇಕಾದಂತೆ ಇತಿಹಾಸ ಬರೆಯುವುದು ಎಷ್ಟು ಅರ್ಥಹೀನವೂ ಅಷ್ಟೇ ಅರ್ಥಹೀನವಾದದ್ದು ಬೇರೆಯವರಿಗೆ ಬೇಕಾದಂತೆ ಇತಿಹಾಸ ಬರೆಯುತ್ತೇನೆ ಎಂಬುವುದು ಕೂಡ. ಇತಿಹಾಸಕ್ಕೆ ನಿಷ್ಠವಾಗಿ ಇತಿಹಾಸವನ್ನು ಬರೆಯಬೇಕೆಂಬ ನನ್ನದು ಎರಡೂ ಕಡೆಗೂ ಒಪ್ಪಿಗೆಯಾದ ಪಂಥವಿರಬೇಕು. ವಿಸರ್ಜನೆ ಆದ ಮೇಲೂ ಉಳಿಯುವುದು ನನ್ನ ಜಾಯಮಾನಕ್ಕೆ ಒಗ್ಗುವಂಥಾದಲ್ಲ. ನನ್ನ ಕೆಲಸಗಳಿಗೆ ಮರಳಿದ್ದೇನೆ ಎಂದು ರೋಹಿತ್ ಚಕ್ರತೀರ್ಥ ಹೇಳಿಕೊಂಡಿದ್ದಾರೆ.
ಮಹಾ ಪ್ರಮಾದ ಬೆಳಕಿಗೆ
ರೋಹಿತ್ ಚಕ್ರತೀರ್ಥ ನೇತೃತ್ವದ ಪರಿಷ್ಕರಣೆ ವೇಳೆ ಮಹಾಪ್ರಮಾದ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಇದ್ದ ಸಂವಿಧಾನ ಶಿಲ್ಪಿ ಎಂಬ ಬಿರುದನ್ನೇ ಚಕ್ರತೀರ್ಥ ಸಮಿತಿ ಕೈ ಬಿಟ್ಟಿದೆ.
9ನೇ ತರಗತಿಯ ನಮ್ಮ ಸಂವಿಧಾನ ಪಠ್ಯದಲ್ಲಿ ಆಗಿರುವ ಪರಿಷ್ಕರಣೆ ಆಗಿರುವ ಪರಿಷ್ಕೃತ ಪಠ್ಯದಲ್ಲಿ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎಂಬ ಅಂಶವನ್ನೇ ಕೈಬಿಟ್ಟಿದೆ. ನಮ್ಮ ಸಂವಿಧಾನ ಪಠ್ಯದಲ್ಲಿ ಕರಡು ರಚನಾ ಸಮಿತಿ ಬಗ್ಗೆ ಮಾಹಿತಿ ನೀಡುವ ವೇಳೆ ಅಂಬೇಡ್ಕರ್ ಅವರು ಸಂವಿಧಾನ ರಚನೆಗೆ ನೀಡಿದ್ದ ಕೊಡುಗೆಯನ್ನ ಆಧರಿಸಿ ಅವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗಿದೆ ಎಂಬ ಅಂಶ ಇತ್ತು. ಬರಗೂರು ರಾಮಚಂದ್ರಪ್ಪ ಸಮಿತಿಯ ಪರಿಷ್ಕರಣೆಯಲ್ಲಿ ಸಂವಿಧಾನ ಶಿಲ್ಪಿ ಪದ ಇತ್ತು. ಆದರೆ ರೋಹಿತ್ ಚಕ್ರತೀರ್ಥ ಸಮಿತಿ ಸಂವಿಧಾನ ಶಿಲ್ಪಿ ಪದವನ್ನೇ ಕೈಬಿಟ್ಟಿದೆ.
ಇದರ ಜೊತೆ ಸಂವಿಧಾನ ಕರಡು ಸಮಿತಿ ತನ್ನ ಕಾರ್ಯ ಮುಗಿಸಲು 2 ವರ್ಷ 11 ತಿಂಗಳು 18 ದಿನಗಳನ್ನ ತೆಗೆದುಕೊಂಡಿತ್ತು ಎಂಬ ವಿವರ ಇತ್ತು. ಇದನ್ನೂ ಕೂಡ ರೋಹಿತ್ ಸಮಿತಿ 145 ದಿನ ಸಭೆ ಸೇರಿತ್ತು ಎಂಬ ಅಂಶವನ್ನ ಮಾತ್ರ ಉಲ್ಲೇಖಿಸಿದೆ. ಅನೇಕರು ಇದು ಅಂಬೇಡ್ಕರ್ ಅವಹೇಳನ ಎಂದು ಕಿಡಿಕಾರುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವರಿಗೆಗೆ ಅವಹೇಳನ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
Published by:Mahmadrafik K
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ