ಬೆಂಗಳೂರು (ಡಿ.09): ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪುಡಿ ರೌಡಿಗಳು (Rowdies) ಬಾಲ ಬಿಚ್ಚಿದ್ದಾರೆ. ನಿನ್ನೆ (ಡಿ.8) ರಾತ್ರಿ 4 ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ (Kundalahalli Gate) ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಸಿಗರೇಟ್ (Cigarette) ಸೇದಲು ಹೋಗಿದ್ದಾರೆ. ಸಿಗರೇಟ್ ಕೇಳುವ ಕಾರಣಕ್ಕೆ ವಾಗ್ವಾದಕ್ಕಿಳಿದ ದುಷ್ಕರ್ಮಿಗಳು ಬೇಕರಿಯೊಂದರ (Bakery) ಸಿಬ್ಬಂದಿಗೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ಸಿಗರೇಟ್ ನೀಡಿ ಹಣ ಕೇಳಿದ್ದಕ್ಕೆ ಹಲ್ಲೆ
ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ರೌಡಿಗಳು ಅವ್ಯಾಚ್ಯ ಶಬ್ಧಗಳಿಂದ ನಿಂದಿಸುತ್ತಾ, ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪುಡಿ ರೌಡಿಗಳ ಹೆಡೆಮುರಿ ಕಟ್ಟಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ
ಬೆಂಗಳೂರು ಕುಂದನಹಳ್ಳಿ ಗೇಟ್ HAL ಸಮೀಪ ಬೇಕರಿಯೊಂದರ ಮೇಲೆ ನಿನ್ನೆನಡೆದ ದಾಂಧಲೆ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಪೊಲೀಸರಿಗೆ ಸೂಚಿಸಿದ್ದಾರೆ.
ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮ
ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಶಾಂತಿಯುತವಾಗಿ ಜೀವನ ನಿರ್ವಹಣೆ ಮಾಡಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಶ್ರಮಜೀವಿಗಳಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ರಕ್ಷಣೆ ನೀಡಬೇಕು ಎಂದು ಸೂಚಿಸಿದ್ದಾರೆ.
50ಕ್ಕೂ ಹೆಚ್ಚು ಜನರು ಠಾಣೆ ಎದುರು ಜಮಾಯಿಸಿದ್ರು
HAL ಬೇಕರಿಯಲ್ಲಿ ಪುಡಿರೌಡಿಗಳ ಪುಂಡಾಟ ಹಲ್ಲೆ ಖಂಡಿಸಿ ದಕ್ಷಿಣ ಕನ್ನಡ ಮೂಲದ ವ್ಯಾಪಾರಗಳು, ಉದ್ಯಮಿಗಳು ಎಚ್ ಎ ಎಲ್ ಮುಂದೆ ಜಮಾಯಿಸಿದ್ದಾರೆ. 50ಕ್ಕೂ ಹೆಚ್ಚು ಜನರು ಠಾಣೆ ಎದುರು ಪ್ರತಿಭಟನೆಗೆ ಮುಂದಾದ್ರು. ಠಾಣೆ ಬಳಿ ಆಗಮಿಸಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ
ಘಟನೆ ಬಗ್ಗೆ ಠಾಣೆಯಲ್ಲಿ ಚರ್ಚೆ ನಡೆಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದನವೀನ್, ಪ್ರಜ್ವಲ್, ನಿತಿನ್ ಹೆಚ್ ಎ ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚಿಗೆ ಬಾಗಲಕೋಟೆಯಲ್ಲಿ ಬರ್ಬರ ಹತ್ಯೆ
ಇತ್ತೀಚೆಗೆ ರಾಜ್ಯ ರಾಜಧಾನಿಯಲ್ಲಿ ಅನೇಕ ಅಪರಾಧ ಕೃತ್ಯಗಳು (Crime) ವರದಿಯಾಗುತ್ತಿವೆ. ಸದ್ಯ ಕೆಪಿ ಅಗ್ರಹಾರ ಬಳಿ ನಡೆದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣ ಸದ್ದು ಮಾಡುತ್ತಿದೆ. ಈ ಕೊಲೆಯ (Murder) ದೃಶ್ಯಗಳು ಸಿಸಿಟಿಯಲ್ಲಿ (CCTV) ಸೆರೆಯಾಗಿವೆ. ಇತ್ತೀಚಿಗೆ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ ಕಲ್ಲು ಎತ್ತಿ ಹಾಕಿ ಕುಕೃತ್ಯ ಎಸಗಿದ್ದಾರೆ.
ಇದನ್ನೂ ಓದಿ: Shocking Crime: ಡ್ರಮ್ನಲ್ಲಿತ್ತು ಮಹಿಳೆಯ ದೇಹ! ವರ್ಷದ ಹಿಂದೇ ನಡೆದಿತ್ತಾ ಬರ್ಬರ ಕೊಲೆ?
ಸದ್ಯ ಮೃತ ವ್ಯಕ್ತಿ ಯಾರೆಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾದಾಮಿ ಮೂಲದ 26 ವರ್ಷದ ಬಾಳಪ್ಪ ಜಮಖಂಡಿ ಎಂಬವರೇ ಕೊಲೆಗೀಡಾದ ವ್ಯಕ್ತಿ. ಮೊದಲಿಗೆ ಮಹಿಳೆಯೊಬ್ಬರು ಬಾಳಪ್ಪ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದರು. ಬಳಿಕ ಕೆಲವರು ಬಾಳಪ್ಪ ಜಮಖಂಡಿಯನ್ನು ಹಿಡಿದಿದ್ದರು. ಅಷ್ಟರಲ್ಲಿ ಉಳಿದವರು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದರು. ಸದ್ಯ ಕೊಲೆ ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳ ಕಾರ್ಯಾಚರಣೆ ಆರಂಭಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ