ಬೆಂಗಳೂರು(ನ.04): ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆ ನಿನ್ನೆ ಮುಗಿದಿದ್ದು, ಅಭ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರ ನಡೆಸುತ್ತಿದ್ದಾರೆ. ಚುನಾವಣೆ ಬಳಿಕ ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಆರ್ ಆರ್ ನಗರದಲ್ಲಿ ಗೆಲ್ಲುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಕೊರೋನಾ ಸಮಯದಲ್ಲಿ 45 % ಮತದಾನವಾಗಿರೋದು ಒಳ್ಳೆಯ ಮತದಾನ. ಕಳೆದ ಬಾರಿಗಿಂತ 7 % ಮತದಾನ ಕಡಿಮೆಯಾಗಿದೆ. ಕಡಿಮೆ ಮತದಾನವಾಗಿರೋದು ಯಾರಿಗೆ ಲಾಭ ಅನ್ನೋ ಪ್ರಶ್ನೆಗೆ, ಕಳೆದ 134 ವರ್ಷಗಳಿಂದ ಅದನ್ನೇ ಹೇಳಿಕೊಂಡು ಬರುತ್ತಿದ್ದಾರೆ. ಕಡಿಮೆ ಪರ್ಸೆಂಟೇಜ್ ಆದ್ರೆ ನಮಗೆ ಲಾಭ ಅಂತ ಹೇಳ್ತಾ ಬರ್ತಿದ್ದಾರೆ. ಆದ್ರೆ ಜನರು ತುಂಬಾ ಬುದ್ದಿವಂತರಿದ್ದಾರೆ. 20% ಆಗ್ಲಿ 30 % ಆಗ್ಲಿ ಅಭಿವೃದ್ಧಿ ಮಾಡಿದವರಿಗೆ ಜನರು ವೋಟ್ ಹಾಕ್ತಾರೆ. ಕಡಿಮೆ ಮತದಾನವಾದರೆ ನಮಗೆ ಲಾಭ ಆಗುತ್ತೆ ಅನ್ನೋದನ್ನ ಬಿಟ್ಟು, ಮುಂದೆ ಜನರ ಜೊತೆ ಯಾವ ರೀತಿ ಬೆರೆಯಬೇಕು ಎಂಬುದು ಚಿಂತೆ ಮಾಡಿದ್ರೆ ಕಾಂಗ್ರೆಸ್ ಉಳಿಯುತ್ತೆ ಎಂದು ವ್ಯಂಗ್ಯ ಮಾಡಿದ್ದಾರೆ.
50 ಸಾವಿರ ಮತಗಳಿಂದ ಮುನಿರತ್ನ ಗೆಲ್ತಾರೆ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪನರು ಹಿರಿತನದ ಆಧಾರದಲ್ಲಿ ಹೇಳಿದ್ದಾರೆ. ನಾನು ಮತದಾರರಲ್ಲಿ ಮತ ಭಿಕ್ಷೆ ಕೇಳಿದ್ದೇನೆ. ಎಷ್ಟು ಮತಗಳಿಂದ ಗೆಲ್ಲುತ್ತೇನೆ ಎನ್ನುವುದನ್ನು ಈಗ ಹೇಳುವುದಿಲ್ಲ. ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪುವುದಿಲ್ಲ. ಇದು ಸೂರ್ಯ-ಚಂದ್ರ ಇರೋವರೆಗೂ ಸತ್ಯ ಎಂದರು.
ಭೀಮಾ ತೀರದ ಶೂಟೌಟ್ ಪ್ರಕರಣ; ಪರಸ್ಪರ 17 ಸುತ್ತಿನ ಗುಂಡಿನ ದಾಳಿ, ಸ್ಥಳದಲ್ಲೇ ಮೊಕ್ಕಾಂ ಹೂಡಿದ ಐಜಿ
ಮುಂದುವರೆದ ಅವರು, ನಾವು ಕಾಂಗ್ರೆಸ್ನಿಂದ ಹೊರ ಬಂದಾಗ ಕೆಲವರು ಶುಭ ಕೋರಿದರು. ನಿಮಗೆ ಒಳ್ಳೆಯದಾಗಲಿ, ಒಳ್ಳೆಯ ಪೋರ್ಟ್ ಪೋಲಿಯೋ ಸಿಗಲಿ ಅಂತ. ಅವರು ಸಹ ಹೇಳಿದ್ದಾರೆ ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಅಂತ. ನನಗೆ ಆಶೀರ್ವಾದ ಮಾಡಿ ಕಳಿಸಿದವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಪವರ್ ಖಾತೆಯನ್ನೇ ತಗೋ, ಪವರ್ ಖಾತೆಯನ್ನೇ ತಗೋ ಯಾರಿಗೂ ಬಿಟ್ಟುಕೊಡಬೇಡ ಅಂದಿದ್ದಾರೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ