ಆರ್ ಆರ್ ನಗರ ಉಪಚುನಾವಣೆ: ಮತದಾನ ಪ್ರಾರಂಭ - ಪ್ರತಿ ಮತಗಟ್ಟೆಯಲ್ಲೂ ಬಿಗಿಭದ್ರತೆ

RR Nagar Bypoll Voting - ರಾಜರಾಜೇಶ್ವರಿ ನಗರ ಕೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ಅದರಲ್ಲಿ 82 ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಅದ್ರಿಂದ 82 ಅತಿಸೂಕ್ಷ್ಮ ಮತಗಟ್ಟೆಗಳಿಗೆ CAPF ತುಕಡಿ ಹಾಗೂ ಸ್ಥಳೀಯ ಪೊಲೀಸರಿಂದ ಹೆಚ್ಚಿನ ಭದ್ರತೆ ಕಲ್ಪಿಸಲು ಮುಂದಾಗಿದ್ದಾರೆ.

ವೋಟಿಂಗ್ ಬೂತ್ ಮುಂದೆ ಭದ್ರತಾ ವ್ಯವಸ್ಥೆ

ವೋಟಿಂಗ್ ಬೂತ್ ಮುಂದೆ ಭದ್ರತಾ ವ್ಯವಸ್ಥೆ

  • Share this:
ಬೆಂಗಳೂರು(ನ. 03): ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ ಏಳರಿಂದ ಸಂಜೆ ಆರರವರೆಗೆ ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ತೀವ್ರ ವಾಕ್ಸಮರದಿಂದ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿದ್ದ ಈ ಕ್ಷೇತ್ರದಲ್ಲಿ ಎಲ್ಲೆಡೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಲು ಪೊಲೀಸರು ಸಕಲ ಸಿದ್ದತೆ ನಡೆಸಿದ್ದು ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಆರ್ ಆರ್ ನಗರ ಅತಿ ಸೂಕ್ಷ್ಮ ಕ್ಷೇತ್ರವಾಗಿದ್ದು ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಸಲುವಾಗಿ 2563 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಕ್ಷೇತ್ರದಲ್ಲಿ ಮೂವರು ಡಿಸಿಪಿಗಳು, 8 ಎಸಿಪಿ, 30 ಇನ್ಸ್‌ಪೆಕ್ಟರ್, 94 ಪಿಎಸ್ಐ, 185 ಎಎಸ್ಐ, 1547 ಕಾನ್ಸ್ ಟೇಬಲ್ ಗಳು, 699 ಹೋಂ ಗಾರ್ಡ್, 19 ಕೆಎಸ್ಆರ್ ಪಿ, 20 ಸಿಎಆರ್ ತುಕಡಿ, 3 ಸಿಎಪಿಎಫ್ ಪ್ಯಾರಾ ಮಿಲಿಟರಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ.

ರಾಜರಾಜೇಶ್ವರಿ ನಗರ ಕೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ಅದರಲ್ಲಿ 82 ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಅದ್ರಿಂದ 82 ಅತಿಸೂಕ್ಷ್ಮ ಮತಗಟ್ಟೆಗಳಿಗೆ CAPF ತುಕಡಿ ಹಾಗೂ ಸ್ಥಳೀಯ ಪೊಲೀಸರಿಂದ ಹೆಚ್ಚಿನ ಭದ್ರತೆ ಕಲ್ಪಿಸಲು ಮುಂದಾಗಿದ್ದಾರೆ. ಹಾಗೂ 112 ಮೊಬೈಲ್ ಸ್ಕ್ವಾಡ್ ನಿಯೋಜಿಸಲಾಗಿದ್ದು ಈ ತಂಡವು ಪ್ರತಿ ಬೂತ್ ಗೆ ತೆರಳಿ ಬಂದೋಬಸ್ತ್ ಹಾಗೂ ಮತಗಟ್ಟೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ ನಿಗಾ ಇಡಲಿದ್ದಾರೆ. ಅದೇ ರೀತಿ ಆರ್ ಆರ್ ನಗರ ವ್ಯಾಪ್ತಿಯಲ್ಲಿ ಪೊಲೀಸರ ಗಸ್ತು ಹೆಚ್ಚಿಸಲು 32 ಹೊಯ್ಸಳ ವಾಹನ ಮತ್ತು 91 ಚೀತಾಗಳನ್ನ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಇಂದು ಶಿರಾ, ಆರ್ ​ಆರ್ ನಗರ ಉಪಚುನಾವಣೆ; ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಕೇರಳದಿಂದ ಸ್ಪೆಶಿಯಲ್ ಪೊಲೀಸ್ ಪಡೆಗಳನ್ನ ಕರೆಸಲಾಗಿದೆ. ಕೊರೋನಾ ಸೋಂಕಿತರಿಗೆ ಸಂಜೆ 5ರಿಂದ 6ರವರೆಗೆ ವೋಟಿಂಗ್ ಮಾಡಲು ಅವಕಾಶ ನೀಡಲಾಗಿದೆ. ಪ್ರತೀ ಮತಗಟ್ಟೆಯಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿಗೆ ಫೇಸ್ ಮಾಸ್ಕ್, ಕೈಗವಚ ಒದಗಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಪಿಪಿಇ ಕಿಟ್, ಸ್ಯಾನಿಟೈಸರ್ ವ್ಯವಸ್ಥೆ ಇದೆ. ಸಾಮಾಜಿಕ ಅಂತರಕ್ಕೆ ಪಾಲನೆಯಾಗುವಂತೆ ಸೂಚನೆ ನೀಡಲಾಗಿದೆ. ವಿಶೇಷ ಚೇತನದ ಮತದಾರರಿಗೆ ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ.

ಮೂರು ಪಕ್ಷಗಳ ಪೈಪೋಟಿಯಿಂದಾಗಿ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿರುವ ಆರ್ ಆರ್ ನಗರದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸಲು ಖಾಕಿ ಪಡೆ ಸಕಲ ವ್ಯವಸ್ಥೆಗಳನ್ನ ಮಾಡಿಕೊಂಡಿದೆ.

ವರದಿ: ಮುನಿರಾಜು ಹೊಸಕೋಟೆ
Published by:Vijayasarthy SN
First published: