ಆರ್ಆರ್ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕೇಸ್ ದಾಖಲು
ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ವಿರುದ್ದ FIR ದಾಖಲಾಗಿದೆ. ಮುನಿರತ್ನ ಮತದಾರರಿಗೆ ಒಂದು ವೋಟಿಗೆ 5 ಸಾವಿರದ ಆಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬೆಂಗಳೂರು (ಅ. 27): ದಿನೇದಿನೆ ಆರ್ಆರ್ ನಗರ ಉಪಚುನಾವಣೆ ರಂಗೇರುತ್ತಲೇ ಇದೆ. ಒಂದು ಕಡೆ ಈಗಾಗಲೇ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಗ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೇಲೆಯೂ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಯಶವಂತಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ನೀಡಿದ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರಿಂದ ದೂರು-ಪ್ರತಿದೂರು ದಾಖಲಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ವಿರುದ್ದ FIR ದಾಖಲಾಗಿದೆ. ಮುನಿರತ್ನ ಮತದಾರರಿಗೆ ಒಂದು ವೋಟಿಗೆ 5 ಸಾವಿರದ ಆಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮುನಿರತ್ನ ಅವರ ಬೆಂಬಲಿಗರಾದ ನಸ್ರುತುಲ್ಲಾ ಇಮ್ರಾನ್ ಜಮೀರ್ ದಿಲ್ಕದ್ ಹನೀಫ್ ಹಾಗೂ ಸುನೀತಾ ಹಣದ ಆಮಿಷ ಒಡ್ಡಿದ್ದು, ಹೆಚ್ಎಂಟಿ ಲೇಔಟ್ ಹಾಗೂ ಲಕ್ಷ್ಮಿದೇವಿ ನಗರಗಳಲ್ಲಿ ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ಸಲೀಂ ಅಹಮದ್ ದೂರು ನೀಡಿದ್ದರು. ಈ ದೂರಿನ ಅನ್ವಯವಾಗಿ ಯಶವಂತಪುರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಇದರ ಜೊತೆಗೆ ಆರ್.ಆರ್ ನಗರ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನನ್ವಯ ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ವಿರುದ್ದ FIR ದಾಖಲಾಗಿದೆ.
ಹೆಚ್.ಎಂ.ಟಿ ಲೇಔಟ್ ನಲ್ಲಿ ನಾರಾಯಣಸ್ವಾಮಿ ಮತದಾರರ ಗುರುತಿನ ಚೀಟಿ ಕಲೆಕ್ಟ್ ಮಾಡುತ್ತಿದ್ದಾರೆ. ಗುರುತಿನ ಚೀಟಿ ಹಾಗೂ ಮೊಬೈಲ್ ನಂಬರ್ ಕಲೆಕ್ಟ್ ಮಾಡಿ ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರು ನೀಡಿದ್ದರಿಂದ MLC ನಾರಾಯಣಸ್ವಾಮಿ ಮೇಲೆಯೂ ಎಫ್ ಐ ಆರ್ ದಾಖಲಾಗಿದೆ. ಒಟ್ಟಿನಲ್ಲಿ ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲೆ ಎಫ್ ಐ ಆರ್ ಆಗಿದ್ದು, ಈಗ ಬಿಜೆಪಿ ಅಭ್ಯರ್ಥಿ ಮೇಲೆಯೂ ಎಫ್ ಐ ಆರ್ ಆಗಿದೆ. ಏನೇ ಆಗಲಿ, ಆರ್ ಆರ್ ನಗರ ಉಪಚುನಾವಣೆಯಂತೂ ಈ ಬಾರಿ ಜಿದ್ದಾಜಿದ್ದಿನಿಂದ ಕೂಡಿರೋದು ಮಾತ್ರ ಸತ್ಯ.
ಆರ್ಆರ್ ನಗರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಹದ್ದಿನಕಣ್ಣು ಇಟ್ಟಿದ್ದಾರೆ. ಆರ್ಆರ್ ನಗರಕ್ಕೆ ಎಂಟ್ರಿ ಹಾಗೂ ಎಕ್ಸಿಟ್ ಆಗುವ ಕಡೆಗಳಲ್ಲಿ ಚೆಕ್ಪೋಸ್ಟ್ ನಿರ್ಮಿಸಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ತಪಾಸಣೆಗೆ SST ತಂಡ ನಿಯೋಜನೆ ಮಾಡಲಾಗಿದೆ. ಸ್ಟಾಟಿಕ್ ಸರ್ವೈಲೆನ್ಸ್ ಟೀಂ (ಎಸ್ಎಸ್ಟಿ) ತಂಡದಲ್ಲಿ ಇಬ್ಬರು ಬಿಬಿಎಂಪಿ ಇಂಜಿನಿಯರ್ಗಳು, ಇಬ್ಬರು ಪೊಲೀಸ್ ಸಿಬ್ಬಂದಿ, ಓರ್ವ ಅಬಕಾರಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಂದು ಚೆಕ್ಪೋಸ್ಟ್ನಲ್ಲಿ 5 ಮಂದಿ ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ