RR Nagar Sira By Election 2020 Result Live: ಕರ್ನಾಟಕ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಅರಳಿದ ಕಮಲ

Assembly Election 2020 Result LIVE: ಶಿರಾ ಮತ್ತು ಆರ್​ ಆರ್​ ನಗರ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದೆ. ಇಂದು ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಆ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...

ಮುನಿರತ್ನ- ರಾಜೇಶ್ ಗೌಡ

ಮುನಿರತ್ನ- ರಾಜೇಶ್ ಗೌಡ

  • Share this:
    ಕರ್ನಾಟಕದ ಶಿರಾ ಮತ್ತು ಆರ್​ ಆರ್​ ನಗರ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಆರ್​ ಆರ್​ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕುಸುಮಾ ಹೆಚ್‌ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ಸ್ಪರ್ಧಿಸಿದ್ದಾರೆ. ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್​ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಕಣದಲ್ಲಿದ್ದಾರೆ. ಆರೂ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. 

    ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿದ್ದ ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ.
    Published by:Sushma Chakre
    First published: