ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಆಡಳಿತರೂಢ ಬಿಜೆಪಿ (BJP) ಪಕ್ಷ ಹೀನಾಯ ಸೋಲುಂಡಿದೆ. ಇದರ ಬೆನ್ನಲ್ಲೇ ರಾಜ್ಯಪಾಲರನ್ನು (Governor) ಭೇಟಿ ಮಾಡಿದ್ದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಕೆ ಮಾಡಿದ್ದರು. ಈ ನಡುವೆ ನಿನ್ನೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಹಲವು ಬಿಜೆಪಿ ನಾಯಕರು ತಮ್ಮ ಸೋಲಿಗೆ ಕಾರಣಗಳನ್ನು ನೀಡಿದ್ದರು. ಈ ಎಲ್ಲಾ ಬೆಳವಣಿಗಗಳ ನಡುವೆ ಇಂದು ಆರ್ಎಸ್ಎಸ್ (RSS) ನಾಯಕರು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬುಲಾವ್ ನೀಡಿದ್ದು, ರಹಸ್ಯ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಚುನಾವಣೆ ಸೋಲಿನ ಕುರಿತಂತೆ ಚರ್ಚೆ ನಡೆಸಿ, ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕಾಂಗ ಸಭೆ ಇಂದು ಘೋಷಣೆ ಸಾಧ್ಯತೆ
ಇಂದು ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಕಚೇರಿ ಕೇಶವಕೃಪಾಕ್ಕೆ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ಆರ್ಎಸ್ಎಸ್ ನಾಯಕರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಸಭೆಯಲ್ಲಿ ಚುನಾವಣೆ ಫಲಿತಾಂಶ ಬಗ್ಗೆ ಚರ್ಚೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ಪುನರ್ ಸಂಘಟನೆ ಮಾಡುವ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.
ಇದನ್ನೂ ಓದಿ: DK Shivakumar: ಬರ್ತ್ಡೇಗೆ ಸಿಕ್ಕ ಗಿಫ್ಟ್ ರಿವೀಲ್ ಮಾಡಿದ ಡಿಕೆಶಿ; ಇತ್ತ ತಂದೆಗೆ ಮಗಳ ಸ್ಪೆಷಲ್ ವಿಶ್
ಹಲವು ಸಲ ನಮ್ಮ ರಾಜ್ಯಾಧ್ಯಕ್ಷ ರು ವರಿಷ್ಠರ ಜತೆ ಚರ್ಚೆ ಮಾಡಿ ಪಕ್ಷ ಸಂಘಟನೆ ಬಗ್ಗೆ ನಿರ್ಧರಿಸುತ್ತಾರೆ. ಶಾಸಕಾಂಗ ಪಕ್ಷದ ಸಭೆ ಬಗ್ಗೆ ಇವತ್ತು ಘೋಷಣೆ ಮಾಡಲಾಗುತ್ತದೆ. ರಾಜ್ಯಾಧ್ಯಕ್ಷರು ಇವತ್ತು ಸಭೆ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ತಿಳಿಸಿದರು.
ಇನ್ನು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವನ್ನು ವಿಶ್ಲೇಷಣೆ ಮಾಡಿರುವ ಆರ್ಎಸ್ಎಸ್ ನಾಯಕರು ಪಕ್ಷ ಸಂಘಟನೆ ಬೊಮ್ಮಾಯಿ ಅವರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಕಾರ್ಯಕರ್ತರದಲ್ಲಿ ಪಕ್ಷದ ನೇತೃತ್ವ ವಹಿಸಿಕೊಂಡಿರುವವರ ಬಗ್ಗೆ ಅಸಮಾಧಾನವಿದೆ. ಹಿರಿಯ ನಾಯಕರಿಗೆ ಟಿಕೆಟ್ ನೀಡಿದ ಸಂದರ್ಭವನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದದ್ದು ಸೇರಿದಂತೆ ಪಕ್ಷದಲ್ಲಿರುವ ಸಮರ್ಥ ಕಾರ್ಯಕರ್ತರನ್ನು ಅವರಿಗೆ ಉತ್ತಮ ಸ್ಥಾನವನ್ನು ನೀಡಿ ಒಂದು ಉತ್ತಮ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಲು ಅಗತ್ಯ ಸೂಚನೆಗಳನ್ನು ಆರ್ಎಸ್ಎಸ್ ನಾಯಕರು ನೀಡಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ