ಮಂಗಳೂರು: ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ (RSS Leader Kalladka Prabhakar Bhat) ಮಂಗಳೂರಿನಲ್ಲಿ ಶನಿವಾರ ದಿ ಕೇರಳ ಸ್ಟೋರಿ (The Kerala Story Cinema) ಸಿನಿಮಾ ವೀಕ್ಷಣೆ ಮಾಡಿದರು. ಚಿತ್ರ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಈ ಸಿನಿಮಾವನ್ನು ಪ್ರತಿಯೊಬ್ಬ ಹಿಂದೂ ಹೆಣ್ಣು ಮಗಳು (Woman) ಕುಟುಂಬದ ಜೊತೆಗೆ ನೋಡಬೇಕು. ಅವರ ಅತೀ ಮತೀಯವಾದ ಮತ್ತು ನಮ್ಮ ಮಕ್ಕಳಿಗೆ ಧರ್ಮದ ತಿಳುವಳಿಕೆ ಇಲ್ಲದಿರೋದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ರೀತಿಯ ಅನ್ಯಾಯವನ್ನು ಜಗತ್ತು ಒಪ್ಪಬಾರದು. ಹೆಣ್ಣು ಮಗಳ ಮೇಲೆ ಅನ್ಯಾಯ ಆದಾಗ ಸಮಾಜ ಸುಮ್ಮನೆ ಕೂರಬಾರದು. ಕಾಂಗ್ರೆಸ್, ಕಮ್ಯುನಿಸ್ಟ್, ಜನತಾದಳ ಈ ಅನ್ಯಾಯಕ್ಕೆ ಪ್ರೇರಣೆ ನೀಡುತ್ತಾರೆ ಎಂದು ಆರೋಪಿಸಿದರು.
ಕೇರಳದಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಹೆಣ್ಣುಮಕ್ಕಳ ಮತಾಂತರ ಆಗಿದೆ. ಮತಾಂತರ ಆದ ಬಳಿಕ ಕ್ರೂರ ರೀತಿಯಲ್ಲಿ ಅತ್ಯಾಚಾರ ಮಾಡಲಾಗಿದೆ. ಈ ಚಿತ್ರ ನೋಡಿ ಹೆಣ್ಣು ಮಕ್ಕಳು ಯೋಚನೆ ಮಾಡಬೇಕು. ತಂದೆ-ತಾಯಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.
ಪೋಷಕರಿಗೆ ಸಲಹೆ ನೀಡಿದ ಪ್ರಭಾಕರ್ ಭಟ್!
ಪೋಷಕರು ಮಕ್ಕಳನ್ನು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಊರಿಗೆ ಕಳುಹಿಸೋವಾಗ ಎಚ್ಚರಿಕೆಯಿಂದ ಇರಬೇಕು. ಮತಾಂತರ ನಿಷೇಧ ಕಾಯಿದೆಯನ್ನು ಬಿಜೆಪಿ ತಂದಿದೆ.
ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಯಿದೆ ವಾಪಸ್ ತೆಗೆದುಕೊಳ್ಳೊದಾಗಿ ಹೇಳಿದೆ. ಕಾಂಗ್ರೆಸ್ ಅಧಿಕಾರ ಬಂದಾಗ ಹೆಣ್ಣು ಮಕ್ಕಳು ನೋವು ಅನುಭವಿಸುತ್ತಾರೆ ಅನ್ನೋದು ಅವರ ಮಾತಿನಲ್ಲಿ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಈ ಚಿತ್ರ ಎಚ್ಚರಿಕೆಯ ಗಂಟೆ
ರಾಜೀವ್ ಗಾಂಧಿ ಸರ್ಕಾರ ಅತ್ಯಾಚಾರ ಮಾಡುವ ಗಂಡು ಮಕ್ಕಳಿಗೆ ಪ್ರೇರಣೆ ನೀಡಿದೆ. ಚುನಾವಣಾ ಸಂಧರ್ಭದಲ್ಲಿ ಜನ ಎಚ್ಚೆತ್ತು ಕಾಂಗ್ರೆಸ್ ಪಕ್ಷವನ್ನು ದೂರ ಇಡಬೇಕು.
ಈ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ನೀಡಿದೆ. ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷ ಮತಕ್ಕೋಸ್ಕರ ಏನು ಮಾಡೋಕೂ ತಯಾರಿದೆ. ದೇಶ,ಸಂಸ್ಕೃತಿ,ಧರ್ಮ ಉಳಿಯೋಕೆ ಕಾಂಗ್ರೆಸ್ ದೂರ ಇಡಬೇಕಿದೆ. ಅವರ ಸಂಖ್ಯೆ ಹೆಚ್ಚಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಮುಂದಾಗಿದೆ ಎಂದರು.
ಲವ್ ಜಿಹಾದ್
ಕೇರಳದಲ್ಲಿ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಪಿಣರಾಯಿ ಮಕ್ಕಳ ಕಥೆಯೇನು ಎಂಬುದನ್ನು ಯೋಚನೆ ಮಾಡಬೇಕಿದೆ. ತನ್ನ ಹೆಂಡತಿ ಮಕ್ಕಳು ಹಿಂದೂಗಳಾಗಿ ಉಳಿಯಲಿ ಎಂದು ಯೋಜನೆ ಮಾಡಲಿ.
ಇದನ್ನೂ ಓದಿ: DK Shivakumar: ಚುನಾವಣಾ ಅಖಾಡದಲ್ಲಿ ಡಿಕೆ ಶಿವಕುಮಾರ್ ಪುತ್ರ; ತಂದೆಯ ಪರ ಆಕಾಶ್ ಭರ್ಜರಿ ಪ್ರಚಾರ
ಲವ್ ಜಿಹಾದ್ನಲ್ಲಿ ಏನಾಗುತ್ತದೆ ಎಂಬುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಹೆಣ್ಣು ಮಕ್ಕಳು ನಮಗೆ ದೇವಿ ಮತ್ತು ತಾಯಿಯ ರೀತಿ. ಸರ್ಕಾರ ಎಚ್ಚರಿಕೆಯಿಂದ ಕಾನೂನನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ