RUPSA: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ರುಪ್ಸಾ ಪ್ರತಿಭಟನೆ

ರಾಜ್ಯದ 30 ಜಿಲ್ಲೆಗಳಿಂದ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಮೌರ್ಯ ಸರ್ಕಲ್ ನಿಂದ ಫ್ರೀಡಂ ಪಾರ್ಕ್​ವರೆಗೆ ಮೆರವಣಿಗೆ ಹೊರಡಲಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು(ಜ.06): ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಮತ್ತು ಶಿಕ್ಷಣ ಇಲಾಖೆಯು ನಿರ್ಲಕ್ಷ್ಯ ತೋರುತ್ತಿದೆ ಎಂದು ಖಂಡಿಸಿ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬೃಹತ್​ ಪ್ರತಿಭಟನೆ ನಡೆಸಲಿದೆ. ರುಪ್ಸಾ ಒಕ್ಕೂಟ ಸರ್ಕಾರದ ಮುಂದೆ 13 ಬೇಡಿಕೆಗಳನ್ನ‌ ಇಟ್ಟಿದೆ. ಆದರೆ ಸರ್ಕಾರ ಈವರೆಗೆ ಯಾವುದೇ ಬೇಡಿಕೆಯನ್ನು ಈಡೇರಿಸಿಲ್ಲ. ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರು ಬೇಜಾವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಇಂದು ಬೃಹತ್ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ರುಪ್ಸಾ ಒಕ್ಕೂಟ ತಿಳಿಸಿದೆ.

    ರುಪ್ಸಾ ಒಕ್ಕೂಟ ಸರ್ಕಾರ ಮುಂದೆ ಇಟ್ಟಿರುವ ಬೇಡಿಕೆಗಳೇನು?

    • ಸಂಕಷ್ಟದಲ್ಲಿ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ಘೋಷಣೆ ಮಾಡಬೇಕು.

    • ಕನಿಷ್ಠ ಒಂದು ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು.

    • ಸಂಬಳ ಇಲ್ಲದ ಶಿಕ್ಷಕರಿಗೆ ಪ್ರತಿ ತಿಂಗಳ 10 ಸಾವಿರ ನೀಡಬೇಕು.

    • 1985 ರಿಂದ ಅನುದಾನ ರಹಿತ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು.

    • 10-11-2020 ರಂದು ಹೊರಡಿಸಿರುವ ಸುತ್ತೋಲೆ‌ ಸರ್ಕಾರ ಮರು ಪರಿಶೀಲನೆಗೆ ಒತ್ತಾಯ.

    • ಶಾಲೆಗಳ ಮಾನ್ಯತೆ ನವೀಕರಣವನ್ನ ಅದಾಲತ್ ರೂಪದಲ್ಲಿ ವಿಲೇವಾರಿ ಮಾಡಬೇಕು.

    • ಗಡಿಭಾಗದ ಶಾಲೆಗಳ ಮುಚ್ಚುವ ನಿರ್ಧಾರ ಹಿಂಪಡೆಯಬೇಕು.

    • 2020-21 ನೇ ಸಾಲಿನ ಆರ್.ಟಿ.ಇ ಹಣ ಒಂದೇ ಕಂತಿನಲ್ಲಿ ಮರು ಪಾವತಿ ಮಾಡಬೇಕು.

    • ಆರ್.ಟಿ.ಇ ಪುನರ್ ಅನುಷ್ಠಾನಕ್ಕೆ ತರುವಂತೆ ಖಾಸಗಿ ಶಾಲೆಗಳ ಒತ್ತಾಯ.


    ಇಷ್ಟು ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ನಡೆಸಲು ಮುಂದಾಗಿದೆ. ಶಿಕ್ಷಣ ಇಲಾಖೆಯ ಧೋರಣೆ ಖಂಡಿಸಿ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ನಡೆಸುತ್ತಿದೆ. ಕಳೆದ ಮೂರು ತಿಂಗಳಿಂದ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಕೊಟ್ಟಿದ್ದೆವು. ಆದರೆ ಎರಡು ಬೇಡಿಕೆಗಳನ್ನು ಮಾತ್ರ ಈಡೇರಿಸಿದೆ. ಉಳಿದ 13 ಬೇಡಿಕೆಗಳು ಹಾಗೆಯೇ ಉಳಿದಿದ್ದು, ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಜ.6 ರಂದು ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕಳೆದ 2 ದಿನಗಳ ಹಿಂದೆ ಹೇಳಿದ್ದರು.

    ರುಪ್ಸಾ ಪ್ರತಿಭಟನೆ ವಿರುದ್ಧ ತಿರುಗಿಬಿದ್ದ ಖಾಸಗಿ ಅನುದಾನಿತ ಶಾಲೆಗಳ ಒಕ್ಕೂಟ

    ರಾಜ್ಯದ 30 ಜಿಲ್ಲೆಗಳಿಂದ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಮೌರ್ಯ ಸರ್ಕಲ್ ನಿಂದ ಫ್ರೀಡಂ ಪಾರ್ಕ್​ವರೆಗೆ ಮೆರವಣಿಗೆ ಹೊರಡಲಾಗುತ್ತದೆ.

    ಇಂದು ಆಫ್ ಲೈನ್ - ಆನ್ ಲೈನ್ ಕ್ಲಾಸ್ ಗಳು ಎಂದಿನಂತೆ ನಡೆಯಲಿವೆ. ತರಗತಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರತೀ ಶಾಲೆಯಿಂದ ಒಬ್ಬರು‌ ಅಥವಾ ಇಬ್ಬರು ಪ್ರತಿನಿಧಿಗಳು ಪ್ರತಿಭಟನೆಗೆ ಬರಲಿದ್ದಾರೆ.  ಇದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ಸರ್ಕಾರ ಎಚ್ಚೆತ್ತುಕೊಂಡಿಲ್ಲ ಅಂದ್ರೆ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ರುಪ್ಸಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. 'ಶಿಕ್ಷಣ ಮಂತ್ರಿಗಳೇ ತೊಲಗಿ' ಎಂಬ ಶೀರ್ಷಿಕೆಯಡಿ ಪ್ರತಿಭಟನೆ ನಡೆಸಲಾಗುತ್ತದೆ.

    ಇಂದು ನಡೆಯುವ ಪ್ರತಿಭಟನೆಗೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ಶಿಕ್ಷಕರು ಮತ್ತು ಆಡಳಿತ ವರ್ಗ, ಮೈನಾರಿಟಿ ಅಸೋಸಿಯೇಷನ್, ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಹೀಗೆ ಮುಂತಾದ ಸಂಘಟನೆಗಳು ಬೆಂಬಲ ನೀಡಿವೆ.
    Published by:Latha CG
    First published: