ಬೆಂಗಳೂರು (ಜನವರಿ 08); ವಿಧಾನ ಪರಿಷತ್ ದಿವಂಗತ ಮಾಜಿ ಉಪ ಸಭಾಪತಿ ಧರ್ಮೇಗೌಡ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮೈಸೂರಿನಲ್ಲಿ ಹೇಳಿಕೆ ನೀಡಿದ್ದ ಮಾಜಿ ಸಚಿವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್, "ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ಇಬ್ಬರೂ ಕರ್ನಾಟಕದ ಬಫೂನ್ಗಳು ಎಂದು ಅಪಹಾಸ್ಯ ಮಾಡಿದ್ದರು. ಅಲ್ಲದೆ, ಕುಮಾರಸ್ವಾಮಿ ಧರ್ಮೇಗೌಡ ಅವರ ಸಾವು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಅಸಲಿಗೆ ಈ ಇಬ್ಬರೂ ನಾಯಕರು ಏಕೆ ಮಾತನಾಡುತ್ತಾರೆ?. ಜನರೇ ಇವರನ್ನು ಬಫೂನ್ ತರ ನೋಡುತ್ತಿರುವಾಗ ಇವರು ಯಾರಿಗಾಗಿ ಮಾತನಾಡುತ್ತಿದ್ದಾರೆ?" ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಹೆಚ್. ವಿಶ್ವನಾಥ್ ಅವರ ಈ ಹೇಳಿಕೆಗೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಸಾರಾ ಮಹೇಶ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೆಚ್. ವಿಶ್ವನಾಥ್ ಅವರದ್ದು ಆಚಾರವಿಲ್ಲದ ನಾಲಿಗೆ. ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹೆಚ್. ವಿಶ್ವನಾಥ್ ಅವರ ಹೇಳಿಕೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಸಾರಾ ಮಹೇಶ್, "ಬೊಂಬಾಯಿ ಮಿಠಾಯಿ ವಿಶ್ವನಾಥ್' ಅವರ ನಾಲಿಗೆಗೆ ಇನ್ನೊಬ್ಬರನ್ನು ವ್ಯಕ್ತಿಗತವಾಗಿ ಜರಿಯುವ ಹಕ್ಕಾದರೂ ಇದೆಯಾ? ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ.
'ಬೊಂಬಾಯಿ ಮಿಠಾಯಿ ವಿಶ್ವನಾಥ್' ಅವರ ನಾಲಿಗೆಗೆ ಇನ್ನೊಬ್ಬರನ್ನು ವ್ಯಕ್ತಿಗತವಾಗಿ ಜರಿಯುವ ಹಕ್ಕಾದರೂ ಇದೆಯಾ? ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ.
1/3
— Sa Ra Mahesh (@SaRa_Mahesh_JDS) January 8, 2021
ತಾನು ಘನವಾಗದೆ ಘನವೇನು ಬಂತು. ಹರುಕುಬಾಯಿ, ಕೊಳೆತ ಮೆದುಳು ಮಂತ್ರಿಗಿರಿಯ ಘನತೆಗೆ ಊಳಿಡುತಿದೆ.
ಎಂದೋ ಭಿಕ್ಷುಕನಾಗಿರುವ ವಿಶ್ವನಾಥ್ ಎರಡು ಬಾರಿ ಮುಖ್ಯಮಂತ್ರಿಯಾದವರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಚ್ಚರ.
3/3
— Sa Ra Mahesh (@SaRa_Mahesh_JDS) January 8, 2021
ತಾನು ಘನವಾಗದೆ ಘನವೇನು ಬಂತು. ಹರುಕುಬಾಯಿ, ಕೊಳೆತ ಮೆದುಳು ಮಂತ್ರಿಗಿರಿಯ ಘನತೆಗೆ ಊಳಿಡುತಿದೆ. ಎಂದೋ ಭಿಕ್ಷುಕನಾಗಿರುವ ವಿಶ್ವನಾಥ್ ಎರಡು ಬಾರಿ ಮುಖ್ಯಮಂತ್ರಿಯಾದವರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಚ್ಚರ" ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ