2nd PUC Result: PUC ಪರೀಕ್ಷೆಯಲ್ಲಿ ಸಾರಾ ಮಹೇಶ್​ ಪತ್ನಿ ಕಮಾಲ್​; 30 ವರ್ಷಗಳ ಬಳಿಕ ಫಸ್ಟ್​ ಕ್ಲಾಸ್​ನಲ್ಲಿ ಅನಿತಾ ಪಾಸ್​

ಅನಿತಾ ಸಾ ರಾ ಮಹೇಶ್ ಅವರು 1993ರಲ್ಲಿ ಎಸ್ ಎಸ್‌ಎಲ್‌ಸಿ  ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಮುಂದಿನ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಇದೀಗ ಖಾಸಗಿಯಾಗಿ ಪರೀಕ್ಷೆ ಬರೆದು ದ್ವಿತೀಯ ಪಿಯುಸಿ ಪಾಸಾಗಿದ್ದಾರೆ

ಅನಿತಾ, ಸಾ ರಾ ಮಹೇಶ್​

ಅನಿತಾ, ಸಾ ರಾ ಮಹೇಶ್​

  • Share this:
ಮೈಸೂರು (ಜೂ 18): ಇಂದು ಪಿಯುಸಿ ಪರೀಕ್ಷೆ ಫಲಿತಾಂಶ (2nd PUC Result) ಪ್ರಕಟಗೊಂಡಿದೆ.  ಶಾಸಕ ಸಾ.ರಾ ಮಹೇಶ್​ ಪತ್ನಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಮಾಲ್​ ಮಾಡಿದ್ದಾರೆ.  30 ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಕೆ.ಆರ್.ನಗರ ಶಾಸಕ ಸಾ.ರಾ ಮಹೇಶ್ (Sa Ra Mahesh) ಪತ್ನಿ ಅನಿತಾ ಸಾರಾ (Anitha Sa Ra) ಫಸ್ಟ್​ ಕ್ಲಾಸ್​ನಲ್ಲಿ ಪಾಸ್​ ಆಗಿದ್ದಾರೆಶಾಸಕ ಸಾ ರಾ ಮಹೇಶ್ ಪತ್ನಿ ಅನಿತಾ 30 ವರ್ಷದ ನಂತರ ಪಿಯುಸಿ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ (Exam) ಕಲಾ ವಿಭಾಗದಲ್ಲಿ(Arts)  418 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಫಸ್ಟ್​ ಕ್ಲಾಸ್​ನಲ್ಲಿ ಅನಿತಾ ಸಾರಾ ಮಹೇಶ್​ ಪಾಸ್​

ಅನಿತಾ ಸಾ ರಾ ಮಹೇಶ್ ಅವರು 1993ರಲ್ಲಿ ಎಸ್ ಎಸ್‌ಎಲ್‌ಸಿ  ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಮುಂದಿನ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಇದೀಗ ಖಾಸಗಿಯಾಗಿ ಪರೀಕ್ಷೆ
ಬರೆದು ದ್ವಿತೀಯ ಪಿಯುಸಿ ಪಾಸಾಗಿದ್ದಾರೆ. ಸಾ ರಾ ಮಹೇಶ್ ಮತ್ತು ಅನಿತಾ ಸಾ ರಾ ಮಹೇಶ್ ದಂತಿಗೆ ಇಬ್ಬರು ಮಕ್ಕಳಿದ್ದಾರೆ. ಹಿರಿಯ ಪುತ್ರ ಧನುಷ್ ಎಂಬಿಬಿಎಸ್ ಮುಗಿಸಿ ಎಂಎಸ್ ಮಾಡುತ್ತಿದ್ದಾರೆ. ಕಿರಿಯ ಪುತ್ರ ಜಯಂತ್ ಉದ್ಯಮಿಯಾಗಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕಳೆದ ಏಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ
ನೋಂದಣಿ ಮಾಡಿದರು. ಈ ಪೈಕಿ 3 40,956 ಬಾಲಕರು ಹಾಗೂ 3,37319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ
ಜ, 5,000 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ, ವಿಭಾಗಕ್ಕೆ 245519 ಮಂದಿ
ಮತ್ತು ಪಾನ ವಿಭಾಗದಲ್ಲಿ 1,10,569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.'

ಇದನ್ನೂ ಓದಿ:  2nd PUC Results: ದಕ್ಷಿಣ ಕನ್ನಡ ಫಸ್ಟ್, ಚಿತ್ರದುರ್ಗ ಲಾಸ್ಟ್; ಅತಿ ಹೆಚ್ಚು ವಿಜ್ಞಾನ ವಿದ್ಯಾರ್ಥಿಗಳು ಪಾಸ್

ಫಲಿತಾಂಶ ಪ್ರಕಟಿಸಿದ ಸಚಿವ ಬಿ ಸಿ ನಾಗೇಶ್

ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎಂದಿನಂತೆ ಬಾಲಕಿಯರೇ ಮೇಲುಗೈ

ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 68.72ರಷ್ಟು ಬಾಲಕಿಯರು ಮತ್ತು ಶೇಕಡಾ 55.22ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ.

ಇದನ್ನೂ ಓದಿ:  Explained: ದ್ವಿತೀಯ ಪಿಯುಸಿ ಫಲಿತಾಂಶದ ನಂತರ ನಿಮ್ಮ ಆಯ್ಕೆ ಇದೂ ಆಗಿರಬಹುದು!

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ಫಲಿತಾಂಶ

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಪೂರಕ ಪರೀಕ್ಷೆ ದಿನಾಂಕ ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಕಲಾ ಮತ್ತು ವಾಣಿಜ್ಯ ವಿಭಾಗ

ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಶೇ.100 ಫಲಿತಾಂಶ ಪಡೆದ ಕಾಲೇಜು

4 ಸರ್ಕಾರಿ ಪದವಿಪೂರ್ವ ಕಾಲೇಜುಗಳು, 2 ಅನುದಾನಿತ ಪದವಿಪೂರ್ವ ಕಾಲೇಜು, 50 ಅನುದಾನರಹಿತ ಪದವಿಪೂರ್ವ ಕಾಲೇಜು ಸೇರಿ ಒಟ್ಟು 56 ಕಾಲೇಜುಗಳು ಶೇ.100 ಫಲಿತಾಂಶ ಸಾಧಿಸಿವೆ. ಶೂನ್ಯ ಫಲಿತಾಂಶ ಯಾವ ಕಾಲೇಜಿನಲ್ಲಿಯೂ ಆಗಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪಟ್ಟಿಯನ್ನು ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಿಗೆ ಸ್ಯಾಟ್ಸ್ ತಂತ್ರಾಂಶದ ಮುಖಾಂತರ ಕಳುಹಿಸಿಕೊಡಲಾಗುವುದು.
Published by:Pavana HS
First published: