HOME » NEWS » State » SADASHIVANAGAR POLICE STARTS PROBE ON CASE OF CMS POLITICAL SECRETARY NR SANTHOSH SUICIDE ATTEMPT LG

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ; ತನಿಖೆ ಶುರುಮಾಡಿದ ಪೊಲೀಸರು

ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 309 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಇದೇ ವೇಳೆ ಸಂತೋಷ್ ಆತ್ಮಹತ್ಯೆ ಯತ್ನ ಸಂಬಂಧ ಪತ್ನಿ ಜಾಹ್ನವಿ ಹೇಳಿಕೆಯನ್ನ ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ.

news18-kannada
Updated:November 28, 2020, 2:27 PM IST
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ; ತನಿಖೆ ಶುರುಮಾಡಿದ ಪೊಲೀಸರು
ಎನ್ ಆರ್ ಸಂತೋಷ್
  • Share this:
ಬೆಂಗಳೂರು(ನ.28): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್. ಆರ್ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಸ್ಥಳೀಯ ಪೊಲೀಸರಿಗೆ ಎಂಎಲ್ ಸಿ ರಿಪೋರ್ಟ್ ರವಾನೆ ಮಾಡಿದ್ದಾರೆ. ನಿನ್ನೆ ಎನ್ ಆರ್ ಸಂತೋಷ್ ಅಸ್ಪತ್ರೆಗೆ ದಾಖಲಾದ ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಬಳಿಕ ರೋಗಿಯ ಬಗ್ಗೆ ಪೊಲೀಸರಿಗೆ ರಿಪೋರ್ಟ್ ಕಳುಹಿಸಿದ್ದಾರೆ. ಈಗಾಗಲೇ ಎಂಎಲ್ ಸಿ ರಿಪೋರ್ಟ್ ಸದಾಶಿವನಗರ ಪೊಲೀಸರ ಕೈ ಸೇರಿದ್ದು, ಸದಾಶಿವನಗರ ಪೊಲೀಸರು ಆಸ್ಪತ್ರೆಗೆ ದೌಡಾಯಿಸಿ ತನಿಖೆ ಕೈಗೊಂಡಿದ್ದಾರೆ.

ಆಸ್ಪತ್ರೆ ವೈದ್ಯರು ರವಾನಿಸಿರುವ ಎಂಎಲ್ ಸಿ ರಿಪೋರ್ಟ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸದ್ಯ ಮಾತನಾಡಲಿಕ್ಕೆ ಶಕ್ತನಲ್ಲ. ಸದ್ಯ ಆತನಿಗೆ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ‌ ಎಂದು ಎಂಎಲ್ ಸಿ ರಿಪೋರ್ಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ; ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ಎಂ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರ ಮೆಡಿಕಲ್ ಲೀಗಲ್ ಕೇಸ್ ಸ್ವೀಕರಿಸಿದ ಪೊಲೀಸರು, ಆದರ ಆಧಾರದ ಮೇಲೆ ಎನ್ ಆರ್ ಸಂತೋಷ್ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಪೊಲೀಸರು ಸಂತೋಷ್ ವಿರುದ್ಧ ಎಫ್ಐಆರ್ ದಾಖಲು ಮಾಡಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಎನ್ ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮ ಆತನ ಹೇಳಿಕೆ ದಾಖಲಿಸಿಕೊಂಡು, ಘಟನೆಗೆ ನಿಖರ ಕಾರಣ ಏನು ಎಂಬುದನ್ನ ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 309 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಇದೇ ವೇಳೆ ಸಂತೋಷ್ ಆತ್ಮಹತ್ಯೆ ಯತ್ನ ಸಂಬಂಧ ಪತ್ನಿ ಜಾಹ್ನವಿ ಹೇಳಿಕೆಯನ್ನ ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ. ಕಳೆದ ರಾತ್ರಿಯೇ ಹೇಳಿಕೆ ದಾಖಲಿಸಿದ ಪೊಲೀಸರು ಘಟನೆ ಬಗ್ಗೆ ಕೆಲವು ಮಹತ್ವದ ಮಾಹಿತಿಯನ್ನ ಕಲೆ ಹಾಕಿದ್ದಾರೆ.

ಅಲ್ಲದೇ ಇಂದು ಮತ್ತೆ ಸದಾಶಿವನಗರ ಪೊಲೀಸರು ಆಸ್ಪತ್ರೆಗೆ ಅಗಮಿಸಿ ಸಂತೋಷ್ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಎನ್ ಆರ್ ಸಂತೋಷ್ ಆತ್ಮಹತ್ಯೆಗೆ‌ ಕಾರಣ ಏನು.? ಯಾಕಾಗಿ ಆತ್ಮಹತ್ಯೆಗೆ ಮುಂದಾಗಿದ್ರು ಎನ್ನುವುದರ ತನಿಖೆಗೆ ಕೈಗೊಂಡಿದ್ದಾರೆ. ಜೊತೆಗೆ ಸಂತೋಷ್ ಡಿಸ್ಚಾರ್ಜ್ ಆದ ಬಳಿಕ ಆತನ ಹೇಳಿಕೆ ಪಡೆದು ಘಟನೆಗೆ ನಿಖರ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.
Published by: Latha CG
First published: November 28, 2020, 2:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading