Sanchari Vijay Accident: ಅಪಘಾತದಿಂದ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

Sanchari Vijay Health: ಬೈಕ್ ಅಪಘಾತದಿಂದ ನಟ ಸಂಚಾರಿ ವಿಜಯ್ ಅವರ ಮೆದುಳು ಹಾಗೂ ಬಲ ತೊಡೆಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಚಾರಿ ವಿಜಯ್

ಸಂಚಾರಿ ವಿಜಯ್

 • Share this:
  ಬೆಂಗಳೂರು (ಜೂನ್ 13): ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡದ ನಟ ಸಂಚಾರಿ ವಿಜಯ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ನಟ ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೆದುಳು ಹಾಗೂ ಬಲ ತೊಡೆಗೆ ತೀವ್ರ ಗಾಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  ನಟ ಸಂಚಾರಿ ವಿಜಯ್ ಅವರ ಮೆದುಳಿನ ಬಲ ಭಾಗಕ್ಕೆ ಅಪಘಾತದ ವೇಳೆ ಭಾರೀ ದೊಡ್ಡ ಹೊಡೆತ ಬಿದ್ದಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಬೈಕ್ ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೆದುಳಿನ ಭಾಗದಲ್ಲಿ ತೀವ್ರವಾಗಿ ರಕ್ತಸ್ರಾವವಾಗಿದೆ, ಅವರ ಬಲ ತೊಡೆಯ‌ ಭಾಗ ಮುರಿದಿದೆ. ಹೀಗಾಗಿ ಐಸಿಯುನಲ್ಲಿಟ್ಟು‌ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

  ಗೆಳೆಯ ನವೀನ್ ಜೊತೆ ಸಂಚಾರಿ ವಿಜಯ್ ಶನಿವಾರ ರಾತ್ರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಜೆಪಿ ನಗರ 7ನೇ ಹಂತದಲ್ಲಿ ಬೇಕ್ ಅಪಘಾತ ಸಂಭವಿಸಿದೆ. ಗೆಳೆಯ ನವೀನ್​ಗೂ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಗೆ ಈ ಅವಘಡ ಸಂಭವಿಸಿದೆ.  ಸದ್ಯಕ್ಕೆ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕ‌ವಾಗಿದೆ. ಅಪಘಾತದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ನಾನು ಅವನಲ್ಲ ಅವಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಟ ಸಂಚಾರಿ ವಿಜಯ್, ಒಗ್ಗರಣೆ, ಕೃಷ್ಣ ತುಳಸಿ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ತಮಿಳು ಸಿನಿಮಾಗಳಲ್ಲೂ ಸಂಚಾರಿ ವಿಜಯ್ ನಟಿಸಿದ್ದಾರೆ.
  Published by:Sushma Chakre
  First published: