HOME » NEWS » State » SANDALWOOD ACTRESS RAGINI DWIVEDI SANJJANAA GALRANI POLICE CUSTODY ENDS TODAY ON DRUG CASE SCT

Sandalwood Drug Scandal: ಸ್ಯಾಂಡಲ್​​ವುಡ್ ಡ್ರಗ್ ಕೇಸ್; ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಭವಿಷ್ಯ ಇಂದು ನಿರ್ಧಾರ

Ragini Dwivedi - Sanjjanaa Galrani: ಡ್ರಗ್ ಕೇಸ್​ನಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ, ರಾಹುಲ್, ವಿರೇನ್ ಖನ್ನಾ, ರವಿಶಂಕರ್ ಹಾಗೂ ಲೂಯಿ ಪೆಪ್ಪರ್ ಕಸ್ಟಡಿ ಇಂದು ಅಂತ್ಯವಾಗಲಿದೆ. ನಟಿ ಸಂಜನಾ ಗಲ್ರಾನಿ ಬಿಟ್ಟು ಉಳಿದೆಲ್ಲಾ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

news18-kannada
Updated:September 14, 2020, 8:10 AM IST
Sandalwood Drug Scandal: ಸ್ಯಾಂಡಲ್​​ವುಡ್ ಡ್ರಗ್ ಕೇಸ್; ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಭವಿಷ್ಯ ಇಂದು ನಿರ್ಧಾರ
ರಾಗಿಣಿ ಹಾಗೂ ಸಂಜನಾ
  • Share this:
ಬೆಂಗಳೂರು (ಸೆ. 14):​ ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಯ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ನಟಿಯರಾದ ರಾಗಿಣಿ, ಸಂಜನಾ ಸೇರಿ ಆರು ಆರೋಪಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ರಾಗಿಣಿ, ಸಂಜನಾ, ರಾಹುಲ್, ವಿರೇನ್ ಖನ್ನಾ, ರವಿಶಂಕರ್ ಹಾಗೂ ಲೂಯಿ ಪೆಪ್ಪರ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಮಧ್ಯಾಹ್ನದ ಬಳಿಕ ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ವಿಡಿಯೋ ಕಾನ್ಫರೆನ್ಸ್​ನಲ್ಲಿ ಸಿಸಿಎಚ್ 33 ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗುವುದು. ಬಹುತೇಕ ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಕೇಳೋದು ಅನುಮಾನ ಎನ್ನಲಾಗಿದೆ.

ಬಂಧಿತರಾಗಿರುವ ಆರೋಪಿಗಳು ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನಟಿ ಸಂಜನಾ ಬಿಟ್ಟು ಉಳಿದೆಲ್ಲಾ ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಆರೋಪಿಗಳ ಅರ್ಜಿ ವಿಚಾರಣೆ ಸಹ ಒಂದು ಕಡೆ ನಡೆಯಲಿದೆ. ಆರೋಪಿಗಳ ಜಾಮೀನು ಅರ್ಜಿ ಮುಂದೂಡೋದು, ತಿರಸ್ಕಾರ ಮಾಡೋದು ಆದರೆ ಜೈಲು ಸೇರುವುದು ಖಚಿತ ಎನ್ನಲಾಗಿದೆ. ಹಾಗೇನಾದರೂ ಆದರೆ, ಡ್ರಗ್ಸ್ ಕೇಸ್​ನಲ್ಲಿ ಜೈಲು ಸೇರೋ ಮೊದಲ ಸ್ಯಾಂಡಲ್​ವುಡ್ ಸೆಲಬ್ರಿಟಿಗಳು ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಆಗಲಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ ಕೇಸ್​​: ಆರೋಪಿ ಆದಿತ್ಯಾ ಆಳ್ವಾಗಾಗಿ ಹೊರ ರಾಜ್ಯದಲ್ಲೂ ಸಿಸಿಬಿ ಪೊಲೀಸರ ಹುಡುಕಾಟ

ಇಂದು ಮಧ್ಯಾಹ್ನದ ಬಳಿಕ ರಾಗಿಣಿ, ಸಂಜನಾ ಸೇರಿದಂತೆ ಎಲ್ಲ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಒಟ್ಟು 11 ದಿನಗಳ ತನಿಖೆಯಲ್ಲಿ ರಾಗಿಣಿ ಯಾವುದೇ ಮಾಹಿತಿಯನ್ನು ಬಾಯಿ ಬಿಟ್ಟಿಲ್ಲ. ನಟಿ ರಾಗಿಣಿ ಇಷ್ಟು ದಿನವಾದರೂ ಯಾವ ವಿಷಯವನ್ನೂ ಬಾಯಿಬಿಟ್ಟಿಲ್ಲ. ನಟಿ ರಾಗಿಣಿಯನ್ನು ವಿಚಾರಣೆ ಮಾಡೋದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ. ಏನೇ ಪ್ರಶ್ನೆ ಮಾಡಿದರೂ ನನಗೇನೂ ಗೊತ್ತಿಲ್ಲ, ಮರೆತಿದ್ದೇನೆ ಎಂದು ರಾಗಿಣಿ ಹೇಳುತ್ತಿದ್ದಾರೆ ಎನ್ನಲಾಗಿದೆ. ಡಿಲೀಟ್ ಆಗಿರುವ ಸಂದೇಶಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಮಾಡಿದರೂ ರಾಗಿಣಿ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ.

ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ ಸೇರಿದಂತೆ 6 ಜನರನ್ನು ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ 1ನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದರು. ಪೊಲೀಸ್ ಕಸ್ಟಡಿಯ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಅವರಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲು ಶಿಕ್ಷೆಯಾಗಲಿದೆಯಾ ಎಂದು ಇಂದು ಮಧ್ಯಾಹ್ನದ ಬಳಿಕ ಗೊತ್ತಾಗಲಿದೆ.
Published by: Sushma Chakre
First published: September 14, 2020, 8:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories