Sandalwood Drug Case: ಸ್ಯಾಂಡಲ್​ವುಡ್​ ಡ್ರಗ್ ಕೇಸ್; ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ

Aditya Alva: ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಹೆಂಡತಿಯ ಸೋದರನಾಗಿರುವ ಆದಿತ್ಯ ಆಳ್ವ ಸ್ಯಾಂಡಲ್​ವುಡ್​ ಡ್ರಗ್ಸ್​ ದಂಧೆ ಪ್ರಕರಣದಲ್ಲಿ 6ನೇ ಆರೋಪಿಯಾಗಿದ್ದಾರೆ. 4 ಎಕರೆ ಜಾಗದಲ್ಲಿರುವ ಅವರ ಮನೆ ಮೇಲೆ ಇಂದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

news18-kannada
Updated:September 15, 2020, 10:54 AM IST
Sandalwood Drug Case: ಸ್ಯಾಂಡಲ್​ವುಡ್​ ಡ್ರಗ್ ಕೇಸ್; ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ
ಆದಿತ್ಯ ಆಳ್ವ
  • Share this:
ಬೆಂಗಳೂರು (ಸೆ. 15): ಸ್ಯಾಂಡಲ್​ವುಡ್ ಡ್ರಗ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಈ ಕೇಸ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಸೇರಿದ್ದಾರೆ. ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಇದೀಗ ಡ್ರಗ್​ ಪ್ರಕರಣದ ಮತ್ತೋರ್ವ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ಮನೆಯ ಮೇಲೆ ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸರ್ಚ್​ ವಾರೆಂಟ್ ಪಡೆದು ಹೆಬ್ಬಾಳದ ಬಳಿ ಇರುವ ಆದಿತ್ಯ ಆಳ್ವ ಅವರ 'ಹೌಸ್ ಆಫ್​ ಲೈಫ್' ಮನೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ದಾಖಲೆಗಳಿಗೆ ಹುಡುಕಾಟ ನಡೆಸಿದ್ದಾರೆ.

ಬಾಲಿವುಡ್ ಖ್ಯಾತ ನಟ ವಿವೇಕ್ ಒಬೆರಾಯ್ ಅವರ ಹೆಂಡತಿಯ ಸೋದರನಾಗಿರುವ ಆದಿತ್ಯ ಆಳ್ವ ಸ್ಯಾಂಡಲ್​ವುಡ್​ ಡ್ರಗ್ಸ್​ ದಂಧೆ ಪ್ರಕರಣದಲ್ಲಿ 6ನೇ ಆರೋಪಿಯಾಗಿದ್ದಾರೆ. ರಾಗಿಣಿಯ ಬಂಧನವಾದ ಕೂಡಲೆ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಗಾಗಿ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಆದರೂ ಆತ ಪತ್ತೆಯಾಗಿರಲಿಲ್ಲ. ಇಂದು ಆತನ ಮನೆ ಮೇಲೆ ಇನ್​ಸ್ಪೆಕ್ಟರ್​ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಬ್ಬಾಳ ಸಮೀಪದ ಆದಿತ್ಯ ಆಳ್ವ ಅವರ ಮನೆ ಸುಮಾರು‌ 4 ಎಕರೆ ವಿಸ್ತೀರ್ಣದಲ್ಲಿದೆ. ಮನೆಯ ಆವರಣದಲ್ಲಿಯೇ ರೆಸಾರ್ಟ್ ಸಹ ಇದೆ. ಸದ್ಯ ಇನ್​ಸ್ಪೆಕ್ಟರ್​ ಪುನೀತ್ ತಂಡದಿಂದ ಮನೆಯ ಶೋಧ ನಡೆಸಲಾಗುತ್ತಿದೆ.

ಆದಿತ್ಯ ಆಳ್ವ ಅವರ ಮನೆ


ಇದನ್ನೂ ಓದಿ: Sandalwood Drug Case: ಸ್ಯಾಂಡಲ್​ವುಡ್ ಡ್ರಗ್ ಕೇಸ್; ನಟಿ ರಾಗಿಣಿ ಸೇರಿ ಎಲ್ಲ ಆರೋಪಿಗಳ ಜಾಮೀನು ಅರ್ಜಿ ಮುಂದೂಡಿಕೆ

ಸದ್ಯಕ್ಕೆ ಮನೆಯಲ್ಲಿ ಕೆಲಸಗಾರರು ಬಿಟ್ಟರೆ ಉಳಿದವರು ಯಾರೂ ಇಲ್ಲ. ಸಾಕಷ್ಟು ಪಾರ್ಟಿಗಳು ಇಲ್ಲಿಯೇ ನಡೆದಿರೋ ಸಾಧ್ಯತೆಯಿದೆ. ಪೊಲೀಸರಿಗೆ ಸಿಕ್ಕಿರೋ ಪಾರ್ಟಿಗಳ ಪೋಟೊಗಳು ಸಹ ಇಲ್ಲಿಯದ್ದೇ ಎನ್ನಲಾಗಿದೆ. ಮಾಜಿ ಸಚಿವ ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಅವರ ಮಗನಾಗಿರುವ ಆದಿತ್ಯ ಆಳ್ವ ಸ್ಯಾಂಡಲ್​ವುಡ್ ಡ್ರಗ್ ಪ್ರಕರಣದಲ್ಲಿ ಎ6 ಆರೋಪಿಯಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರ ಆದಿತ್ಯ ಆಳ್ವ ಮಾತ್ರವಲ್ಲದೆ ಅವರ ಕುಟುಂಬಸ್ಥರೂ ನಾಪತ್ತೆಯಾಗಿದ್ದಾರೆ.

ಆದಿತ್ಯ ಆಳ್ವ ಅವರ ಮನೆ


ಜನತಾ ಪರಿವಾರದ ಹಿರಿಯ ರಾಜಕಾರಣಿ ಜೀವರಾಜ್ ಆಳ್ವ ಕರ್ನಾಟಕದ ಸಚಿವರಾಗಿದ್ದವರು. ಅವರ ಹೆಂಡತಿ ನಂದಿನಿ ಆಳ್ವ ಖ್ಯಾತ ನೃತ್ಯಗಾರ್ತಿ. ಅವರ ಮಗಳು ಪ್ರಿಯಾಂಕಾ ಆಳ್ವ ಅವರನ್ನು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮದುವೆಯಾಗಿದ್ದಾರೆ. ಅವರ ಮಗ ಆದಿತ್ಯ ಆಳ್ವ ಇದೀಗ ಡ್ರಗ್ಸ್​ ದಂಧೆಯಲ್ಲಿ ಆರೋಪಿಯಾಗಿದ್ದಾರೆ.

ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳನ್ನು ನಡೆಸುತ್ತಿದ್ದ ಆದಿತ್ಯ ಆಳ್ವ ಡ್ರಗ್ಸ್​ ದಂಧೆಯ ಕಿಂಗ್​ಪಿನ್ ವಿರೇನ್ ಖನ್ನಾ ಅವರ ಜೊತೆ ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಆತನ ಜೊತೆ ಸೇರಿ ಬೆಂಗಳೂರಿನಲ್ಲಿ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆದಿತ್ಯ ಸ್ಯಾಂಡಲ್​ವುಡ್​, ಬಾಲಿವುಡ್​ ನಟರ ನಂಟನ್ನೂ ಹೊಂದಿದ್ದರು. ಹೀಗಾಗಿ, ತಮ್ಮ ಪಾರ್ಟಿಗಳಿಗೆ ನಟ-ನಟಿಯರನ್ನು ಆಹ್ವಾನಿಸುತ್ತಿದ್ದರು. ಆ ಪಾರ್ಟಿಗಳಿಗೆ ರವಿಶಂಕರ್ ಮತ್ತು ರಾಹುಲ್ ಡ್ರಗ್ಸ್​ ಪೂರೈಕೆ ಮಾಡುತ್ತಿದ್ದರು. ಆ ಪಾರ್ಟಿಗಳಿಗೆ ನಟಿ ರಾಗಿಣಿ ಕೂಡ ಹೋಗುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
Published by: Sushma Chakre
First published: September 15, 2020, 10:48 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading