ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ (Congress) ಅಂಗಳದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಬಿಜೆಪಿ (BJP) ಪ್ರಾಥಮಿಕ ಸದಸ್ಯತ್ವ ರಾಜೀನಾಮೆ ಸಲ್ಲಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ (Mallikarjun Kharge) ಮತ್ತು ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಈ ಎಲ್ಲಾ ಬೆಳವಣಿಗೆ ನಡುವೆ ಇವತ್ತು ಬೆಳಗ್ಗೆ 8.30ಕ್ಕೆ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ ಕರೆದಿದ್ದು, ಶೆಟ್ಟರ್ ಸೇರ್ಪಡೆಯನ್ನು ಖಚಿತಗೊಳಿಸ್ತಾರೆ ಎಂದು ತಿಳಿದು ಬಂದಿದೆ.
ಇತ್ತ ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ವಿಧಾನಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ತಪ್ಪಿದ ಹಿನ್ನೆಲೆ ಇಂದು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ಹೈವೋಲ್ಟೇಜ್ ಮೀಟಿಂಗ್
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. ಬಿಎಲ್ ಸಂತೋಷ್, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಧರ್ಮೆಂದ್ರ ಪ್ರಧಾನ್, ಅಣ್ಣಾಮಲೈ, ಕಟೀಲ್ ಭಾಗಿಯಾಗಿದ್ರು. ಇನ್ನು ಬಾಕಿ 12 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿಯಿದ್ದು ಯಾರಿಗೆ ಟಿಕೆಟ್ ಸಿಗುತ್ತೆ ಅನ್ನೋ ಕುತೂಹಲ ಮೂಡಿದೆ.
ಜೊತೆಗೆ ಗೋವಿಂದರಾಜನಗರ ಟಿಕೆಟ್ ಬಗ್ಗೆಯೂ ಗಂಭೀರ ಚರ್ಚೆ ನಡೆದಿದ್ದು, ಉಮೇಶ್ ಶೆಟ್ಟಿಗೆ ಟಿಕೆಟ್ ಘೋಷಿಸ್ತಾರ ಅನ್ನೊ ಪ್ರಶ್ನೆ ಮೂಡಿದೆ. ಬಿಜೆಪಿ ಕಚೇರಿಗೆ ಅರುಣ್ ಸೋಮಣ್ಣರನ್ನ ಕರೆಸಿ ಮಾತುಕತೆ ನಡೆಸಲಾಗಿದೆ. ಅಲ್ಲದೇ ಬಂಡಾಯ ಶಮನದ ಬಗ್ಗೆ ಚರ್ಚೆ ನಡೆಸಲಾಗಿದೆ.
ಇದನ್ನೂ ಓದಿ: Karnataka Election 2023: ಬೆಂಗಳೂರಿಗೆ ಕಳಪೆ ಮತದಾನದ ಅಪಖ್ಯಾತಿ ತಪ್ಪಿಸಲು BBMPಯಿಂದ ಸರ್ವ ಪ್ರಯತ್ನ; ಮನೆ ಮನೆಗೆ ಜಾಗೃತಿ!
ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ
ಕಾಂಗ್ರೆಸ್ನ ಮತ್ತೊಂದು ವಿಕೆಟ್ ಪತನವಾಗಿದೆ. ಕಾಂಗ್ರೆಸ್ಗೆ ಅಖಂಡ ಶ್ರೀನಿವಾಸ್ ಮೂರ್ತಿ ಗುಡ್ಬೈ ಹೇಳಿದ್ದಾರೆ. ಶಿರಸಿಯಲ್ಲಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ