ಬೆಂಗಳೂರು(ಸೆಪ್ಟೆಂಬರ್. 11): ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ಸಂಬಂಧ ಈಗಾಗಲೇ ಅನೇಕರು ಅರೆಸ್ಟ್ ಆಗಿದ್ದಾರೆ. ಡ್ರಗ್ಸ್ ಮಾಫಿಯಾದ ಹಿಂದೆ ರಾಜಕೀಯ ಕೈವಾಡವೂ ಇದೆ ಎಂಬ ಚರ್ಚೆ ಕೂಡ ನಡೆಯುತ್ತಿದೆ. ಈ ಮಧ್ಯೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಸಚಿವ ಸಾರಾ ಮಹೇಶ್ ಕಿಡಿಕಾರಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತು ಕೇಳಿದ್ರೆ ನಗು ಬರುತ್ತದೆ. ಡ್ರಗ್ಸ್ ಜಾಲ ನಿಭಾಯಿಸುವಲ್ಲಿ ಕುಮಾರಸ್ವಾಮಿ ವಿಫಲರಾಗಿದ್ರಾ ಎಂದು ಸವದಿ ಪ್ರಶ್ನಿಸಿದ್ದರು. ಆಡಳಿತಕ್ಕೆ ಬೇಸತ್ತು ಅನೇಕ ಶಾಸಕರು ಹೊರಗೆ ಬಂದಿದ್ದಾರೆ. ಕುಣಿಯೋಕೆ ಬರದೇ ಇರುವವರು ನೆಲ ಡೊಂಕು ಎನ್ನುವ ರೀತಿಯಲ್ಲಿ ಅವರ ಹೇಳಿಕೆ ಇದೆ. ಇಷ್ಟೆಲ್ಲ ಗೊತ್ತಿದ್ದರು ಒಂದು ವರ್ಷ ಯಾಕೆ ಸುಮ್ಮನೆ ಎಂದು ಹೆಚ್ಡಿಕೆ ವಿರುದ್ದ ಡಿಸಿಎಂ ಲಕ್ಷ್ಮಣ ಸವದಿ ಟೀಕಿಸಿದ್ದರು.
ಇದೀಗ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ವಿರುದ್ಧ ವ್ಯಂಗ್ಯವಾಡಿರುವ ಮಾಜಿ ಸಚಿವ ಸಾರಾ ಮಹೇಶ್, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್ ಆದರೂ, ಬ್ಲೂ ಫಿಲಂ ಆದರೂ’ ಎಂದು ಟ್ವೀಟ್ ಮಾಡಿದ್ದಾರೆ.
ಡ್ರಗ್ಸ್ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ.
ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್ ಆದರೂ, ಬ್ಲೂ ಫಿಲಂ ಆದರೂ...
— Sa Ra Mahesh (@SaRa_Mahesh_JDS) September 10, 2020
ಇದನ್ನೂ ಓದಿ : ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಸರ್ಕಾರ ಪಣ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ಜಾಮೀನು ಕೋರಿ ರಾಗಿಣಿ ದ್ವಿವೇದಿ ಸಿಸಿಎಚ್ 33 ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೆ.14ಕ್ಕೆ ವಿಚಾರಣೆ ಮುಂದೂಡಿದ್ದಾರೆ. ಅರ್ಜಿಯ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ರಾಗಿಣಿಗೆ ಜಾಮೀನು ನೀಡದಂತೆ ತಮ್ಮ ವಾದ ಮಂಡಿಸಿದ್ದರು. ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಜಾಮೀನು ಕೊಡಬಾರದು. ಅಲ್ಲದೆ ಆರೋಪಿ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಸರ್ಕಾರಿ ವಕೀಲರು ಆಕ್ಷೇಪಣೆ ಮಾಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ