ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸತೀಶ್​ ಜಾರಕಿಹೊಳಿ

news18
Updated:June 13, 2018, 1:27 PM IST
ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸತೀಶ್​ ಜಾರಕಿಹೊಳಿ
  • Share this:
ಚಂದ್ರಕಾಂತ್​ ಸುಗಂಧಿ, ನ್ಯೂಸ್​ 18 ಕನ್ನಡ

ಬೆಳಗಾವಿ (ಜೂ 13): ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ಅಸಮಾಧಾನಗೊಂಡಿದ್ದ ಶಾಸಕ ಸತೀಶ್​ ಜಾರಕಿಹೊಳಿ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಸೋಮವಾರವೇ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಕಣ್ಣೀರು ಹಾಕಲ್ಲ. ಆದರೆ ಅತೃಪ್ತರಿಗೆ ಸ್ಥಾನಮಾನ ಕಲ್ಪಿಸಬೇಕಿದೆ. ಈ ಬಗ್ಗೆ  ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸಮ್ಮುಖದಲ್ಲಿ ಸಭೆಯಲ್ಲಿ ಪ್ರಸ್ತಾವನೆ ಮುಂದೆ ಇಡುತ್ತೇವೆ. ಬೆಂಗಳೂರು ನಡೆಯುವ ಸಭೆಯಲ್ಲಿ ಭಾಗಿಯಾಗುತ್ತೇನೆ.  ನಮ್ಮ ಬೇಡಿಕೆಯನ್ನ ಕೇಳುತ್ತೇವೆ. ಎಲ್ಲ ಸಮಸ್ಯೆಗಳು ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದರು.

ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ನನ್ನ ಸಮಸ್ಯೆ ಒಂದೇ ಆಗಿದೆ. ಯಾರು ಯಾರಿಗೆ ಸ್ಥಾನ ತಪ್ಪಿಸಿದರೆಂಬ ವಿಚಾರವೇ ಇಲ್ಲ. ನಾವಿಬ್ಬರೂ ಸೇರಿಕೊಂಡು ನಮಗೆ ಸಚಿವ ಸ್ಥಾನ ತಪ್ಪಿಸಿದವರು ಯಾರು ಅಂತಾ ಹುಡುಕಬೇಕಿದೆ ಎಂದರು.
First published:June 13, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ