ಸಿಎಂ ಕುಮಾರಸ್ವಾಮಿ ಜನತಾ ದರ್ಶನದ ಸಮಯ ಬದಲು: ಇಲ್ಲಿದೆ ಸಂಪೂರ್ಣ ಮಾಹಿತಿ


Updated:August 28, 2018, 9:35 AM IST
ಸಿಎಂ ಕುಮಾರಸ್ವಾಮಿ ಜನತಾ ದರ್ಶನದ ಸಮಯ ಬದಲು: ಇಲ್ಲಿದೆ ಸಂಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ

Updated: August 28, 2018, 9:35 AM IST
ನ್ಯೂಸ್​ 18 ಕನ್ನಡ

ಬೆಂಗಳೂರು(ಆ.28): ರಾಜ್ಯದ ನೂರಾರು ಮಂದಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಪರಿಹಾರ ಕಂಡುಕೊಳ್ಳಲು ಬರುತ್ತಿದ್ದಾರೆ. ಆದರೆ ಇದರಿಂದ ಮುಖ್ಯಮಂತ್ರಿಗಳ ಅಧಿಕೃತ ಕಾರ್ಯಕ್ರಮಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ತಾವು ಬೆಂಗಳೂರಿನಲ್ಲಿರುವ ಸಂದರ್ಭದಲ್ಲಿ ಪ್ರತಿ ಶನಿವಾರ ಸಾರ್ವಜನಿಕರನ್ನು ಭೇಟಿಯಾಗಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿಗಳ ಕಚೇರಿಯು ಅಧಿಕೃತ ಪ್ರಕಟನೆಯನ್ನು ಹೊರಡಿಸಿದೆ. ಪ್ರಕಟಣೆಯಲ್ಲಿ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿರುವ ಸಂದರ್ಭದಲ್ಲಿ ಪ್ರತಿ ಶನಿವಾರದಂದು ಬೆಳಗ್ಗೆ 11 ರಿಂದ ಸಂಜೆ 4.30ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆಂದು ತಿಳಿಸಲಾಗಿದೆ.

ಸಾರ್ವಜನಿಕರು ಅನಿಯಮಿತವಾಗಿ ಮುಖ್ಯಮಂತ್ರಿಯವರ ನಿವಾಸ, ಗೃಹ ಕಚೇರಿ ಕೃಷ್ಣಾ ಹಾಗೂ ವಿಧಾನಸೌಧಕ್ಕೆ ಭೇಟಿ ನೀಡುತ್ತಿರುವುದರಿಂದ ಮುಖ್ಯಮಂತ್ರಿಗಳ ಕೆಲಸ ಕಾರ್ಯಗಳಿಗೆ ಅಡಚಣೆಯಾಗುತ್ತಿದೆ. ಅಲ್ಲದೇ ಸಭೆ, ಸಮಾರಂಭಗಳಿಗೆ ನಿಗದಿತ ಸಮಯಕ್ಕೆ ತಲುಪಲು ತೊಣದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಭೇಟಿಗೆ ನಿಗದಿತ ಸಮಯವನ್ನು ನಿಗದಿಪಡಿಸಿದ್ದು, ಸಹಕರಿಸುವಂತೆ ಮನವಿ ಮಾಡಲಾಗಿದೆ.ಇನ್ನು ಈ ಸಂದರ್ಭದಲ್ಲಿ ವೈದ್ಯಕೀಯ ಪರಿಹಾರ ನಿಧಿಗೆ ಕೋರಿಕೆ ಸಲ್ಲಿಸುವವರು ಆಧಾರ್​ ಕಾರ್ಡ್​ ಅಥವಾ ಬಿಪಿಎಲ್​ ಕಾರ್ಡ್​, ಆಸ್ಪತ್ರೆಯ ಬಿಲ್​ ಮತ್ತು ಚಿಕಿತ್ಸೆಯ ವಿವರಗಳ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಅಲ್ಲದೇ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಅರ್ಜಿ ಹಾಗೂ ಖಾಸಗಿ ಅಹವಾಲುಗಳಿಗೆ ಅವಕಾಶವಿರುವುದಿಲ್ಲ ಎಂದೂ ತಿಳಿಸಿದ್ದಾರೆ. ಇನ್ನು ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಲಿಖಿತ ರೂಪದಲಲ್ಇ ಸಲ್ಲಿಸಲು ಸೂಚಿಸಲಾಗಿದೆ. ಸಿಎಂ ಸೂಚನೆಯಂತೆ ದೂರುಗಳ ಬಗ್ಗೆ ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮೊಬೈಲ್​ ಎಸ್​ಎಂಎಸ್​ ಮೂಲಕ ಮಾಹಿತಿ ಒದಗಿಸಲಾಗುತ್ತದೆ ಎಂದು ಇ ಪ್ರಕಟನೆಯಲ್ಲಿ ತಿಳಿಸಲಾಗಿದೆ.
First published:August 28, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ