Idgah Maidan Case: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಬ್ರೇಕ್, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ!

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರವಾಗಿ ಮಹತ್ವದ ಆದೇಶ ನೀಡಿರುವ ಸುಪ್ರೀಂ ಕೋರ್ಟ್​ ಎರಡು ದಿನ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ. ಇದೇ ವೇಳೆ ಈ ಬಾರಿ ಗಣೇಶೋತ್ಸವ ಬೇರೆಡೆ ಆಚರಿಸಲೂ ಸೂಚಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನ

ಚಾಮರಾಜಪೇಟೆ ಈದ್ಗಾ ಮೈದಾನ

  • Share this:
ನವದೆಹಲಿ(ಆ.30): ಚಾಮರಾಜಪೇಟೆ (Chamrajpet) ಈದ್ಗಾ ಮೈದಾನ (Idgah Maidan) ಗಣೇಶೋತ್ಸವ (Ganesh Chaturthi) ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಎರಡು ದಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ನೀಡಿದೆ. ಸುಪ್ರೀಂ ಈ ಆದೇಶ ಚಾಮರಾಜನಗರದ ಈದ್ಗಾ ಮೈದಾನದಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಿದೆ. ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್​ ಅನುಮತಿ ನೀಡಿದ ಹಿನ್ನೆಲೆ ಮುಸ್ಲಿಂ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು ಎಂಬುವುದು ಉಲ್ಲೇಖನೀಯ.

ಹೌದು ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ಆದೇಶದವರೆಗೂ ಎರಡೂ ಪಕ್ಷಗಳಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದ್ದು, ಈದ್ಗಾ ಬಿಟ್ಟು ಬೇರೆಡೆ ಗಣೇಶೋತ್ಸವ ಆಚರಿಸಲೂ ಸುಪ್ರೀಂ ಸೂಚಿಸಿದೆ. ಅಲ್ಲದೇ ಹೈಕೋರ್ಟ್​ನಲ್ಲಿ ಹೊಸ ಏಕಸದಸ್ಯ ಪೀಠ ರಚಿಸಿ ಈ ವಿಚಾರಣೆ ಮುಂದುವರೆಸಿ, ಅಲ್ಲೇ ಪ್ರಕರಣ ಇತ್ಯರ್ಥಪಡಿಸುವಂತೆ ಆದೇಶಿಸಿದೆ.

ಇದನ್ನೂ ಓದಿ: Idgah Maidan: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಹೈಕೋರ್ಟ್ ಗ್ರೀನ್​ ಸಿಗ್ನಲ್!

ಈ ಹಿಂದೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಿರ್ಧಿಷ್ಟ ಅವಧಿಗೆ ಅನುಮತಿಯನ್ನು ನೀಡಬಹುದು, ಹಿಂದು ಹಾಗೂ ಮುಸ್ಲಿಮರು ಧಾರ್ಮಿಕ ಆಚರಣೆಗೆ ನಿರ್ಧಿಷ್ಟ ಅವಧಿಗೆ ಮೈದಾನ ಬಳಸಲು ರಾಜ್ಯ ಸರ್ಕಾರ ಅನುಮತಿಸಬಹುದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಸುಪ್ರೀಂ ಕೋರ್ಟ್ ಆದೇಶದ ಬಳಿಕ ರಾಜ್ಯ ಸರ್ಕಾರ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕಾ? ಇಲ್ಲವಾ ಎಂದು ಅಂತಿಮ ನಿರ್ಧಾರ ಪ್ರಕಟ ಮಾಡಲಿದೆ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನದ ಗಣೇಶೋತ್ಸವ ತೀವ್ರ ಕುತೂಹಲ ಕೆರಳಿಸಿದೆ. ಚಾಮರಾಜಪೇಟೆ ಮೈದಾನದ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದ್ದು, 3 ಡಿಸಿಪಿ, 21 ಎಸಿಪಿ, 47 ಇನ್ಸ್​ಪೆಕ್ಟರ್​​ಗಳು, 130 ಪಿಎಸ್​ಐ, 126 ASI, 900 ಕಾನ್ಸ್‌ಟೇಬಲ್​ಗಳು, 120 RAF ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೈದಾನದ ಭದ್ರತೆಗೆ ಒಟ್ಟು 1,500 ಪೊಲೀಸರು ಸೋಮವಾರ ಸಂಜೆಯಿಂದಲೇ ನಿಯೋಜನೆಗೊಳ್ಳಲಿದೆ.

ಇದನ್ನೂ ಓದಿ: BBMPಗೆ ಹಿಂದೂಪರ ಸಂಘಟನೆಗಳಿಂದ ಡೆಡ್ ಲೈನ್! ಯೋಗ ದಿನಕ್ಕೆ ಅವಕಾಶ ಕೊಡದಿದ್ರೆ ಕೋರ್ಟ್ ಮೊರೆ?

ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾತನಾಡಿ ಗಣೇಶ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಿದ್ದೇವೆ. ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲು ರೂಟ್ ಮಾರ್ಚ್ ಮಾಡಿದ್ದೇವೆ ಎಂದಿದ್ದಾರೆ. ಚಾಮರಾಜಪೇಟೆಯಲ್ಲಿ ಮೂರು ದಿನಗಳ ಕಾಲ ಬಿಗಿ ಭದ್ರತೆ ಇರಲಿದೆ. ಹೆಚ್ಚಿನ ನಿಗಾ ಇಡಲು ಡ್ರೋನ್ ಕೂಡ ಬಳಕೆ ಮಾಡಲಾಗು.ತ್ತೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು. ಗಣೇಶೋತ್ಸವ ಶಾಂತಿಯುತವಾಗಿ ಆಗುತ್ತೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.

ಸಿಬಲ್ ವಾದವೇನು?

'ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿಗಳ ಪ್ರತಿಷ್ಠಾಪನೆ ಮಾಡಿ, ಹಬ್ಬ ಆಚರಿಸಲು ಅನುಮತಿ ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದೆ. ಆದರೆ, ಕಳೆದ ಆರು ದಶಕಗಳಿಂದ ಮುಸ್ಲಿಮರು ಈ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಮೈದಾನದ ಬಳಕೆ ಬಗ್ಗೆ ಸೂಕ್ತ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿಲ್ಲ, ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೆ ಅನಗತ್ಯವಾಗಿ ಉದ್ವಿಗ್ನ ಪರಿಸ್ಥಿತಿಗೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ' ಎಂದು ವಕ್ಫ್ ಮಂಡಳಿ ಪರ ಕಪಿಲ್ ಸಿಬಲ್ ವಾದಿಸಿದರು.

PIL Petition Started Debate on Parties Freebie Culture and The fresh stand of the central
ಸುಪ್ರೀಂಕೋರ್ಟ್


ಇನ್ನು ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಸೇರಿದ್ದ ಎಂದು ಬಿಬಿಎಂಪಿ ತಿಳಿಸಿದ ಮೇಲೆ ಮೈದಾನವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಸುಪರ್ಧಿಗೆ ಪಡೆದಿತ್ತು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಕಂದಾಯ ಇಲಾಖೆಯ ಅಧಿಕಾರಿಗಳ ಭಾರಿ ಭದ್ರತೆಯಲ್ಲಿ ನಡೆಸಿತ್ತು.

ಯೋಗದಿನಾಚರಣೆಗೂ ಅವಕಾಶ ಬೇಕು

ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು ಅಂತ ಹಿಂದೂ ಸನಾತನ ಪರಿಷತ್ ಬಿಬಿಎಂಪಿಗೆ ಮನವಿ ನೀಡಿತ್ತು. ಅದೇ ರೀತಿ ಶ್ರೀರಾಮ ಸೇನೆ ಕೂಡಾ ಹಿಂದೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮ ಗಳ ಜೊತೆ ಗಣೇಶೋತ್ಸವಕ್ಕೂ ಅವಕಾಶ ನೀಡಿ ಅದರ ಜೊತೆ ಯೋಗದಿನಾಚರಣೆಗೂ ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿದೆ.
Published by:Precilla Olivia Dias
First published: