Dengue Effect: ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಡೆಂಗ್ಯೂ - ಮುದೂರಿನಲ್ಲಿ10 ದಿನ ಶಾಲೆಗೆ ರಜೆ ಘೋಷಣೆ

Heavy Rain: ಈ ಜಡ್ಕಲ್​ ಪ್ರದೇಶದ ಮುದೂರು ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಕಾರಣದಿಂದ 10 ದಿನಗಳ ಕಾಲ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.  

ಡೆಂಗ್ಯೂ ನಿರ್ಲಕ್ಷ್ಯ ಬೇಡ

ಡೆಂಗ್ಯೂ ನಿರ್ಲಕ್ಷ್ಯ ಬೇಡ

  • Share this:
ಒಂದೆಡೆ ರಾಜ್ಯದ ಕರಾವಳಿ ಭಾಗದಲ್ಲಿ (Coastal Area) ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ರೆ, ಇನ್ನೊಂದೆಡೆ ಮಕ್ಕಳನ್ನು ಡೆಂಗ್ಯೂ ರೋಗ ಕಾಡ್ತಿದೆ. ಕರಾವಳಿ ಭಾಗದಲ್ಲಿ ಮಕ್ಕಳಲ್ಲಿ ಡೆಂಗ್ಯೂ (Dengue) ಪ್ರಕರಣ ಹೆಚ್ಚಾಗುತ್ತಿದ್ದು ಪೋಷಕರನ್ನು ಆತಂಕಕ್ಕೆ ದೂಡಿದೆ. ಉಡುಪಿ ಜಿಲ್ಲೆಯ (Udupi District) ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್​ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿದ್ದು, ಅಲ್ಲಿನ ಮುದೂರು ಶಾಲೆಯಲ್ಲಿ ಬಂದ್​ ಮಾಡಲಾಗಿದೆ. ಶಾಲೆಯ ಮಕ್ಕಳಲ್ಲಿ ಹೆಚ್ಚು ಪ್ರಕರಣ ಕಾಣಿಸಿಕೊಂಡ ಹಿನ್ನೆಲೆ ಶಾಲೆ ಬಂದ್ ಮಾಡುವಂತೆ ಕೂರ್ಮಾರಾವ್​ ಆದೇಶ ಹೊರಡಿಸಿದ್ಧಾರೆ.

ಈ ಜಡ್ಕಲ್​ ಪ್ರದೇಶದ ಮುದೂರು ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಕಾರಣದಿಂದ 10 ದಿನಗಳ ಕಾಲ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.  ಇನ್ನು ಊರಿನಲ್ಲಿ ಡೆಂಗ್ಯೂ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಪ್ರತಿ ಮನೆಗಳಿಗೂ ಆರೋಗ್ಯ ಕಾರ್ಯಕರ್ತರು ಭೇಟಿ ನೀಡುತ್ತಿದ್ದು, ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಜನರಿಗೆ ಸಲಹೆ ನೀಡುತ್ತಿದ್ದು, ಜನರಿಗೆ ಮನೆಯ ಸ್ವಚ್ಛತೆ ಕಾಪಾಡಲು ಹೇಳಲಾಗುತ್ತಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗುತ್ತದೆ.

ಇನ್ನು ಬೆಳ್ತಂಗಡಿ ತಾಲೂಕಿನನೆರಿಯ ಗ್ರಾಮದಲ್ಲಿ ಸಹ ಹಲವಾರು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 48 ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಕಾಸರಗೋಡಿನ ಮಗುವೊಂದು ಮೃತಪಟ್ಟಿದ್ದು, ಇನ್ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

ಎಡೆ ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕರ್ನಾಟಕದ ಕರಾವಳಿ ಭಾಗ ತತ್ತರಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಇಂದು ಒಂದು ದಿನದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ದಕ್ಷಿಣ ಕನ್ನಡ ಡಿಸಿ ಆದೇಶ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಶಾಲೆಗಳಿಗೆ ರಜೆ ನೀಡುವ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯಿಂದ ಸುತ್ತೋಲೆ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಶಾಲೆಗಳಿಗೆ ಬಿಡುವು

ಮೈಸೂರು ಜಿಲ್ಲೆಯಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚಂದ್ರಕಾಂತ ಆದೇಶ ಹೊರಡಿಸಿದ್ದಾರೆ.

ಮಂಡ್ಯದಲ್ಲಿ ಶಾಲೆಗಳಿಗೆ ರಜೆ

ಇನ್ನು ಮಂಡ್ಯ ಜಿಲ್ಲೆಯಲ್ಲಿ ಭಾರಿ‌ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ‌ ಅಂಗನವಾಡಿಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಎಸ್ಎಸ್‌ಎಲ್‌ಸಿಯಲ್ಲಿ 85.63ರಷ್ಟು ಫಲಿತಾಂಶ, 145 ವಿದ್ಯಾರ್ಥಿಗಳಿಗೆ ಔಟ್ ಆಫ್‌ ಔಟ್ ಮಾರ್ಕ್ಸ್‌!

ಶಿವಮೊಗ್ಗದಲ್ಲಿ ಭಾರೀ ಮಳೆ

ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಿಇಒ ಅವರು ರಜೆ ಘೋಷಿಸಿದ್ದಾರೆ. ಇನ್ನು ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದ್ದು, ಗುರುವಾರ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್‌ ಅಲರ್ಟ್‌ ಘೋಷಿಸಿದ್ದರೆ, ಬಳಿಕ ಮೂರು ದಿನಗಳ ಕಾಲ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಇರಲಿದೆ.

ಇದನ್ನೂ ಓದಿ: ಬಡತನದಲ್ಲೂ ಕುಗ್ಗದ ಅಮಿತೋತ್ಸಾಹ, ಎಸ್ಎಸ್‌ಎಲ್‌ಸಿಯಲ್ಲಿ ಟಾಪರ್‌ ಆದ ವಿಜಯಪುರದ ಹುಡುಗ!

ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Published by:Sandhya M
First published: