Schools Reopening: ಸೆ. 21ರಿಂದ ಕೇವಲ ಶಾಲೆಗಳು ತೆರೆಯಲಿವೆ, ಆದ್ರೆ ತರಗತಿ ಪ್ರಾರಂಭ ಇಲ್ಲ; ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ ಎಂದು ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು
news18-kannada Updated:September 18, 2020, 1:06 PM IST

ಸಚಿವ ಸುರೇಶ್ ಕುಮಾರ್
- News18 Kannada
- Last Updated: September 18, 2020, 1:06 PM IST
ಮೈಸೂರು(ಸೆ.18): ಸಾಂಸ್ಕೃತಿಕ ನಗರಿ ಮೈಸೂರಿನ ನಜರ್ಬಾದ್ನಲ್ಲಿ ಇಂದು ನಗರ ಕೇಂದ್ರ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗ್ರಂಥಾಲಯ ಲೋಕಾರ್ಪಣೆ ಮಾಡಿದರು. ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮ ಇಂದು ನೆರವೇರಿತು. ಈ ಗ್ರಂಥಾಲಯ ಸುಮಾರು 5ಕೋಟಿ 34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದೆ. ಸಚಿವದ್ವಯರ ಜೊತೆಗೆ ಸ್ಥಳೀಯ ಶಾಸಕರು ಸಹ ಕೈಜೋಡಿಸಿದರು. ಲೈಬ್ರರಿ ಉದ್ಘಾಟನೆ ಬಳಿಕ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಾಲೆಗಳನ್ನು ಆರಂಭಿಸುವ ಬಗ್ಗೆ ಹೇಳಿದರು. ಇದೇ ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು.
ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಅವರಿಗೆ ಈಗಾಗಳೆ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ ಎಂದು ತಿಳಿಸಿದರು. Bihar Bridge Collapse: ಬಿಹಾರದಲ್ಲಿ ಉದ್ಘಾಟನೆಗೂ ಮುನ್ನವೇ ಕೊಚ್ಚಿ ಹೋದ ನೂತನ ಸೇತುವೆ
ಇದೇ ವೇಳೆ, ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ ಎಂದು ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇನ್ನು, ಹೋದಲ್ಲೆಲ್ಲಾ ಶಾಲೆ ಯಾವಾಗ ಶುರುವಾಗುತ್ತೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಇನ್ನೂ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನು ನಿವಾರಿಸುವ ಕೆಲಸ ನಮ್ಮ ಇಲಾಖೆ ಮಾಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಸುರೇಶ್ ಕುಮಾರ್, ಅಂತಹ ಯಾವುದೇ ಸಾಧ್ಯತೆಗಳು ರಾಜ್ಯದಲ್ಲಿ ಇಲ್ಲ. ಶೇ.100ಕ್ಕೆ ನೂರಷ್ಟು ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದರು. ಇನ್ನು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ, ಅದು ಸಿಎಂ ಪರಮಾಧಿಕಾರ. ಆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಅವರಿಗೆ ಈಗಾಗಳೆ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ ಎಂದು ತಿಳಿಸಿದರು.