ಬೆಂಗಳೂರು ಗಲಭೆ ಪ್ರಕರಣದಲ್ಲಿ ಎಸ್.ಡಿ.ಪಿ.ಐ ಪಾತ್ರವಿದೆ; ಸಚಿವ ಸುರೇಶ್ ಕುಮಾರ್

Bangalore Violence: ಯುಪಿ ಮಾದರಿಯ ಕಾನೂನನ್ನು‌ ರಾಜ್ಯದಲ್ಲೂ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈಗಾಗಲೇ ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳ ಆದೇಶವು ಸಹ ಇದೆ. ಯಾರು ಬಂದ್ ಕರೆ ಕೊಡುತ್ತಾರೊ ಆ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಆದ್ರೆ ಅವರ ಕೈಯಲ್ಲಿ‌ ಕಟ್ಟಿಸಬೇಕೆಂಬ ಆದೇಶವಿದೆ. ಇದೇ ಮಾದರಿಯಲ್ಲಿ ಡಿ.ಜೆ ಹಳ್ಳಿ ಗಲಭೆಯಲ್ಲಿ ಆಗಿರುವ ನಷ್ಟವನ್ನು ಸಂಬಂಧಿಸಿದವರಿಂದಲೇ ಭರಿಸಬೇಕಾಗಿದೆ ಸಚಿವ ಸುರೇಶ್ ಕುಮಾರ್ ಹೇಳಿದರು.

news18-kannada
Updated:August 14, 2020, 11:58 AM IST
ಬೆಂಗಳೂರು ಗಲಭೆ ಪ್ರಕರಣದಲ್ಲಿ ಎಸ್.ಡಿ.ಪಿ.ಐ ಪಾತ್ರವಿದೆ; ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್​ ಕುಮಾರ್
  • Share this:
ಚಾಮರಾಜನಗರ (ಆಗಸ್ಟ್ 14): ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್ ಡಿಪಿಐ ಪಾತ್ರ ಬಹಳಷ್ಟಿದೆ. ಈ ಬಗ್ಗೆ ಸಾಕಷ್ಟು ಮಾಹಿತಿ ಸಿಕ್ಕಿದೆ ಎಂದು ಪ್ರಾಥಮಿಕ ಹಾ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಬಿಜೆಪಿ ಕಚೇರಿ ನೂತನ ಕಟ್ಟಡ ಶಿಲಾನ್ಯಾಸದ ವೇಳೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕೆಂಬ  ಕೂಗು ಕೇಳಿ ಬರುತ್ತಿದೆ. ಈ ಸಂಘಟನೆಯನ್ನು  ನಿಷೇಧಿಸಬೇಕೆಂಬುದು ಎಲ್ಲರೂ ಒಪ್ಪುವ ಬೇಡಿಕೆಯಾಗಿದೆ. ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ನಿಷೇಧಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದರು.

ಈಗ ಎಸ್ ಡಿಪಿಐ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ದೃಢ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಗೃಹ ಸಚಿವರು ಕೇಂದ್ರದೊಂದಿಗೆ ಸಮಾಲೋಚನೆ ನಡೆಸಿ ಗಟ್ಟಿಯಾದ ನಿಲುವು ಪ್ರಕಟಿಸಲಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದ ಈರುಳ್ಳಿಗೆ ಕೊಳೆ ರೋಗ; ಸಂಕಷ್ಟಕ್ಕೆ ಸಿಲುಕಿದ ಈರುಳ್ಳಿ ಬೆಳೆಗಾರರು

ಯುಪಿ ಮಾದರಿ ಕಾನೂನು ಜಾರಿಗೆ ಚಿಂತನೆ

ಯುಪಿ ಮಾದರಿಯ ಕಾನೂನನ್ನು‌ ರಾಜ್ಯದಲ್ಲೂ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈಗಾಗಲೇ ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳ ಆದೇಶವು ಸಹ ಇದೆ. ಯಾರು ಬಂದ್ ಕರೆ ಕೊಡುತ್ತಾರೊ ಆ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಆದ್ರೆ ಅವರ ಕೈಯಲ್ಲಿ‌ ಕಟ್ಟಿಸಬೇಕೆಂಬ ಆದೇಶವಿದೆ. ಇದೇ ಮಾದರಿಯಲ್ಲಿ ಡಿ.ಜೆ ಹಳ್ಳಿ ಗಲಭೆಯಲ್ಲಿ ಆಗಿರುವ ನಷ್ಟವನ್ನು ಸಂಬಂಧಿಸಿದವರಿಂದಲೇ ಭರಿಸಬೇಕಾಗಿದೆ ಸಚಿವ ಸುರೇಶ್ ಕುಮಾರ್ ಹೇಳಿದರು.

ರಾಜ್ಯದಲ್ಲಿ ಆಗಸ್ಟ್  31 ರವರಗೆ ಶಾಲಾ ಕಾಲೇಜುಗಳನ್ನು ತೆರೆಯಲು ಅವಕಾಶವಿಲ್ಲ. ಶಾಲೆಗಳನ್ನು ತೆರೆಯುವ ಬಗ್ಗೆ ಕೇಂದ್ರ ಸರ್ಕಾರದ ಆದೇಶಕ್ಕೆ ಕಾಯುತ್ತಿದ್ದೇವೆ. ಈ ಆದೇಶ ಬಂದ ಕೂಡಲೇ ಮುಂದಿನ ನಮ್ಮ‌ ನಿರ್ಧಾರವನ್ನ ಪ್ರಕಟಿಸುತ್ತೇವೆ ಎಂದು ಅವರು ಹೇಳಿದರು.
ಸೆಪ್ಟೆಂಬರ್​​ವರೆಗೆ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
Published by: Latha CG
First published: August 14, 2020, 11:20 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading