Malali Mosque: ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು: SDPI ರಾಜ್ಯಾಧ್ಯಕ್ಷ

ತಾಂಬೂಲ ಪ್ರಶ್ನೆ ಎಂದು ಬರುವವರರನ್ನು 'ಪೂಜಾ ಸ್ಥಳ ಕಾಯ್ದೆ 1991' ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆ್ಯಕ್ಟ್ ಅನ್ನು ಪೊಲೀಸರು ಓದಿಲ್ವೇ?

ಅಬ್ದುಲ್ ಮಜೀದ್

ಅಬ್ದುಲ್ ಮಜೀದ್

  • Share this:
ಮಳಲಿ ಜುಮ್ಮಾ ಮಸೀದಿಯಲ್ಲಿ (Malali  Jumma Mosque) ಹಿಂದೂ ದೇವರ (Hindu Temple) ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ  SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ (SDPI State President Abdul Mazeed) ಹೇಳಿಕೆ ನೀಡಿದ್ದಾರೆ. ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟು ಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ಮಳಲಿ ಮಸೀದಿ ವಿಚಾರದಲ್ಲಿ ಮಾತಾಡದಂತೆ ತಮ್ಮ ಶಾಸಕರಿಗೆ ಹೇಳಿದ್ದಾರೆ. ಕಾಂಗ್ರೆಸ್ (Congress) ಮುಸ್ಲಿಮರ (Muslim) ಪರ ಅಲ್ಲ ಅನ್ನೋದನ್ನ ತಿಳಿದುಕೊಳ್ಳಿ. ತಾಂಬೂಲ ಪ್ರಶ್ನೆ (Tambula Prashne) ಎಂದು ಬರುವವರನ್ನು ಪೊಲೀಸರು (Police) ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.

ತಾಂಬೂಲ ಪ್ರಶ್ನೆ ಎಂದು ಬರುವವರರನ್ನು 'ಪೂಜಾ ಸ್ಥಳ ಕಾಯ್ದೆ 1991' ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆ್ಯಕ್ಟ್ ಅನ್ನು ಪೊಲೀಸರು ಓದಿಲ್ವೇ? 2006ರಲ್ಲಿ 200 ವರ್ಷಗಳಷ್ಟು ಹಳೆಯದಾದ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ. ಸಂಘ ಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ ಎಂದು ಸವಾಲು ಹಾಕಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ. ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆ ಮುಂದೆ ಪ್ರತಿಭಟನೆ ಮಾಡಲಿ ಎಂದು ಮಜೀದ್ ಹೇಳಿದರು.

ಇದನ್ನೂ ಓದಿ:  Mangaluru Hijab Row: ವಿದ್ಯಾರ್ಥಿ ನಾಯಕ ರಾಜೀನಾಮೆ, ಹಿಜಾಬ್ ವಿದ್ಯಾರ್ಥಿನಿಯರಿಂದ ದಾಖಲೆ ಬಿಡುಗಡೆ

ಯೂಸೂಪ್ ಜೊತೆ ಒಪ್ಪಂದ ಮಾಡಿಕೊಳ್ಳಲು ನಾಚಿಕೆ ಆಗಲಿಲ್ಲವೇ?

RSS ಅವರ ಆಟಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹೆದರಿಕೊಳ್ಳಬಹುದು. ಆದ್ರೆ RSS ಆಟಕ್ಕೆ ನಾವು ಹೆದರಲ್ಲ. ವ್ಯಾಪಾರ ಬಹಿಷ್ಕಾರ ಮಾಡಿ ಎಂದು ಕರೆ ನೀಡುವ ಸಂಘ ಪರಿವಾರದ ಮುಖ್ಯಮಂತ್ರಿಗಳೇ, ದಾವೋಸ್ ನಲ್ಲಿ ಯೂಸಫ್ ಅಲಿ ಅವರೊಂದಿಗೆ 2 ಸಾವಿರ ಕೋಟಿ ರೂ. ಒಪ್ಪಂದ ಮಾಡಿಕೊಳ್ಳಲು ನಾಚಿಕೆ ಅಗಲಿಲ್ಲವೇ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಆಟಕ್ಕೆ ನಾವು ಹೆದರಲ್ಲ

ಆರ್‌ಎಸ್‌ಎಸ್‌ನ ಆಟಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬೆದರಬಹುದು. ಆದರೆ, ನಿಮ್ಮ ಆಟಕ್ಕೆ ನಾವು ಹೆದರುವುದಿಲ್ಲ. ವ್ಯಾಪಾರ ಬಹಿಷ್ಕಾರ ಮಾಡಿ ಎಂದು ಕರೆ ನೀಡುವ ಸಂಘ ಪರಿವಾರದವರೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯೂಸಫ್‌ ಅಲಿ ಜೊತೆ 2 ಸಾವಿರ ಕೋಟಿ ಒಪ್ಪಂದ ಮಾಡಿದಾಗ ನಿಮಗೆ ನಾಚಿಕೆಯಾಗಿಲ್ಲವಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ:  NWKRTC: ಇಲ್ಲಿ ಡಕೋಟಾ, ಅಲ್ಲಿ ಗುಡ್ ಕಂಡೀಷನ್: ಜನರ ಜೀವದ ಜೊತೆ ಚೆಲ್ಲಾಟ ಆಡಲು ಹೊರಟಿತೇ ಸಾರಿಗೆ ಇಲಾಖೆ?

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ದೇಶದ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ. ದೇಶವನ್ನು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಮಾಡುವ ಮೊದಲು ಛಿದ್ರಗೊಳಿಸಲು ಹೊರಟಿದ್ದಾರೆ ಎಂದು ಮಜೀದ್ ಆರೋಪಿಸಿದರು.

ತಾಂಬೂಲ ಪ್ರಶ್ನೆ 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಮಳಲಿ ಮಸೀದಿ ನವೀಕರಣದ ವೇಳೆ ದೇವಾಲಯದ ಮಾದರಿ ರಚನೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ದೃಢೀಕರಣಕ್ಕಾಗಿ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಗಿತ್ತು. ಕೇರಳದ ಪ್ರಖ್ಯಾತ ಜ್ಯೋತಿಷಿ ಜಿ.ಪಿ. ಗೋಪಾಲಕೃಷ್ಣ ಪಣಿಕ್ಕರ್ ನೇತೃತ್ವದಲ್ಲಿ ನಡೆದ ಪ್ರಶ್ನಾಚಿಂತನೆ ನಡೆದಿತ್ತು. ಈ ವೇಳೆ ಕೇರಳ ದೈವಜ್ಞರು ಸ್ಥಳದಲ್ಲಿ ಈ ಹಿಂದೆ ದೇವಾಲಯವಿತ್ತು, ವಿವಾದದಿಂದ ದೇವಾಲಯ ನಾಶಪಡಿಸಲಾಗಿದೆ, ದೇವಸ್ಥಾನ ಮರುಸ್ಥಾಪಿಸಬೇಕೆಂದು ಹೇಳಿದ್ದಾರೆ.

ದೇವಾಲಯ ನಾಶಪಡಿಸಿ, ಮಸೀದಿ ಕಟ್ಟಲಾಗಿದೆ

ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ಆದರೆ ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ ಅಂತ ಜ್ಯೋತಿಷಿ ಜಿ.ಪಿ. ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ವಿವಾದದಿಂದಾಗಿ ದೇವಾಲಯ ನಾಶಪಡಿಸಿ, ಮಸೀದಿ ಕಟ್ಟಲಾಗಿದೆ. ಹೀಗಾಗಿ ಇಲ್ಲಿ ದೇವಾಲಯವನ್ನು ಮರುಸ್ಥಾಪಿಸಬೇಕಿದೆ ಎಂದು ತಿಳಿಸಿದ್ದಾರೆ.
Published by:Mahmadrafik K
First published: