• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಚನ್ನಪಟ್ಟಣದಲ್ಲಿ ನಾಳೆ ಎರಡನೇ ಹಂತದ ಗ್ರಾ.ಪಂ ಚುನಾವಣೆ: ಎಚ್​ಡಿಕೆ- ಸಿಪಿವೈಗೆ ಪ್ರತಿಷ್ಠೆಯ ಪ್ರಶ್ನೆ

ಚನ್ನಪಟ್ಟಣದಲ್ಲಿ ನಾಳೆ ಎರಡನೇ ಹಂತದ ಗ್ರಾ.ಪಂ ಚುನಾವಣೆ: ಎಚ್​ಡಿಕೆ- ಸಿಪಿವೈಗೆ ಪ್ರತಿಷ್ಠೆಯ ಪ್ರಶ್ನೆ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಚನ್ನಪಟ್ಟಣ ತಾಲೂಕಿ 32,  ಮಾಗಡಿ ತಾಲ್ಲೂಕಿನ 30 ಗ್ರಾಮಗಳು ಸೇರಿ ಒಟ್ಟು 62 ಗ್ರಾ.ಪಂ.ಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ನಡೆಸಿದೆ.

  • Share this:

ರಾಮನಗರ (ಡಿ. 26): ಜೆಡಿಎಸ್​ ಹಾಗೂ ಬಿಜೆಪಿ ನಾಯಕರ ಪ್ರತಿಷ್ಟೆಯ ಕಣವಾದ ಚನ್ನಪಟ್ಟಣದಲ್ಲಿ ನಾಳೆ ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ. ಈಗಾಗಲೇ ಮತದಾನಕ್ಕೆ ಚುನಾವಣಾ ಆಯೋಗದಿಂದ ಎಲ್ಲಾ ಸಿದ್ಧತೆ ನಡೆದಿದೆ.  ಚನ್ನಪಟ್ಟಣ ತಾಲೂಕಿ 32,  ಮಾಗಡಿ ತಾಲ್ಲೂಕಿನ 30 ಗ್ರಾಮಗಳು ಸೇರಿ ಒಟ್ಟು 62 ಗ್ರಾ.ಪಂ.ಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ನಡೆಸಿದೆ. ಚುನಾವಣೆ ನಡೆಯುವ ಚನ್ನಪಟ್ಟಣ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  1.63.259 ಜನ ಮತದಾರರಿದ್ದು, ಮಾಗಡಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1.41.877 ಜನ ಮತದಾರರಿದ್ದಾರೆ. ಇದರಲ್ಲಿ 26 ಸೂಕ್ಷ್ಮ ಹಾಗೂ 29 ಅತಿ ಸೂಕ್ಷ್ಮ ಮತಗಟ್ಟೆಗಳಾಗಿವೆ.  ಮಾಗಡಿ ತಾಲ್ಲೂಕಿನಲ್ಲಿ 225 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 26 ಸೂಕ್ಷ್ಮ ಹಾಗೂ 24 ಅತಿ ಸೂಕ್ಷ್ಮ ಮತಗಟ್ಟೆಗಳಾಗಿರುತ್ತದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ನಾಳೆ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಚನ್ನಪಟ್ಟಣ ತಾಲೂಕಿಗೆ ಸಂಬಂಧಿಸಿದಂತೆ 1.103 ಮತಗಟ್ಟೆ ಸಿಬ್ಬಂದಿ ಹಾಗೂ ಮಾಗಡಿ ತಾಲೂಕಿಗೆ ಸಂಬಂಧಿಸಿದಂತೆ 923 ಮತಗಟ್ಟೆ ಸಿಬ್ಬಂದಿಗಳು ಸೇರಿದಂತೆ ಒಟ್ಟಾರೆ 1.926 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.  ಚನ್ನಪಟ್ಟಣ ತಾಲೂಕಿಗೆ ಸಂಬಂಧಿಸಿದಂತೆ 32 ಗ್ರಾಮ ಪಂಚಾಯಿತಿಗಳ ಒಟ್ಟು 482 ಸ್ಥಾನಗಳಲ್ಲಿ  1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ. 47 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 434 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 1.156 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.


ಮಾಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ 30 ಗ್ರಾಮ ಪಂಚಾಯಿತಿಗಳ ಒಟ್ಟು 426 ಸ್ಥಾನಗಳಿಗೆ ನಾಮಪತ್ರ  ಸಲ್ಲಿಕೆಯಾಗಿದ್ದು. 20 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 405 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 1.123 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ. ಮಾಗಡಿ ತಾಲೂಕಿನ ಮಾಡಬಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಗಲ್ಲು ಕ್ಷೇತ್ರಕ್ಕೆ ಒಂದು ನಾಮಪತ್ರ ಸ್ವೀಕೃತವಾಗಿದ್ದು, ಸದರಿ ನಾಮಪತ್ರವು ತಿರಸ್ಕೃತಗೂಂಡ ಹಿನ್ನೆಲೆಯಲ್ಲಿ ಮಾನಗಲ್ಲು ಕ್ಷೇತ್ರದ ಸದಸ್ಯ ಸ್ಥಾನ ಖಾಲಿ ಉಳಿದಿರುತ್ತದೆ.ಎರಡನೇ ಹಂತದಲ್ಲಿ ಒಟ್ಟಾರೆ 62 ಗ್ರಾಮ ಪಂಚಾಯಿತಿಗಳ ಒಟ್ಟು 908 ಸ್ಥಾನಗಳಲ್ಲಿ 1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ. 67 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 839 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 2.279 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.


ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಈ ಬಾರಿಯ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಜಿದ್ದಿಗೆಬಿದ್ದು ಹೋರಾಡುತ್ತಿದ್ದಾರೆ. ನಾಳೆ ಮತದಾನ ನಡೆಯಲಿದ್ದು, ಡಿ. 30ರಂದು ಎಲ್ಲರ ಭವಿಷ್ಯ ನಿರ್ಧಾರವಾಗಲಿದೆ.

Published by:Seema R
First published: