2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಘೋಷಣೆ, ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿ ಬಿಡುಗಡೆ 

ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ  ಪರೀಕ್ಷೆ ನಡೆಯಲಿದ್ದು, ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮಾ.2):  ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ದಿನಾಂಕ (Exam date) ಘೋಷಣೆ ಮಾಡಿದೆ. ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ  ಪರೀಕ್ಷೆ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಅಂತಿಮ ವೇಳಾಪಟ್ಟಿ (Final Schedule) ಬಿಡುಗಡೆ ಮಾಡಿದೆ.  ಎರಡು ಬಾರಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ ಈ ಬಾರಿ ಅಂತಿಮವಾಗಿ ವೇಳಾ ಪಟ್ಟಿ ಘೋಷಣೆ ಮಾಡಿದೆ. ಏಪ್ರಿಲ್ 22 ರಿಂದ ರಾಜ್ಯಾದ್ಯಂತ ದ್ವಿತಿಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಕಡಿಮೆಯಾದ್ರು. ವಿದ್ಯಾರ್ಥಿಗಳಿಗೆ ಕೋವಿಡ್​ ಮಾರ್ಗಸೂಚಿಗಳ ಪಾಲನೆ ಕಡ್ಡಾಯವಾಗಲಿದೆ. 

ಯಾವ ದಿನ ಯಾವ ವಿಷಯಗಳಿಗೆ ಪರೀಕ್ಷೆ

ಏಪ್ರಿಲ್​  22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23  ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 24 ರಂದು  ರಜೆ
ಏಪ್ರಿಲ್ 25 ರಂದು ಅರ್ಥ ಶಾಸ್ತ್ರ
ಏಪ್ರಿಲ್ 26 ರಂದು ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28 ರಂದು ಕನ್ನಡ, ಅರೇಬಿಕ್
ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 3 ರಂದು ರಜೆ
ಮೇ 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಎಂಡ್ ವೆಲ್‌ನೆಸ್
ಮೇ 5 ರಂದು ಇಂಗ್ಲಿಷ್
ಮೇ 10 ರಂದು ಇತಿಹಾಸ, ಭೌತಶಾಸ್ತ್ರ
ಮೇ 12 ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಮೇ 14 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ 17 ರಂದು ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮೇ 18 ರಂದು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ

ಮೊದಲನೇಯ ದಿನ ಏಪ್ರಿಲ್​  22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ ನಡೆಯಲಿದೆ. ಎರಡನೇ ದಿನ ಅಂದರೆ ಏಪ್ರಿಲ್ 23  ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 25 ರಂದು ಅರ್ಥ ಶಾಸ್ತ್ರ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. ಏಪ್ರಿಲ್ 26 ರಂದು ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಇನ್ನು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಭಾಷೆಗಳಿಗೆ ಏಪ್ರಿಲ್ 27 ರಂದು ಹಾಗೂ ಕನ್ನಡ, ಅರೇಬಿಕ್ ಭಾಷೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 28 ರಂದು ಪರೀಕ್ಷೆ ನಡೆಯಲಿದೆ.

ಮುಂದುವರೆದು ಮೇ- 2022 ರ  ಮಾಹೆಯಲ್ಲಿಯೂ  ಸಹ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜರುಗಲಿದ್ದು, ಮೇ 2 ನೇ ತಾರೀಕಿನಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರಮೇ 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಎಂಡ್ ವೆಲ್‌ನೆಸ್ ಹಾಗೂ ಮೇ 5 ರಂದು ಇಂಗ್ಲಿಷ್ ಭಾಷೆಯ ಪರೀಕ್ಷೆಗಳು ನಡೆಯಲಿವೆ. ನಂತರದಲ್ಲಿ 5 ದಿನಗಳ ತರುವಾಯ ಅಂದರೆ, ಮೇ 10 ರಂದು ಇತಿಹಾಸ, ಭೌತಶಾಸ್ತ್ರ, ಮೇ 12 ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, ಮೇ 14 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ , ಮೇ 17 ರಂದು ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಮತ್ತು ಮೇ 18 ರಂದು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ  ಪರೀಕ್ಷೆ ದಿನಾಂಕ  ಘೋಷಣೆ ಮಾಡಿದೆ. ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ  ಪರೀಕ್ಷೆ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ.
Published by:Pavana HS
First published: