ಬೆಂಗಳೂರು(ಮಾ.03): ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದ್ದು, ಮಾರ್ಚ್ 23ರವರೆಗೆ ನಡೆಯಲಿದೆ. ಈ ಬಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಪರೀಕ್ಷಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತೆ ಎಂ.ಕನಗವಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾರ್ಚ್ 4ರಿಂದ 23ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ 1016 ಕೇಂದ್ರಗಳಲ್ಲಿ 6,80,674 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
![]()
ದ್ವಿತೀಯ ಪರೀಕ್ಷೆ ವೇಳಾಪಟ್ಟಿ
ದೆಹಲಿ, ತೆಲಂಗಾಣ ಬಳಿಕ ಆಗ್ರಾದಲ್ಲಿ 6 ಕೊರೋನಾ ಶಂಕಿತ ಪ್ರಕರಣಗಳು: ದೆಹಲಿಯಲ್ಲಿ ಕೆಲ ಶಾಲೆಗಳಿಗೆ ರಜೆ ಘೋಷಣೆ
ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ನಿಯಂತ್ರಣ ಘಟಕಗಳನ್ನು ಇರಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. 2,16,930 ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ, 2,61,674 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಮತ್ತು 2,01,445 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
ಈ ಬಾರಿ 3,41,618 ಹುಡುಗರು ಮತ್ತು 3,38431 ಹುಡುಗಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 39 ವಿಷಯಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಪಿಯುಸಿ ಮಂಡಳಿ ಮುನ್ನೆಚ್ಚರಿಕಾ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಕನಗವಲ್ಲಿ ತಿಳಿಸಿದರು.
ಕೊರೋನಾ ವೈರಸ್ ಭೀತಿ, ರಾಜ್ಯಾದ್ಯಂತ ಹೈ ಅಲರ್ಟ್: 2 ವಿಶೇಷ ಲ್ಯಾಬ್, ತಪಾಸಣಾ ಕೇಂದ್ರಗಳ ಹೆಚ್ಚಳ: ರಾಮುಲು
ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಇರುವ ಹಿನ್ನೆಲೆ, ಸಿಎಂ ಬಿಎಸ್ ಯಡಿಯೂರಪ್ಪ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ, ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ನಾಡಿನ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದಿರುವ ಅವರು, ಪರೀಕ್ಷೆ ಯಶಸ್ವಿ ಭವಿಷ್ಯಕ್ಕೆ ಮೆಟ್ಟಿಲಾಗಲಿ ಎಂದು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ