ವಿಜಯಪುರ(ಮಾ.04): ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾದ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ನಡೆದಿದೆ.
ಇಂದು ಭೌತಶಾಸ್ತ್ರ ವಿಷಯದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಆರಂಭವಾದ ಒಂದು ಗಂಟೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಯಾರೋ ಕಿಡಿಗೇಡಿಗಳು ಮೊಬೈಲ್ನಲ್ಲಿ ಫೋಟೋ ತೆಗೆದು ಲೀಕ್ ಮಾಡಿದ್ದಾರೆ ಎನ್ನಲಾಗಿದೆ. ಈ ಕೃತ್ಯದಲ್ಲಿ ಕಾಲೇಜು ಸಿಬ್ಬಂದಿಯ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗಿದೆ.
ಪರೀಕ್ಷೆ ದಿನವೇ ಪಿಯುಸಿ ಉಪನ್ಯಾಸಕರ ಪ್ರತಿಭಟನೆ: ಬೇಡಿಕೆ ಈಡೇರದಿದ್ದರೆ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಎಚ್ಚರಿಕೆ
ಸೋರಿಕೆಯಾದ ಕೆಲವೇ ನಿಮಿಷಗಳಲ್ಲಿ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಪರೀಕ್ಷಾ ಕೇಂದ್ರ ಸುತ್ತ ಬಿಗಿ ಭದ್ರತೆ ಇದ್ದರೂ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಭೌತಶಾಸ್ತ್ರ ಪರೀಕ್ಷೆ ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಪಿಯುಸಿ ಮಂಡಳಿ ಮುಂಜಾಗ್ರತಾ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ ವಹಿಸಲಾಗಿತ್ತು. ಆದರೂ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
2nd PUC Exams: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿದ್ಯಾರ್ಥಿಗಳು ಶುಭ ಕೋರಿದ ಸಿಎಂ ಬಿಎಸ್ವೈ, ಶಿಕ್ಷಣ ಸಚಿವ ಸುರೇಶ್ ಕುಮಾರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ