ಕಲಬುರ್ಗಿ, ತುಮಕೂರು, ಹಾಸನ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದಲೇ ನಿಷೇಧಾಜ್ಞೆ ಜಾರಿ

ಹಾಸನ ಜಿಲ್ಲೆಯಾದ್ಯಂತ ಇಂದಿನಿಂದ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ಡಿಸೆಂಬರ್ 21 ರ ಮಧ್ಯ ರಾತ್ರಿಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಗುಂಪು ಸೇರುವಂತಿಲ್ಲ. ಮತ್ತು ಪ್ರತಿಭಟಿಸುವಂತಿಲ್ಲ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ರಾಷ್ಟ್ರೀಯ ಪೌರತ್ವ ಕಾಯ್ದೆ ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

  ಮೈಸೂರಿನಲ್ಲಿ ನಾಳೆಯಿಂದ ನಿಷೇಧಾಜ್ಞೆ

  ಮೈಸೂರು ನಗರ ವ್ಯಾಪ್ತಿಯಲ್ಲಿ ಡಿಸೆಂಬರ್​ 19ರಿಂದ 21ರವರೆಗೆ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಮೈಸೂರು ನಗರ ಪೋಲೀಸ್ ಆಯುಕ್ತರಾದ ಕೆ.ಟಿ.ಬಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಡಿ.19ರಿಂದ ಬೆಳಗ್ಗೆ 6ರಿಂದ ಡಿ.21ರವರೆಗೆ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಯಾವುದೇಪ್ರತಿಭಟನೆ, ಧರಣಿ, ಮೆರವಣಿಗೆ, ರ್ಯಾಲಿ ಮಾಡದಂತೆ ಆದೇಶ ನೀಡಲಾಗಿದೆ. ಕೆಲ ಸಂಘಟನೆಗಳು ಬಂದ್​ ಮಾಡುವ ಮುನ್ಸೂಚನೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

  ಕಲಬುರ್ಗಿಯಲ್ಲಿ ಇಂದಿನಿಂದ ನಿಷೇಧಾಜ್ಞೆ

  ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ರಾತ್ರಿಯಿಂದಲೇ ಕಲಬುರ್ಗಿ ಬಂದ್ ಕರೆ ನೀಡಲಾಗಿದೆ. ಈ ಹಿನ್ನೆಲೆ. ಕಲಬುರ್ಗಿಯಲ್ಲಿ 3 ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದಿನಿಂದ 21ರ ಮಧ್ಯರಾತ್ರಿವರೆಗೆ ಸೆಕ್ಷನ್ ಜಾರಿಯಲ್ಲಿರುತ್ತದೆ.  ಅಪರ ಜಿಲ್ಲಾಧಿಕಾರಿ ಶಂಕರಣ್ಣ ವಣಿಕ್ಯಾಳಯಾವುದೇ ಧರಣಿ ಮಾಡದಂತೆ ಆದೇಶ ಹೊರಡಿಸಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

  ದಾವಣಗೆರೆಯಲ್ಲಿ ಇಂದಿನಿಂದ ನಿಷೇಧಾಜ್ಞೆ

  ದಾವಣಗೆರೆ ಜಿಲ್ಲೆಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ  ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಆದೇಶ ಹೊರಡಿಸಿದ್ದಾರೆ. ಡಿ.18 ರಾತ್ರಿ 9 ಗಂಟೆಯಿಂದ ಡಿ.21 ರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

   ತುಮಕೂರಿನಲ್ಲಿ ಇಂದಿನಿಂದ ನಿಷೇಧಾಜ್ಞೆ

  ತುಮಕೂರು ಜಿಲ್ಲೆಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪ್ರಗತಿ ಪರ ಒಕ್ಕೂಟ, ಸಿಐಟಿಯು, ದಲಿತ ಪರ ಸಂಘಟನೆಗಳು ಬಂದ್ ನಡೆಸುವ ಸಾಧ್ಯತೆ ಇದೆ. ಹೀಗಾಗಿ ತುಮಕೂರು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್  ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.  ಡಿ.18 ರಾತ್ರಿ 8 ಗಂಟೆಯಿಂದ ಡಿ.21 ರಾತ್ರಿ 12 ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. 

  ಬಾಗಲಕೋಟೆಯಲ್ಲಿ ಇಂದಿನಿಂದ ನಿಷೇಧಾಜ್ಞೆ

  ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದ ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಖಾರಿ  ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

  ಶಿವಮೊಗ್ಗದಲ್ಲಿ ಇಂದಿನಿಂದ ನಿಷೇಧಾಜ್ಞೆ

  ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ನಾಳೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯುವ ಹಿನ್ನೆಲೆ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ 21 ರ ಮಧ್ಯ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

  ಹಾಸನದಲ್ಲಿ ಇಂದಿನಿಂದ ನಿಷೇಧಾಜ್ಞೆ

  ಹಾಸನ ಜಿಲ್ಲೆಯಾದ್ಯಂತ ಇಂದಿನಿಂದ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ಡಿಸೆಂಬರ್ 21 ರ ಮಧ್ಯ ರಾತ್ರಿಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಗುಂಪು ಸೇರುವಂತಿಲ್ಲ. ಮತ್ತು ಪ್ರತಿಭಟಿಸುವಂತಿಲ್ಲ.

  ಹುಬ್ಬಳ್ಳಿ-ಧಾರವಾಡದಲ್ಲಿ ನಿಷೇಧಾಜ್ಞೆ

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಮ್​​ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ, ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
  Published by:Latha CG
  First published: