ಪೌರತ್ವ ಕಾಯ್ದೆ ಪ್ರತಿಭಟನೆ ಎಫೆಕ್ಟ್; ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನಿಷೇಧಾಜ್ಞೆ

ರಾಷ್ಟ್ರೀಯ ಪೌರತ್ವ ಮಸೂದೆಯ ಪರ ಅಥವಾ ವಿರೋಧ ಪ್ರತಿಭಟನೆ ಮಾಡುವಂತಿಲ್ಲ.  ಯಾವುದೇ ಪ್ರತಿಭಟನೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ. ಉಲ್ಲಂಘಿಸಿದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನಗರಾದಾದ್ಯಂತ ಕೆಎಸ್​​ಆರ್​ಪಿ  ನಿಯೋಜನೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ರಾಷ್ಟ್ರೀಯ ಪೌರತ್ವ ಕಾಯ್ದೆ ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಈ ಪ್ರತಿಭಟನೆಯ ಕಾವು ತೀವ್ರತೆ ಪಡೆದುಕೊಳ್ಳುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 

ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ  ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ತಿಳಿಸಿದ್ದಾರೆ.

ಯಾವುದಕ್ಕಿಲ್ಲ ನಿರ್ಬಂಧ?

ಶಾಲಾ-ಕಾಲೇಜುಗಳು ಎಂದಿನಂತೆ ನಡೆಯುತ್ತವೆ.  ಹೂ, ಹಣ್ಣು,ತರಕಾರಿ ಮಾರುಕಟ್ಟೆಗೆ ಯಾವುದೇ ನಿರ್ಬಂಧವಿಲ್ಲ. ಬಿಎಂಟಿಸಿ, ಕೆಎಸ್ಆರ್​ಟಿಸಿ ಬಸ್​, ಆಟೋ, ಮೆಟ್ರೋ, ರೈಲುಗಳು ಎಂದಿನಂತೆ ಸಂಚರಿಸಲಿವೆ.

ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ; ಮೆರವಣಿಗೆ, ಪ್ರತಿಭಟನೆಗೆ ಇಲ್ಲ ಅವಕಾಶ

ಕೆಎಸ್​ಆರ್​​​​ಪಿ ಪೊಲೀಸರ ನಿಯೋಜನೆ

ರಾಷ್ಟ್ರೀಯ ಪೌರತ್ವ ಮಸೂದೆಯ ಪರ ಅಥವಾ ವಿರೋಧ ಪ್ರತಿಭಟನೆ ಮಾಡುವಂತಿಲ್ಲ.  ಯಾವುದೇ ಪ್ರತಿಭಟನೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ. ಉಲ್ಲಂಘಿಸಿದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನಗರಾದಾದ್ಯಂತ ಕೆಎಸ್​​ಆರ್​ಪಿ  ನಿಯೋಜನೆ ಮಾಡಲಾಗಿದೆ.

ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ

ಇನ್ನು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೈಸೂರು, ಕಲಬುರ್ಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ಶಿವಮೊಗ್ಗ, ಹಾಸನ, ವಿಜಯಪುರ, ಹುಬ್ಬಳ್ಳಿ, ಧಾರವಾಡ ಸೇರಿ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಾಗಿದೆ. ಆಯಾ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 21ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಕಲಬುರ್ಗಿ, ತುಮಕೂರು, ಹಾಸನ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದಲೇ ನಿಷೇಧಾಜ್ಞೆ ಜಾರಿ

ಕೆಲ ಸಂಘಟನೆಗಳು ಬಂದ್​ ಮಾಡುವ ಮುನ್ಸೂಚನೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.  ಯಾವುದೇ ಧರಣಿ, ಪ್ರತಿಭಟನೆ ಅಥವಾ ಮೆರವಣಿಗೆ ಮಾಡದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಜೊತೆಗೆ ಆಯಾ ಜಿಲ್ಲೆಗಳಲ್ಲಿ ಭದ್ರತೆಯ ದೃಷ್ಟಿಯಿಂದ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಪೊಲೀಸರ ನಿಯೋಜನೆ ಮಾಡಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಕಲಬುರ್ಗಿಯಲ್ಲಿ ಶಾಲಾ-ಕಾಲೇಜಿಗೆ ರಜೆ

ಇನ್ನು, ಕಲಬುರ್ಗಿ ಜಿಲ್ಲೆಯಲ್ಲಿ ಬಂದ್ ಘೋಷಣೆಯಾದ ಹಿನ್ನೆಲೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಯಾವ ಜಿಲ್ಲೆಯಲ್ಲೂ ಸಹ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ಅಗತ್ಯ ಬಿದ್ದರೆ ಶಾಲಾ-ಕಾಲೇಜಿಗೆ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸುವ ಸಾಧ್ಯತೆ ಇದೆ.
Published by:Latha CG
First published: