Sedition Case: ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಸದ್ಯ ಪಾಕಿಸ್ತಾನದ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂಡಲೇ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಮಾಡಿದ್ದು ತಪ್ಪು. ಇದು ಪಾಕಿಸ್ತಾನ ಪರವಾಗಿ ನಡೆಸಿದ ರ್ಯಾಲಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

news18-kannada
Updated:February 20, 2020, 10:18 PM IST
Sedition Case: ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ವೇದಿಕೆಯ ಮೇಲೆ ಅಮೂಲ್ಯ
  • Share this:
ಬೆಂಗಳೂರು(ಫೆ.20): ಪೌರತ್ವ ಕಾಯ್ದೆ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ 124A, 153A, 153B, 505/2, 34 ಸೆಕ್ಷನ್ ಅಡಿಯಲ್ಲಿ ಎಫ್​​ಐಆರ್​​ ದಾಖಲಾಗಿದೆ.

ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆಯೋಜಿಸಿತ್ತು. ಈ ಪ್ರತಿಭಟನಾ ಸಭೆಯಲ್ಲಿ ಅಸಾದುದ್ದೀನ್ ಓವೈಸಿ ಪಾಲ್ಗೊಂಡಿದ್ದರು. ಪ್ರತಿಭಟನೆ ಆರಂಭವಾಗುತ್ತಿದ್ದಂತೆ ವೇದಿಕೆ ಮೇಲೆ ಬಂದ ಅಮೂಲ್ಯ ಎಂಬ ಯುವತಿ ಇದ್ದಕ್ಕಿದ್ದ ಹಾಗೆ ಪಾಕಿಸ್ತಾನ ಜಿಂದಾಬಾದ್ ಎಂದು ಎರಡು ಬಾರಿ ಘೋಷಣೆ ಕೂಗಿದ್ದಾರೆ. ಇದರಿಂದ ಕಕ್ಕಾಬಿಕ್ಕಿಯಾದ ಓವೈಸಿ, ಒಮ್ಮೆಲೆ ಯುವತಿಯಿಂದ ಮೈಕ್​ ಕಸಿದುಕೊಂಡು, ಪಾಕಿಸ್ತಾನ ಪರ ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಸದ್ಯ ಪಾಕಿಸ್ತಾನದ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂಡಲೇ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಮಾಡಿದ್ದು ತಪ್ಪು. ಇದು ಪಾಕಿಸ್ತಾನ ಪರವಾಗಿ ನಡೆಸಿದ ರ್ಯಾಲಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಗೃಹ ಸಚಿವ ಬಸವರಾಜ್​​ ಬೊಮ್ಮಾಯಿ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ಇಂತಹ ಹೇಳಿಕೆಗಳಿಂದ ಮನಸ್ಸಿಗೆ ಬಹಳ ನೋವುಂಟಾಗಿದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೇನೆ. ದೇಶದ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ಧಾರೆ.

ಇನ್ನು, ಅಮೂಲ್ಯ  ನಡೆಯನ್ನು ತಂದೆ ತಾಯಿ ವಿರೋಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರದಲ್ಲಿ ಮಾತಾಡಿದ ಅಮೂಲ್ಯ ತಂದೆ, 'ಮಗಳನ್ನು ಹೊಡೆದು ಕೈ ಕಾಲು ಮುರಿಯಿರಿ, ಅವಳು ಮಾಡಿದ್ದು ತಪ್ಪು' ಎಂದು ತೀವ್ರವಾಗಿ ಖಂಡಿಸಿದ್ದಾರೆ.
 
First published: February 20, 2020, 10:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading