Crime News: ರಾಬರ್ಟ್ ಚಿತ್ರದ ಫೈರಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ

ಹೆಚ್ಚು ಹಣ ನೀಡಿದರೆ ಹೆಚ್‌ಡಿ ಪ್ರಿಂಟ್ ನೀಡುವುದಾಗಿ ವಿಶ್ವನಾಥ್ ಹೇಳಿದ್ದಾನೆ. ಹಣ ಕೊಡುವುದಾಗಿ ಹೇಳಿ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರ ಬಳಿ ಕರೆಸಿಕೊಂಡು, ವಿಶ್ವನಾಥ್ ಎಂಬಾತನನ್ನು ಹಿಡಿದ ದರ್ಶನ್ ಅಭಿಮಾನಿಗಳು ಮಾಗಡಿ ರಸ್ತೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿ.

ಬಂಧಿತ ಆರೋಪಿ.

  • Share this:
ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ಗು ಫೈರಸಿ ಪಿಡುಗು ತಗುಲಿದೆ. ದರ್ಶನ್ ಅಭಿನಯದ ರಾಬರ್ಟ್ ಬಿಡುಗಡೆಯಾಗಿ ಎಲ್ಲೆಡೆ ಅದ್ದೂರಿ ಪ್ರದರ್ಶನ ಕಾಣುತ್ತಿದೆ. ಅದ್ರೆ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೀಗೆ ರಾಬರ್ಟ್ ಫೈರಸಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ದರ್ಶನ್ ಅಭಿಮಾನಿಗಳ ಕೈಗೆ ರೆಡ್ ಹ್ಯಾಂಡ್ ಅಗಿ ಸಿಕ್ಕಿ ಬಿದ್ದಿದ್ದಾನೆ. ರಾಬರ್ಟ್ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ದರ್ಶನ್ ಅಭಿಮಾನಿಗಳೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಎರಡೇ ದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಲೀಕ್ ಆಗಿತ್ತು. ಚಿತ್ರ ನಿರ್ಮಾಪಕರು ಈ ಬಗ್ಗೆ ತಲೆಕೆಡಿಸಿಕೊಂಡು ಫೈರಸಿ ಹಾವಳಿ ತಡೆಗಟ್ಟಲು ಮಸಲತ್ತು ನಡೆಸಿದ್ದರು. ಚಿತ್ರವನ್ನು ಸಿನಿಮಾ ಥಿಯೇಟರ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಬಿಡುತ್ತಿದ್ದ ವ್ಯಕ್ತಿಯೊಬ್ಬ ಈಗ ರೆಡ್ ಹ್ಯಾಂಡ್ ಅಗಿ ಸಿಕ್ಕಿ ಬಿದ್ದಿದ್ದಾನೆ.

ಇನ್ನೂ ಬಂಧಿತ ಆರೋಪಿ ವಿಶ್ವನಾಥ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಇದೊಂದು ದೊಡ್ಡ ಜಾಲವಾಗಿ ಬೆಳೆದಿದ್ದು, ನಾನಾ ಜಿಲ್ಲೆಯಲ್ಲಿ ಪೈರಸಿ ವಂಚಕರು ಇರುವ ಸುಳಿವು ಸಿಕ್ಕಿದೆ. ಆರೋಪಿಗಳಿಗಾಗಿ ಮಾಗಡಿ ರಸ್ತೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ರಾಬರ್ಟ್ ಚಿತ್ರವನ್ನು ನಕಲು ಮಾಡಿದ್ದ ಆರೋಪಿಗಳು, ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಇನ್‌ಸ್ಟಾಗ್ರಾಮ್ ಇತರೆ ಸಾಮಾಜಿಕ ಜಾಲ ತಾಣದಲ್ಲಿ ಹರಿದು ಬಿಟ್ಟಿದ್ದರು. ಹೆಚ್ ಡಿ ಪ್ರಿಂಟ್ ಕೇಳಿದರೆ ಹಣ ಪಡೆದು ನೀಡುತ್ತಿದ್ದರು. ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದ ಲಿಂಕ್ ಬೆನ್ನು ಬಿದ್ದ ದರ್ಶನ್ ಅಭಿಮಾನಿಯೊಬ್ಬ ಹೆಚ್‌ಡಿ ಗುಣಮಟ್ಟದ ವಿಡಿಯೋ ಕೊಡುವಂತೆ ಕೇಳಿದ್ದಾನೆ.

ಹೆಚ್ಚು ಹಣ ನೀಡಿದರೆ ಹೆಚ್‌ಡಿ ಪ್ರಿಂಟ್ ನೀಡುವುದಾಗಿ ವಿಶ್ವನಾಥ್ ಹೇಳಿದ್ದಾನೆ. ಹಣ ಕೊಡುವುದಾಗಿ ಹೇಳಿ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರ ಬಳಿ ಕರೆಸಿಕೊಂಡು, ವಿಶ್ವನಾಥ್ ಎಂಬಾತನನ್ನು ಹಿಡಿದ ದರ್ಶನ್ ಅಭಿಮಾನಿಗಳು ಮಾಗಡಿ ರಸ್ತೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಜಿ.ಟಿ. ದೇವೇಗೌಡರಿಗೆ ಜೆಡಿಎಸ್‌ ಬಾಗಿಲು ಬಂದ್‌, ಇಂತಹ ಸ್ಲೋ ಪಾಯ್ಸನ್​ಗಳ ಅಗತ್ಯ ನಮಗಿಲ್ಲ; ಕುಮಾರಸ್ವಾಮಿ ಕಿಡಿ
 ಆರೋಪಿ ವಿರುದ್ಧ ಉಮಾಪತಿ ಫಿಲಂಸ್ ಅವರ ವ್ಯವಸ್ಥಾಪಕ ಶ್ರೀಕಾಂತ್ ಎಂಬುವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವಾರು ಸಿನಿಮಾ ಲೀಕ್ ಮಾಡಿರುವುದು ಗೊತ್ತಾಗಿದೆ. ಅಲ್ಲದೇ ಈ ಸಿನಿಮಾ ಲಿಂಕ್ ಕಳಿಸುವ ಮೂಲಕ ಹಣ ಪಡೆಯುತ್ತಿದ್ದ ಸಂಗತಿ ಗೊತ್ತಾಗಿದೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ವಿಶ್ವನಾಥ್ ಮೊಬೈಲ್ ಸಂಪರ್ಕದ ಜಾಡು ಹಿಡಿದು ಇತರರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.


ಇನ್ನೂ ಫೈರಸಿ ಬಗ್ಗೆ ದಕ್ಷಿಣ ವಿಭಾಗ ಪೊಲೀಸರಿಗೆ ಮಾಗಡಿ ರಸ್ತೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ಸೇರಿ ಇನ್ನೂ ಹಲವೆಡೆ ಫೈರಸಿ ಹಾವಳಿ ಇರುವ ಬಗ್ಗೆ ಶಂಕೆ ಇದ್ದು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನೂ ದರ್ಶನ್ ಅಭಿಮಾನಿಗಳೆ ಫೈರಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಸೆರೆ ಹಿಡಿದು ಕೊಟ್ಟಿದ್ದಕ್ಕೆ ಖಾಕಿ ಪಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Published by:MAshok Kumar
First published: