ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನದ ಮೇಲೆ ಕಾಂಗ್ರೆಸ್​ ನಾಯಕರ ಕಣ್ಣು; ಹೈಕಮಾಂಡ್​​ ಬಳಿ ಭಾರೀ ಲಾಬಿ

ಹೌದು, ಸಿದ್ದರಾಮಯ್ಯ ಮತ್ತು ದಿನೇಶ್​​ ಗುಂಡೂರಾವ್​​ ರಾಜೀನಾಮೆಯಿಂದ ತೆರವಾದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರಾದರೂ ಪ್ರಬಲ ನಾಯಕರನ್ನು ತಂದು ಕೂರಿಸಬೇಕಾದ ಜವಾಬ್ದಾರಿ ಸೋನಿಯಾ ಗಾಂಧಿ ಮೇಲಿದೆ.

news18-kannada
Updated:December 15, 2019, 5:05 PM IST
ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನದ ಮೇಲೆ ಕಾಂಗ್ರೆಸ್​ ನಾಯಕರ ಕಣ್ಣು; ಹೈಕಮಾಂಡ್​​ ಬಳಿ ಭಾರೀ ಲಾಬಿ
ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್.
  • Share this:
ಬೆಂಗಳೂರು(ಡಿ.15): ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಹೀನಾಯ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ ಶಾಸಕಾಂಗ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಂತೆಯೇ ದಿನೇಶ್​ ಗುಂಡೂರಾವ್​​ ಕೂಡ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರ ರಾಜೀನಾಮೆ ಅಂಗೀಕಾರ ಆಗುವ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನಕ್ಕೆ ಹೈಕಮಾಂಡ್​​ ಬಳಿ ಕಾಂಗ್ರೆಸ್​​ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್​​, ಎಚ್​​. ಕೆ ಪಾಟೀಲ್​​, ಕೆ. ಎಚ್ ಮುನಿಯಪ್ಪ​​ ಕೆಪಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ದೆಹಲಿಯಲ್ಲೇ ಠಿಕಾಣಿ ಹೂಡಿದ್ಧಾರೆ. ಕೆ. ಎಚ್​​ ಮುನಿಯಪ್ಪ ಬೆಂಬಲಕ್ಕೆ ಬಿ.ಕೆ ಹರಿಪ್ರಸಾದ್​​ ನಿಂತಿದ್ದು, ಎಚ್​.ಕೆ ಪಾಟೀಲ್​​ ಬೆನ್ನಿಗೆ ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ್​​ ಖರ್ಗೆ ನಿಂತಿದ್ಧಾರೆ. ಈಗಾಗಲೇ ರಾಹುಲ್​​ ಭೇಟಿಗೆ ಯತ್ನಿಸಿದರೂ ವಿಫಲವಾಗಿದ್ದು, ನಾಳೆ ಸೋನಿಯಾ ಗಾಂಧಿ ಅವರನ್ನಾದರೂ ಭೇಟಿಯಾಗಬೇಕೆಂದು ದೆಹಲಿಯಲ್ಲೇ ಉಳಿದುಕೊಂಡಿದ್ಧಾರೆ.

ಹೌದು, ಸಿದ್ದರಾಮಯ್ಯ ಮತ್ತು ದಿನೇಶ್​​ ಗುಂಡೂರಾವ್​​ ರಾಜೀನಾಮೆಯಿಂದ ತೆರವಾದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರಾದರೂ ಪ್ರಬಲ ನಾಯಕರನ್ನು ತಂದು ಕೂರಿಸಬೇಕಾದ ಜವಾಬ್ದಾರಿ ಸೋನಿಯಾ ಗಾಂಧಿ ಮೇಲಿದೆ. ಈ ಸಂಬಂಧ ಕಾಂಗ್ರೆಸ್​ ಹೈಕಮಾಂಡ್​​ ಸೋನಿಯಾ ಗಾಂಧಿ ರಾಜ್ಯ ನಾಯಕರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಗಾದಿ ಮತ್ತು ಶಾಸಕಾಂಗ ಪಕ್ಷದ ಸ್ಥಾನಕ್ಕೆ ಯಾರನ್ನು ಕೂರಿಸಬಹುದು ಎಂದು ಹೈಕಮಾಂಡ್​​ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತು ಕೆ.ಸಿ ವೇಣುಗೋಪಲ್​​ಗೆ ಖುದ್ದು ಫೋನ್​ ಮಾಡಿ ಕೇಳಿದ್ದಾರೆ​.

ಮಾಜಿ ಸಚಿವ ಡಿ.ಕೆ ಶಿವಕುಮಾರ್​​​, ಎಂಬಿ ಪಾಟೀಲ್​​​​, ಕೃಷ್ಣ ಬೈರೇಗೌಡ, ಕೆ.ಎಚ್​​ ಮುನಿಯಪ್ಪ ಸೇರಿದಂತೆ ಎಚ್​​.ಕೆ ಪಾಟೀಲ್​​​​ ಕೆಪಿಸಿಸಿ ಅಧ್ಯಕ್ಷ ಮತ್ತು ಕಾಂಗ್ರೆಸ್​ ಶಾಸಕಾಂಗ ನಾಯಕನ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಪೈಕಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗಾಗಿ ಡಿ.ಕೆ ಶಿವಕುಮಾರ್​​ ಮತ್ತು ಎಂಬಿ ಪಾಟೀಲ್​​ ನಡುವೇ ನೇರ ಪೈಪೋಟಿ ಇದೆ ಎಂಬ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ‘ಕಾಂಗ್ರೆಸ್​​​ನ ರಾಹುಲ್​​, ಸೋನಿಯಾ, ಪ್ರಿಯಾಂಕಾ ಸೇರಿದಂತೆ ಎಲ್ಲರೂ ನಕಲಿ ಗಾಂಧಿಗಳು‘: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಡಿಕೆಶಿಗೆ ನೀಡಿದರೆ, ಲಿಂಗಾಯತ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಭೀತಿಯೂ ಕಾಂಗ್ರೆಸ್​​ಗೆ ಎದುರಾಗಿದೆ. ಹಾಗೆಯೇ ಒಂದು ವೇಳೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಎಂಬಿ ಪಾಟೀಲ್​​ರನ್ನು ಆಯ್ಕೆ ಮಾಡಿದರೆ, ಒಕ್ಕಲಿಗ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಭಯವೂ ಕಾಂಗ್ರೆಸ್ಸಿಗಿದೆ.

ಇನ್ನು ಕಾಂಗ್ರೆಸ್​ನ ನಿಷ್ಠಾವಂತ ಕಾರ್ಯಕರ್ತರಾದ ಕೃಷ್ಣ ಬೈರೇಗೌಡರು ಕೆಪಿಸಿಸಿ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ದಲಿತ ನಾಯಕರಾಗಿರುವ ಮಾಜಿ ಸಂಸದ ಕೆ.ಎಚ್​ ಮುನಿಯಪ್ಪ​ ಕೂಡ ಕೆಪಿಸಿಸಿ ಜವಾಬ್ದಾರಿ ಹೊರುವ ಕನಸ್ಸು ಹೊತ್ತಿದ್ದಾರೆ. ಈ ನಡುವೆ ಸಂಸದ ಪ್ರಕಾಶ ಹುಕ್ಕೇರಿಯೂ ತಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಇಷ್ಟರ ಮಧ್ಯೆ ಕಾಂಗ್ರೆಸ್​ನೊಳಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಲಿತ, ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ ಬದಲಿಗೆ ಕುರುಬರೊಬ್ಬರಿಗೆ ನೀಡಬೇಕೆಂಬ ಒತ್ತಾಯವೂ ಕೇಳಿ ಬಂದಿದೆ.
First published:December 15, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ