ಕಾರ್ಮಿಕ-ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಎತ್ತಂಗಡಿ; ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ನೇಮಕ

ಈ ವರೆಗೆ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯಾಗಿದ್ದ ಮಣಿವಣ್ಣನ್ ರನ್ನು ವರ್ಗಾವಣೆ ಮಾಡಲಾಗಿದೆಯಾದರೂ, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.

news18-kannada
Updated:May 12, 2020, 8:29 AM IST
ಕಾರ್ಮಿಕ-ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಎತ್ತಂಗಡಿ; ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ನೇಮಕ
ಪಿ ಮಣಿವಣ್ಣನ್.
  • Share this:
ಬೆಂಗಳೂರು (ಮೇ 12); ಕಾರ್ಮಿಕ ಇಲಾಖೆ ಮತ್ತು ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಎಂ.‌ಮಹೇಶ್ವರ್ ರಾವ್ ರನ್ನು ಈ‌ ಎರಡು ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಹೇಶ್ವರ್ ರಾವ್ ಈ ಹಿಂದೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈಗ ಹೆಚ್ಚುವರಿಯಾಗಿ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ನೀಡಲಾಗಿದೆ. ಇದರ ಜೊತೆಗೆ ಅವರು ಪ್ರಧಾನ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿಭಾಯಿಸಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಈ ವರೆಗೆ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯಾಗಿದ್ದ ಮಣಿವಣ್ಣನ್ ರನ್ನು ವರ್ಗಾವಣೆ ಮಾಡಲಾಗಿದೆಯಾದರೂ, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಸರ್ಕಾರದ ಈ ನಡೆ ಸಾಮಾನ್ಯವಾಗಿ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ : ಔರಂಗಾಬಾದ್ ರೈಲು ದುರಂತದ ಬಳಿಕ ಎಚ್ಚೆತ್ತ ಕೇಂದ್ರ ಗೃಹ ಇಲಾಖೆ; ವಲಸೆ ಕಾರ್ಮಿಕರ ಸಾರಿಗೆ ವ್ಯವಸ್ಥೆಗೆ ಸೂಚನೆ
First published: May 12, 2020, 7:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading