Actress Death: ಗೀತಾ, ದೊರೆಸಾನಿ ಧಾರಾವಾಹಿಗಳಲ್ಲಿ ಮಿಂಚಿದ್ದ ನಟಿ ದುರ್ಮರಣ! ಫ್ಯಾಟ್ ಸರ್ಜರಿ ವೇಳೆ ಚೇತನಾ ರಾಜ್ ಸಾವು
ಫ್ಯಾಟ್ ಸರ್ಜರಿ ನಡೆಯುವಾಗಲೇ ಚೇತನಾ ಸಾವನ್ನಪ್ಪಿದ್ದಾರಂತೆ. ಪ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದ ಒಳಕ್ಕೆ ನೀರಿನ ಅಂಶ ಶೇಖರಣೆಯಾಗಿ ಕೂಡಲೇ ಚೇತನಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಫ್ಯಾಟ್ ಸರ್ಜರಿಗೆ ಬೇಕಾದ ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿಗೆ ವೈದ್ಯರು ಮುಂದಾಗಿದ್ದರು ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರು: ಕನ್ನಡ ಕಿರುತೆರೆ (Kannada Serials) ಮತ್ತು ಕನ್ನಡ ಚಿತ್ರರಂಗಕ್ಕೆ (Kannada Film Industry) ಮತ್ತೊಂದು ಆಘಾತ ಎದುರಾಗಿದೆ. ಪವರ್ ಸ್ಟಾರ್ (Power Star) ಪುನೀತ್ ರಾಜ್ಕುಮಾರ್ (Puneeth Rajkumar) ಅವರ ನಿಧನದ ಆಘಾತದಿಂದ ಇನ್ನೂ ಕನ್ನಡ ಚಿತ್ರರಂಗ ಹಾಗೂ ಕಲಾವಿದರು (Artist) ಚೇತರಿಸಿಕೊಂಡಿಲ್ಲ. ಅದರ ಮೇಲೆ ಮತ್ತೆ ಮತ್ತೆ ಕಲಾವಿದರಿಗೆ ಆಘಾತದ ಮೇಲೆ ಆಘಾತಗಳು ಆಗುತ್ತಲೇ ಇವೆ. ಇದೀಗ ಕನ್ನಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಯುವ ನಟಿಯೊಬ್ಬರು (Actress) ಮೃತಪಟ್ಟಿದ್ದಾರೆ. ಧಾರಾವಾಹಿ ನಟಿ (Serial Actress) ಚೇತನಾ ರಾಜ್ (Chratana Raj) ಎಂಬುವರು ನಿಧನರಾಗಿದ್ದಾರೆ. ಫ್ಯಾಟ್ ಸರ್ಜರಿ (Fat Surgery) ವೇಳೆ ಆಸ್ಪತ್ರೆಯಲ್ಲೇ (Hospital) ಚೇತನಾ ಸಾವನ್ನಪ್ಪಿದ್ದು, ವೈದ್ಯರ (Doctor) ವಿರುದ್ಧ ಮೃತಳ ಕುಟುಂಬಸ್ಥರು (Family) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿರುತೆರೆ ಯುವ ನಟಿ ಚೇತನಾ ರಾಜ್ ಸಾವು
ಕನ್ನಡ ಕಿರುತೆರೆಯ ಯುವ ನಟಿ ಚೇತನಾ ರಾಜ್ ಎಂಬುವರು ಇಂದು ಸಾವನ್ನಪ್ಪಿದ್ದಾರೆ. 21 ವರ್ಷದ ಚೇತನಾ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ವಾಸವಿದ್ದರು. ಇದೀಗ ನವರಂಗ ಸರ್ಕಲ್ನ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಚೇತನಾ ಕೊನೆಯುಸಿರೆಳೆದಿದ್ದಾರೆ.
ಫ್ಯಾಟ್ ಸರ್ಜರಿ ವೇಳೆ ಚೇತನಾ ಸಾವು
ಚೇತನಾ ರಾಜ್ ಫ್ಯಾಟ್ ಸರ್ಜರಿಗೆ ಒಳಗಾಗಿದ್ದರು ಎನ್ನಲಾಗಿದೆ. ಬೆಂಗಳೂರಿನ ನವರಂಗ ಸರ್ಕಲ್ನ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಚೇತನಾ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಫ್ಯಾಟ್ ಸರ್ಜರಿ ನಡೆಯುವಾಗಲೇ ಚೇತನಾ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಫ್ಯಾಟ್ ಸರ್ಜರಿ ನಡೆಯುವಾಗಲೇ ಚೇತನಾ ಸಾವನ್ನಪ್ಪಿದ್ದಾರಂತೆ. ಪ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದ ಒಳಕ್ಕೆ ನೀರಿನ ಅಂಶ ಶೇಖರಣೆಯಾಗಿ ಕೂಡಲೇ ಚೇತನಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಫ್ಯಾಟ್ ಸರ್ಜರಿಗೆ ಬೇಕಾದ ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿಗೆ ವೈದ್ಯರು ಮುಂದಾಗಿದ್ದರು ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.
ಆಸ್ಪತ್ರೆ ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಚೇತನಾ ಸಾವಿನಿಂದ ಆಕೆಯ ಪೋಷಕರು ಕಂಗಾಲಾಗಿದ್ದಾರೆ. ಕಿರುತೆರೆ, ಹಿರಿತೆರೆಯಲ್ಲಿ ಮಿಂಚುತ್ತಿದ್ದ ಮಗಳು ಇನ್ನಿಲ್ಲ ಎಂಬ ಸುದ್ದಿ ತಿಳಿದು ಆಘಾತಕ್ಕೆ ಒಳಗಾಗಿದ್ದಾರೆ. ಮಗಳ ಸಾವಿಗೆ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯ ವೈದ್ಯರು ಕಾರಣ ಅಂತ ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಮಗಳ ಸಾವಾಗಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿರುತೆರೆ, ಹಿರಿತೆರೆಯಲ್ಲಿ ಕಾಣಿಸಿಕೊಂಡಿದ್ದ ಚೇತನಾ ರಾಜ್
ಯುವ ಕಿರುತೆರೆ ನಟಿ ಚೇತನ ರಾಜ್ ಕೆಲ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಸದ್ಯ ಕಲರ್ಸ್ ಕನ್ನಡದಲ್ಲಿ ಬರುತ್ತಿರುವ ಗೀತಾ, ದೊರೆಸಾನಿ ಜೊತೆಗೆ ಒಲವಿನ ನಿಲ್ದಾಣ ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು. ಅಲ್ಲದೇ ಇನ್ನೂ ಬಿಡುಗಡೆಯಾಗದ ಹವಾಯಾಮಿ ಎಂಬ ಹೊಸ ಸಿನಿಮಾದಲ್ಲೂ ನಟನೆ ಮಾಡಿದ್ದರು.
ಅತ್ತ ಮೊನ್ನೆಯಷ್ಟೇ ಬಂಗಾಳಿಯ ಖ್ಯಾತ ನಟಿ ಕಿರುತೆರೆ ನಟಿ ಪಲ್ಲವಿ ಡೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಂಗಾಳಿ ಕಿರುತೆರೆಯಲ್ಲಿ ಸಾಕಷ್ಟು ಸೀರಿಯಲ್ ಮೂಲಕ ಅಪಾರ ಅಭಿಮಾನಿಗಳ ಬಳಗ ಸಂಪಾದಿಸಿದ್ದ ನಟಿ ಪಲ್ಲವಿ ಡೇ ಸಾವು ಕಿರುತೆರೆ ಲೋಕಕ್ಕೆ ಆಘಾತ ತಂದಿತ್ತು. ಕೋಲ್ಕತ್ತಾದ ಗರ್ಫಾದ ತಮ್ಮ ಫ್ಲಾಟ್ ನಲ್ಲಿ ನಟಿ ಪಲ್ಲವಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಹೇಳಿರುವ ಮಾಹಿತಿ ಪ್ರಕಾರ ಪಲ್ಲವಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ ಕಾರಣ ತಿಳಿದುಬಂದಿರಲಿಲ್ಲ. ಇದೀಗ ಆ ಬಗ್ಗೆ ತನಿಖೆ ನಡೆಯುತ್ತಿದೆ.
Published by:Annappa Achari
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ