• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 7 ಮಂದಿಯ ಬಗ್ಗೆ ಇಲ್ಲಿದೆ ಕಿರುಪರಿಚಯ!

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 7 ಮಂದಿಯ ಬಗ್ಗೆ ಇಲ್ಲಿದೆ ಕಿರುಪರಿಚಯ!

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು.

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು.

ಹೆಚ್​. ನಾಗೇಶ್​. ನಾಗೇಶ್​ ರಾಜೀನಾಮೆ ನೀಡಿದ ನಂತರವೇ ಎಲ್ಲಾ ಶಾಸಕರೂ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು. ಹೀಗಾಗಿ ಮುಂದಿನ ಮೂರೂವರೆ ವರ್ಷಕ್ಕೂ ಅವರನ್ನು ಸಚಿವರನ್ನಾಗಿ ಮುಂದುವರೆಸುವ ಮಾತು ನೀಡಲಾಗಿತ್ತು. ಆದರೆ, ಇದೀಗ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಸೂಚಿಸಿದ್ದಾರೆ. 

ಮುಂದೆ ಓದಿ ...
 • Share this:

  ಬೆಂಗಳೂರು; ಇನ್ನೆನು ಕೆಲವೇ ಕ್ಷಣಗಳಲ್ಲಿ ಏಳು ಮಂದಿ ಶಾಸಕರು ಬಿಎಸ್ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸೇರ್ಪಡೆಯಾಗಿದ್ದಾರೆ. 3.50ಕ್ಕೆ ರಾಜಭವನದ ಗಾಜಿನ ಅರಮನೆಯಲ್ಲಿ ನೂತನ ಸಚಿವರಿಗೆ ರಾಜ್ಯಪಾವ ವಿ.ಆರ್.ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಎಲ್ಲಾ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಲ್ಲಿ ನಾಲ್ಕು ಮಂದಿ ವಿಧಾನಸಭಾ ಸದಸ್ಯರಾಗಿದ್ದರೆ ಉಳಿದ ಮೂರು ಮಂದಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದವರು.


  ಎಂಟಿಬಿ ನಾಗರಾಜ್, ಆರ್. ಶಂಕರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿ.ಪಿ. ಯೋಗೇಶ್ವರ್, ಎಸ್. ಅಂಗಾರ ಹಾಗೂ ಅರವಿಂದ ಲಿಂಬಾವಳಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


  ಉಮೇಶ್ ಕತ್ತಿ


  ಹುಕ್ಕೇರಿ ಕ್ಷೇತ್ರದ ಶಾಸಕರಾಗಿರುವ ಉಮೇಶ್‌ ಕತ್ತಿ ಬಿಜೆಪಿಯ ಹಿರಿಯ ಶಾಸಕರೂ ಹೌದು. ಲಿಂಗಾಯತ ಸಮುದಾಯದವರಾದ ಕತ್ತಿ. ಈವರೆಗೆ 9 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 8 ಬಾರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ 3 ಬಾರಿ ಸಚಿವ ಸ್ಥಾನ ನಿಭಾಯಿಸಿದ್ದ ಕತ್ತಿ, ಇದೀಗ ನಾಲ್ಕನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


  ಮುರುಗೇಶ್ ನಿರಾಣಿ


  ಬೀಳಗಿ ಕ್ಷೇತ್ರದ ಶಾಸಕರಾಗಿರುವ ಮುರುಗೇಶ್ ನಿರಾಣಿ ಈವರೆಗೆ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ನಿರಾಣಿ ಈ ಹಿಂದೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.


  ಎಸ್. ಅಂಗಾರ


  ದಕ್ಷಿಣಕ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕರಾದ ಎಸ್​. ಅಂಗಾರ ಪರಿಶಿಷ್ಟ ಜಾತಿಯವರು, ಈವರೆಗೆ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಂಗಾರ. ಇದೇ ಮೊದಲ ಬಾರಿಗೆ ಸಚಿವರಾಗಿ ಅಧಿಕಾರ ಹಿಡಿಯುತ್ತಿದ್ದಾರೆ.


  ಅರವಿಂದ ಲಿಂಬಾವಳಿ


  ಮಹದೇವಪುರ ಕ್ಷೇತ್ರದ ಶಾಸಕರಾದ ಅರವಿಂದ್‌ ಲಿಂಬಾವಳಿ ಬೋವಿ ಸಮುದಾಯದವರು. ಈ ಹಿಂದೆ 2 ಬಾರಿ ಸಚಿವ ಸ್ಥಾನ ನಿಭಾಯಿಸಿದ ಅನುಭವ ಇವರಿಗಿದೆ. 35 ವರ್ಷಗಳಿಂದ ಆರ್​ಎಸ್​ಎಸ್ ನಿಕಟ ಸಂಪರ್ಕ ಹೊಂದಿದ್ದಾರೆ.​


  ಎಂಟಿಬಿ ನಾಗರಾಜ್


  ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿರುವ ಎಂಟಿಬಿ ನಾಗರಾಜ್ ಕುರುಬ ಸಮುದಾಯದವರು. ಈವರೆಗೆ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನಾಗರಾಜ್‌ ಕಳೆದ ಹೊಸಕೋಟೆ ಉಪಚುನಾವಣೆಯಲ್ಲಿ ಸೋಲನುಭವಿಸಿದ್ದರು. ಬಳಿಕ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ವಸತಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಇವರಿಗಿದೆ.


  ಆರ್. ಶಂಕರ್


  ವಿಧಾನ ಪರಿಷತ್‌ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಆರ್. ಶಂಕರ್‌, 2018ರಲ್ಲಿ ಮೊದಲ ಬಾರಿಗೆ ಪಕ್ಷೇತರರಾಗಿ ವಿಧಾನಸಭೆ ಆಯ್ಕೆಯಾಗಿದ್ದರು. ಬಳಿಕ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಶಂಕರ್‌ಗೆ ಇದೀಗ ಸಚಿವ ಸ್ಥಾನ ಒಲಿದು ಬಂದಿದೆ.


  ಸಿ.ಪಿ.ಯೋಗೇಶ್ವರ್


  ಈ ಹಿಂದೆ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಯೋಗೇಶ್ವರ್‌, ಒಂದು ಬಾರಿ ಅರಣ್ಯ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸದ್ಯ ವಿಧಾನ ಪರಿಷತ್‌ ಸದಸ್ಯರಾಗಿರುವ ಯೋಗೇಶ್ವರ್‌ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಇಂದು ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


  ಇದನ್ನು ಓದಿ: 6 ಬಾರಿ ಶಾಸಕರಾಗಿ ಆಯ್ಕೆಯಾದ ಸುಳ್ಯದ ಅಂಗಾರಗೆ ಮಂತ್ರಿ ಪಟ್ಟ; ಖುಷಿ ಮೂಡ್ ನಲ್ಲಿ ಜಿಲ್ಲೆಯ ಜನತೆ


  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸಹ ಭುಗಿಲೆದ್ದಿದೆ. ಈಗಾಗಲೇ ಹಲವು ಶಾಸಕರು ತಮಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಸಿಎಂ ಬಿಎಸ್​ವೈ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇನ್ನುಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮುನಿರತ್ನ ಅವರಿಗೂ ಈ ಬಾರಿ ಅವಕಾಶ ನೀಡಲಾಗಿಲ್ಲ.


  ಹೆಚ್​. ನಾಗೇಶ್​ ಕೋಲಾರ ಭಾಗದ ಪ್ರಮುಖ ದಲಿತ ನಾಯಕ. ಅಲ್ಲದೆ, ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರದ ವಿರುದ್ಧ ರಾಜೀನಾಮೆ ನೀಡಿ ಬಿಜೆಪಿಗೆ ಮೊದಲು ಸೇರ್ಪಡೆಯಾಗಿದ್ದೇ ಹೆಚ್​. ನಾಗೇಶ್​. ನಾಗೇಶ್​ ರಾಜೀನಾಮೆ ನೀಡಿದ ನಂತರವೇ ಎಲ್ಲಾ ಶಾಸಕರೂ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು. ಹೀಗಾಗಿ ಮುಂದಿನ ಮೂರೂವರೆ ವರ್ಷಕ್ಕೂ ಅವರನ್ನು ಸಚಿವರನ್ನಾಗಿ ಮುಂದುವರೆಸುವ ಮಾತು ನೀಡಲಾಗಿತ್ತು. ಆದರೆ, ಇದೀಗ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸ್ವತ

  Published by:HR Ramesh
  First published: