ಬೆಂಗಳೂರು ನಗರ ಕಸಾಪ ಅಧ್ಯಕ್ಷ ಮಾಯಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ


Updated:February 27, 2018, 11:11 AM IST
ಬೆಂಗಳೂರು ನಗರ ಕಸಾಪ ಅಧ್ಯಕ್ಷ ಮಾಯಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
  • Share this:
-ಥಾಮಸ್ ಪುಷ್ಪರಾಜ್, ನ್ಯೂಸ್ 18 ಕನ್ನಡ

ಬೆಂಗಳೂರು(ಫೆ.26): ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ವಿವಾಹಿತ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಮಾಯಣ್ಣ ಮದುವೆಯಾಗೋದಾಗಿ ನಂಬಿಸಿ ನನ್ನನ್ನ ಗಂಡನಿಂದ ಬೇರ್ಪಡಿಸಲು ಯತ್ನಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬಿಬಿಎಂಪಿಯಲ್ಲಿ ಗುಮಾಸ್ತರಾಗಿರುವ ಮಾಯಣ್ಣ ವಿರುದ್ಧ ಬಿಬಿಎಂಪಿಯಲ್ಲಿ ಗುತ್ತಿಗೆ ನೌಕರರಾಗಿದ್ದ ಮಹಿಳೆ ಆರೋಪಿಸಿದ್ದಾರೆ.

ಈ ಬಗ್ಗೆ ನ್ಯೂಸ್ 18 ಕನ್ನಡಕ್ಕೆ ಪ್ರತಿಕ್ರಿಯಿಸಿರುವ ಮಾಯಣ್ಣ, ಆಕೆ ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ. 18 ಲಕ್ಷ ರೂ. ಹಣ ಕೊಟ್ಟಿದ್ದೇನೆ. ಹಣವನ್ನ ವಾಪಸ್ ಕೇಳಿದ್ದಕ್ಕೆ ನನ್ನ ಮೇಲೆ ಈ ಆರೋಪ ಮಾಡಿದ್ಧಾರೆ. ಜೊತೆಗೆ ಆಕೆಎ ಬೇರೊಬ್ಬ ನವೀನ್ ಎಂಬುವವನ ಜೊತೆ ಸಂಬಂದ ಇರುವುದನ್ನ ಪ್ರಶ್ನಿಸಿದ್ದಕ್ಕೆ ನನ್ನ ವಿರುದ್ಧ ಈ ರೀತಿಯ ಆರೋಪ ಮಾಡಿದ್ದಾಳೆ ಎಂದು ತಿಳಿಸಿದ್ಧಾರೆ.

 
First published:February 26, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading