ವಿಷ್ಣುವರ್ಧನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ : ವಿಷ್ಣು ಓದಿದ ಶಾಲೆಗೆ ಬೀಳಲಿದೆ ಬೀಗ!

news18
Updated:January 6, 2018, 12:28 PM IST
ವಿಷ್ಣುವರ್ಧನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ : ವಿಷ್ಣು ಓದಿದ ಶಾಲೆಗೆ ಬೀಳಲಿದೆ ಬೀಗ!
  • News18
  • Last Updated: January 6, 2018, 12:28 PM IST
  • Share this:
- ನಳಿನಾಕ್ಷಿ ಕಾರಳ್ಳಿ, ನ್ಯೂಸ್ 18 ಕನ್ನಡ

ಬೆಂಗಳೂರು(ಜ.06) : ಚಾಮರಾಜಪೇಟೆಯಲ್ಲಿರುವ ನಟ ಡಾ. ವಿಷ್ಣುವರ್ಧನ್ ಓದಿದ  ಸರ್ಕಾರಿ ಅನುದಾನಿತ ಮಾಡಲ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿಯಲು ಸರ್ಕಾರ ಮುಂದಾಗಿದೆ.

ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಹಲವು ಬಾರಿ ಶಿಕ್ಷಕರನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದ್ರೂ ಸರ್ಕಾರ ಶಿಕ್ಷಕರ ನೇಮಕಕ್ಕೆ ಮುಂದಾಗದ ಕಾರಣ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ ಹಾಗಾಗಿ ಈ ಶಾಲೆಯನ್ನು ಮುಚ್ಚಲು ಮುಂದಾಗಿದೆ ಎನ್ನಲಾಗಿದೆ.

ಇದಲ್ಲದೇ 2 ತಿಂಗಳ ಹಿಂದೆ ಪ್ರೌಢಶಾಲೆಯನ್ನು ಮುಚ್ಚಿದ್ದ ಸರ್ಕಾರ ಈಗ ಮಕ್ಕಳ ಕೊರತೆಯನ್ನೇ ನೆಪವಾಗಿಟ್ಟುಕೊಂಡು ಪ್ರಾಥಮಿಕ ಶಾಲೆಯನ್ನು ಮುಚ್ಚಲು ಮುಂದಾಗಿದೆ ಎನ್ನಲಾಗಿದೆ.

ಅಂದ ಹಾಗೇ ಈ ಹಿಂದೆ ಈ ಶಾಲೆಗೆ ಸೇರಬೇಕಾದ್ರೆ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರಬೇಕಿತ್ತು ಅಥವಾ ರಾಜಕಾರಣಿಗಳ  ಶಿಫಾರಸ್ಸು ಪತ್ರ ಬೇಕಿತ್ತು ಅಂತಹ ಶಾಲೆಗೆ ಈಗ ಎಂತ ದುರ್ಗತಿ ಬಂದಿದೆ ನೋಡಿ ಅಂತ ಜನರು ಮರುಕ ವ್ಯಕ್ತಪಡಿಸುತ್ತಿದ್ದಾರೆ.
First published:January 6, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading