ಆಪರೇಷನ್ ಕಮಲ ಆಡಿಯೋ ಕೇಸ್; ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಜನವರಿಗೆ ಮುಂದೂಡಿಕೆ

ಎಚ್​.ಡಿ. ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ದೇವದುರ್ಗದ ಐಬಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರಿಂದ ರಾಜೀನಾಮೆ ಕೊಡಿಸುವಂತೆ ಶಾಸಕರ ಶರಣಗೌಡಗೆ ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

news18-kannada
Updated:December 16, 2019, 11:49 AM IST
ಆಪರೇಷನ್ ಕಮಲ ಆಡಿಯೋ ಕೇಸ್; ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಜನವರಿಗೆ ಮುಂದೂಡಿಕೆ
ಶರಣಗೌಡ ಕಂದಕೂರ್- ಸಿಎಂ ಯಡಿಯೂರಪ್ಪ
  • Share this:
ಕಲಬುರ್ಗಿ (ಡಿ. 16): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲದ ಆಡಿಯೋ ಕೇಸ್​ ಪ್ರಕರಣದ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ. ಬಿಎಸ್​ವೈ ಆಡಿಯೋ ಕೇಸ್​ ಪ್ರಕರಣದ ತಡೆಯಾಜ್ಞೆಗೆ ತೆರವು ಕೋರಿ ಕಲಬುರ್ಗಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದ ಶರಣಗೌಡ ಕಂದಕೂರ ಅವರ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ.

ಎಚ್​.ಡಿ. ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ದೇವದುರ್ಗದ ಐಬಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರಿಂದ ರಾಜೀನಾಮೆ ಕೊಡಿಸುವಂತೆ ಶಾಸಕರ ಶರಣಗೌಡಗೆ ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಹೈಕೋರ್ಟ್​ನಲ್ಲಿ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಮಹಮದ್ ನವಾಜ್ ಅವರಿದ್ದ ಪೀಠ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ.

ಈ ಪ್ರಕರಣದ ತನಿಖೆ ನಡೆಯದಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಬಿಎಸ್​ವೈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಈ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಆ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಶರಣಗೌಡ ಕಂದಕೂರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆಪರೇಷನ್ ಕಮಲ ನಡೆಸಲು ಹಣದ ಆಮಿಷವೊಡ್ಡಿದ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಶಂಕರಗೌಡ ಕಂದಕೂರ ದೂರು ದಾಖಲಿಸಿದ್ದರು. ಬಿ.ಎಸ್. ಯಡಿಯೂರಪ್ಪ, ಶಾಸಕ ಶಿವನಗೌಡ ನಾಯಕ್, ಪ್ರೀತಂ ಗೌಡ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿದಾಗ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿತ್ತು. ಇದೀಗ ಯಡಿಯೂರಪ್ಪ ಸಿಎಂ ಆದ ನಂತರ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಸಿಎಂ ಬಿಎಸ್​ವೈ ಆಪರೇಷನ್ ಕಮಲ ವಿವಾದ; ಇಂದೇ ಕಲಬುರ್ಗಿ ಹೈಕೋರ್ಟ್​ನಿಂದ ತೀರ್ಪು ಪ್ರಕಟ ಸಾಧ್ಯತೆ

ತಮ್ಮ ತಂದೆ ನಾಗನಗೌಡ ಕಂದಕೂರ ಅವರಿಂದ ರಾಜೀನಾಮೆ ಕೊಡಿಸಿದಲ್ಲಿ 10 ಕೋಟಿ ರೂ. ಕೊಡೋದಾಗಿ ಯಡಿಯೂರಪ್ಪ ಆಮಿಷವೊಡ್ಡಿದ್ದರು ಎಂದು ಆರೋಪಿಸಿ ಶರಣಗೌಡ ಕಂದಕೂರ ಅವರು ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ದೇವದುರ್ಗ ಐಬಿಯಲ್ಲಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಶಿವನಗೌಡ ನಾಯಕ್, ಪ್ರೀತಮ್ ಗೌಡ ಮೊದಲಾದವರು ತನ್ನೊಂದಿಗೆ ಮಾತನಾಡಿದ ಸಂಭಾಷಣೆಗಳನ್ನು ಶರಣಗೌಡ ಕಂದಕೂರು ರೆಕಾರ್ಡ್ ಮಾಡಿಕೊಂಡಿದ್ದರು. ಈ ರೆಕಾರ್ಡ್ ಆದ ಆಡಿಯೋವನ್ನು ಆಗಿನ ಸಿಎಂ ಕುಮಾರಸ್ವಾಮಿ ಅವರು ಮರುದಿನ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದರು. ಆ ನಂತರ, ಶರಣಗೌಡ ಅವರು ಇಷ್ಟೂ ಜನರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
First published:December 16, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading