ಬಿಜೆಪಿಯಿಂದ ಶರತ್ ಬಚ್ಚೇಗೌಡ, ಕವಿರಾಜ್ ಅರಸ್ ಉಚ್ಛಾಟನೆ

ಹೊಸಕೋಟೆ ಮತ್ತು ವಿಜಯನಗರದಲ್ಲಿ ಅಧಿಕೃತ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಮತ್ತು ಕವಿರಾಜ್ ಅರಸ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಉಚ್ಛಾಟಿಸಲಾಗಿದೆ.

news18
Updated:November 21, 2019, 5:59 PM IST
ಬಿಜೆಪಿಯಿಂದ ಶರತ್ ಬಚ್ಚೇಗೌಡ, ಕವಿರಾಜ್ ಅರಸ್ ಉಚ್ಛಾಟನೆ
ಶರತ್ ಬಚ್ಚೇಗೌಡ
  • News18
  • Last Updated: November 21, 2019, 5:59 PM IST
  • Share this:
ಬೆಂಗಳೂರು(ನ. 20): ನಿರೀಕ್ಷೆಯಂತೆ ಶರತ್ ಬಚ್ಚೇಗೌಡ ಅವರನ್ನು ಬಿಜೆಪಿ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಠಿಸಿದೆ. ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಸ್ಪರ್ಧಿಸಿದ ಕಾರಣಕ್ಕೆ ಶರತ್ ಬಚ್ಚೇಗೌಡ ಮತ್ತು ಕವಿರಾಜ್ ಅರಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವುದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಇಬ್ಬರಿಗೂ ಉಚ್ಛಾಟನೆ ಆದೇಶ ಹೊರಡಿಸಿದ್ದಾರೆ.

ಹೊಸಕೋಟೆಯಲ್ಲಿ ಕಾಂಗ್ರೆಸ್​ನಿಂದ ಬಂದಿರು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದನ್ನು ವಿರೋಧಿಸಿ ಇಲ್ಲಿಯ ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಅವರು ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ಧಾರೆ. ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಇವತ್ತು ಬೆಳಗ್ಗೆಯವರೆಗೂ ಬಿಜೆಪಿ ನಾಯಕರು ಮಾಡಿದ ಪ್ರಯತ್ನ ಫಲಕೊಡಲಿಲ್ಲ. ಶರತ್ ಬಚ್ಚೇಗೌಡ ತಮ್ಮ ನಿಲುವಿಗೆ ಅಚಲವಾಗಿದ್ಧಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಛಾಟಿಸಲಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡ ಅವರ ಮಗ ಶರತ್ ಬಚ್ಚೇಗೌಡ ಅವರು ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ: 12 ಕ್ಷೇತ್ರಗಳಲ್ಲೂ ಬಿಜೆಪಿ, ಕಾಂಗ್ರೆಸ್ ವಿರುದ್ಧ ನೇರ ಪೈಪೋಟಿ ಮಾಡುತ್ತೇವೆ; ಎಚ್​.ಡಿ.ದೇವೇಗೌಡ

ಇನ್ನು, ಹೊಸಪೇಟೆ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾಗಿರುವ ಕವಿರಾಜ್ ಅರಸ್ ಅವರು ವಿಜಯನಗರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಆನಂದ್ ಸಿಂಗ್ ವಿರುದ್ಧವಾಗಿ ಪಕ್ಷೇತರರಾಗಿ ಸ್ಪರ್ಧಿಸಿದ್ಧಾರೆ. ಈ ಕಾರಣಕ್ಕೆ ಅವರನ್ನೂ ಉಚ್ಛಾಟಿಸಲಾಗಿದೆ.

15 ಕ್ಷೇತ್ರಗಳಿಗೆ ನಡೆಯುತ್ತಿರುವ ಈ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಸರ್ಕಾರ ಉಳಿಸಿಕೊಳ್ಳಲು ಕನಿಷ್ಠ 8 ಸ್ಥಾನಗಳನ್ನಾದರೂ ಗೆಲ್ಲುವ ಒತ್ತಡದಲ್ಲಿದೆ.

(ವರದಿ: ಶ್ರೀನಿವಾಸ ಹಳಕಟ್ಟಿ)
First published: November 21, 2019, 5:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading